- Kannada News Photo gallery Cricket photos IPL 2026 auction: purse and slots remaining for all 10 teams
IPL 2026: ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜು ಅಬುಧಾಬಿಯಲ್ಲಿ ನಡೆಯಲಿದೆ. ಡಿಸೆಂಬರ್ 16 ರಂದು ಜರುಗಲಿರುವ ಈ ಹರಾಜಿನ ಮೂಲಕ ಗರಿಷ್ಠ 77 ಆಟಗಾರರಿಗೆ ಅವಕಾಶ ಸಿಗಲಿದೆ. ಅಂದರೆ 10 ತಂಢಗಳಲ್ಲಿ ಒಟ್ಟು 77 ಸ್ಲಾಟ್ಗಳು ಮಾತ್ರ ಖಾಲಿಯಿದ್ದು, ಈ ಸ್ಥಾನಗಳಿಗಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ.
Updated on: Nov 17, 2025 | 11:53 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜು ಇಂದು (ಡಿ.16) ನಡೆಯಲಿದೆ. 10 ಫ್ರಾಂಚೈಸಿಗಳ ನಡುವೆ ನಡೆಯಲಿರುವ ಈ ಹರಾಜಿನಲ್ಲಿ ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಚೆನ್ನೈ ಸೂಪರ್ ಕಿಂಗ್ಸ್: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಹರಾಜಿಗೂ ಮುನ್ನ 12 ಆಟಗಾರರನ್ನು ಬಿಡುಗಡೆ ಮಾಡಿದೆ. ಅದರಂತೆ ಇದೀಗ 43.40 ಕೋಟಿ ರೂ. ಹರಾಜು ಮೊತ್ತ ಹೊಂದಿರುವ ಸಿಎಸ್ಕೆ ಒಟ್ಟು 9 ಆಟಗಾರರನ್ನು ಖರೀದಿಸಬಹುದು. ಇದರಲ್ಲಿ ನಾಲ್ವರು ವಿದೇಶಿ ಆಟಗಾರರನ್ನು ಆಯ್ಕೆ ಮಾಡಬಹುದು. ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 5 ಭಾರತೀಯ ಹಾಗೂ 4 ವಿದೇಶಿ ಆಟಗಾರರನ್ನು ಆಯ್ಕೆ ಮಾಡಲು ಅವಕಾಶವಿದೆ.

ಮುಂಬೈ ಇಂಡಿಯನ್ಸ್: ಮಿನಿ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಒಟ್ಟು 10 ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಇದೀಗ 20 ಆಟಗಾರರನ್ನು ಹೊಂದಿರುವ ಮುಂಬೈ ಇಂಡಿಯನ್ಸ್ಗೆ ಇನ್ನೂ 5 ಪ್ಲೇಯರ್ಸ್ಗಳನ್ನು ಆಯ್ಕೆ ಮಾಡಲು ಅವಕಾಶವಿದೆ. ಅದರಂತೆ 2.75 ಕೋಟಿ ರೂ. ಹರಾಜು ಮೊತ್ತದಲ್ಲಿ ಮುಂಬೈ ಇಂಡಿಯನ್ಸ್ ನಾಲ್ವರು ಭಾರತೀಯರು ಹಾಗೂ ಓರ್ವ ವಿದೇಶಿ ಆಟಗಾರನನ್ನು ಖರೀದಿಸಬಹುದು.

ಸನ್ರೈಸರ್ಸ್ ಹೈದರಾಬಾದ್: ಎಸ್ಆರ್ಹೆಚ್ ಫ್ರಾಂಚೈಸಿಯು 10 ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಅದರಂತೆ ಇದೀಗ 25.50 ಕೋಟಿ ರೂ. ಹೊಂದಿರುವ ಸನ್ರೈಸರ್ಸ್ ಹೈದರಾಬಾದ್ 10 ಆಟಗಾರರನ್ನು ಖರೀದಿಸಬಹುದು. ಈ ಹತ್ತರಲ್ಲಿ ಇಬ್ಬರು ವಿದೇಶಿ ಆಟಗಾರರನ್ನು ಕೂಡ ಆಯ್ಕೆ ಮಾಡಬಹುದು.

ಪಂಜಾಬ್ ಕಿಂಗ್ಸ್: ಐಪಿಎಲ್ ರಿಟೆನ್ಷನ್ ವೇಳೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಒಟ್ಟು 6 ಆಟಗಾರರನ್ನು ರಿಲೀಸ್ ಮಾಡಿದ್ದಾರೆ. ಇದೀಗ 21 ಆಟಗಾರರ ಬಳಗವನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ಹರಾಜಿನ ಮೂಲಕ 11.50 ಕೋಟಿಯಲ್ಲಿ ಒಟ್ಟು ನಾಲ್ವರನ್ನು ಖರೀದಿಸಬಹುದು. ಇದರಲ್ಲಿ ಇಬ್ಬರು ವಿದೇಶಿ ಆಟಗಾರರನ್ನು ಆಯ್ಕೆ ಮಾಡಲು ಅವಕಾಶವಿದೆ.

