
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಇದೀಗ 16.40 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿರುವ ಆರ್ಸಿಬಿ ಸ್ಟಾರ್ ಆಟಗಾರನನ್ನು ಖರೀದಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 7 ಕೋಟಿ ರೂ.ಗೆ ಖರೀದಿಸಿದೆ. ಕಳೆದ ಸೀಸನ್ನಲ್ಲಿ ವೆಂಕಟೇಶ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ ಆರ್ಸಿಬಿ ಪರ ಕಣಕ್ಕಿಳಿಯಲಿದ್ದಾರೆ.

ಆರ್ಸಿಬಿ ತಂಡಕ್ಕೆ ಈ ಬಾರಿ 8 ಆಟಗಾರರನ್ನು ಖರೀದಿಸಲು ಅವಕಾಶವಿದೆ. ಅದರಂತೆ ಇದೀಗ ಓರ್ವ ಆಟಗಾರನನ್ನು ಖರೀದಿಸಿದ್ದು, ಇನ್ನೂ 7 ಮಂದಿಯನ್ನು ಮಾಡಬಹುದು. ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಗರಿಷ್ಠ 25 ಆಟಗಾರರನ್ನು ಹೊಂದಬಹುದು.

ಅದರಂತೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 16.40 ಕೋಟಿ ರೂ.ನಲ್ಲಿ ಈ ಬಾರಿ ಎಷ್ಟು ಆಟಗಾರರನ್ನು ಖರೀದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಕಳೆದ ಬಾರಿ ಆರ್ಸಿಬಿ 22 ಆಟಗಾರರ ತಂಡವನ್ನು ರೂಪಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಈ ಬಾರಿ ಹೆಚ್ಚುವರಿ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯಿದೆ.

RCB ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್.
Published On - 3:26 pm, Tue, 16 December 25