ರಾಜಸ್ಥಾನ್ ರಾಯಲ್ಸ್: ಆರ್ಆರ್ ಫ್ರಾಂಚೈಸಿಯು ಒಟ್ಟು 9 ಸ್ಲಾಟ್ಗಳನ್ನು ಹೊಂದಿದೆ. ಇದೀಗ 14 ಆಟಗಾರರೊಂದಿಗೆ 16.05 ಕೋಟಿ ರೂ. ಪರ್ಸ್ ಮೊತ್ತ ಹೊಂದಿರುವ ರಾಜಸ್ಥಾನ್ ರಾಯಲ್ಸ್ ಹರಾಜಿನ ಮೂಲಕ 8 ಭಾರತೀಯ ಹಾಗೂ ಓರ್ವ ವಿದೇಶಿ ಆಟಗಾರನನ್ನು ಖರೀದಿಸಬಹುದು.

ಲಕ್ನೋ ಸೂಪರ್ ಜೈಂಟ್ಸ್: ಎಸ್ಎಲ್ಜಿ ಫ್ರಾಂಚೈಸಿಯು ಮಿನಿ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸಬಹುದು. 22.95 ಕೋಟಿ ರೂ. ಪರ್ಸ್ ಮೊತ್ತ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ನಾಲ್ವರು ವಿದೇಶಿ ಹಾಗೂ ಇಬ್ಬರು ಭಾರತೀಯರನ್ನು ಆಯ್ಕೆ ಮಾಡಲು ಅವಕಾಶವಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ಫ್ರಾಂಚೈಸಿಯು 9 ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಇದೀಗ 12 ಆಟಗಾರರ ಬಳಗವನ್ನು ಹೊಂದಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಒಟ್ಟು 13 ಆಟಗಾರರನ್ನು ಖರೀದಿಸಲು ಅವಕಾಶವಿದೆ. ಅದರಂತೆ 64.30 ಕೋಟಿ ರೂ.ನಲ್ಲಿ ಕೆಕೆಆರ್ 6 ವಿದೇಶಿ ಆಟಗಾರರು ಹಾಗೂ 7 ಭಾರತೀಯ ಆಟಗಾರರನ್ನು ಖರೀದಿಸಬಹುದು.

ಗುಜರಾತ್ ಟೈಟಾನ್ಸ್: ಜಿಟಿ ಫ್ರಾಂಚೈಸಿಯು ಮಿನಿ ಹರಾಜಿಗೂ ಮುನ್ನ 5 ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಅದರಂತೆ ಇದೀಗ 12.90 ಕೋಟಿ ರೂ. ಹರಾಜು ಮೊತ್ತ ಹೊಂದಿರುವ ಗುಜರಾತ್ ಟೈಟಾನ್ಸ್ ನಾಲ್ವರು ವಿದೇಶಿ ಹಾಗೂ ಓರ್ವ ಭಾರತೀಯ ಆಟಗಾರನನ್ನು ಖರೀದಿಸಬಹುದು.

ಡೆಲ್ಲಿ ಕ್ಯಾಪಿಟಲ್ಸ್: ಡಿಸಿ ಫ್ರಾಂಚೈಸಿಯು ಒಟ್ಟು 7 ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ 21.80 ಕೋಟಿ ರೂ. ಹರಾಜು ಮೊತ್ತ ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ಗೆ 8 ಆಟಗಾರರನ್ನು ಆಯ್ಕೆ ಮಾಡಲು ಅವಕಾಶವಿದೆ. ಈ ಸ್ಲಾಟ್ಗಳಲ್ಲಿ ಐವರು ವಿದೇಶಿ ಹಾಗೂ ಮೂವರು ಭಾರತೀಯ ಆಟಗಾರರನ್ನು ಆಯ್ಕೆ ಮಾಡಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ಫ್ರಾಂಚೈಸಿಯು ಒಟ್ಟು 8 ಆಟಗಾರರನ್ನು ಬಿಡುಗಡೆ ಮಾಡಿದೆ. ಇದೀಗ 17 ಸದಸ್ಯರುಗಳ ಬಳಗವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 16.40 ಕೋಟಿ ರೂ. ಹರಾಜು ಮೊತ್ತದಲ್ಲಿ 8 ಆಟಗಾರರನ್ನು ಖರೀದಿಸಬಹುದು. ಈ ಎಂಟು ಆಟಗಾರರಲ್ಲಿ ಇಬ್ಬರು ವಿದೇಶಿ ಆಟಗಾರರನ್ನು ಆಯ್ಕೆ ಮಾಡಲು ಆರ್ಸಿಬಿಗೆ ಅವಕಾಶವಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




