AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ನಿಂದ ಬಾಂಗ್ಲಾದೇಶ್ ಆಟಗಾರನಿಗೆ ಗೇಟ್ ಪಾಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬಲಿಷ್ಠ ಪಡೆಯನ್ನು ರೂಪಿಸಿದೆ. 25 ಆಟಗಾರರನ್ನು ಒಳಗೊಂಡಿದ್ದ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ತಂಡದ ಆಟಗಾರನನ್ನು ಕೈ ಬಿಡುವಂತೆ ಬಿಸಿಸಿಐ ಸೂಚಿಸಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಬಾಂಗ್ಲಾ ವೇಗಿ ಮುಸ್ತಫಿಝುರ್ ರೆಹಮಾನ್ ಕೆಕೆಆರ್ ಪರ ಕಣಕ್ಕಿಳಿಯುವುದಿಲ್ಲ.

ಝಾಹಿರ್ ಯೂಸುಫ್
|

Updated on: Jan 03, 2026 | 1:08 PM

Share
IPL 2026: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬಾಂಗ್ಲಾದೇಶ್ ತಂಡದ 7 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಏಳು ಆಟಗಾರರಲ್ಲಿ ಹರಾಜಾಗಿದ್ದು ಎಡಗೈ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಮಾತ್ರ.

1 / 5
2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಸ್ತಫಿಝುರ್ ರೆಹಮಾನ್ ಅವರ ಖರೀದಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಅವರ ಮೊತ್ತ 5 ಕೋಟಿಯನ್ನು ದಾಟಿತ್ತು.

2 / 5
ಅಂತಿಮವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು 9.2 ಕೋಟಿ ರೂ. ನೀಡುವ ಮೂಲಕ ಮುಸ್ತಫಿಝುರ್ ರೆಹಮಾನ್ ಅವರನ್ನು ಖರೀದಿಸಿದ್ದರು. ಇದೀಗ ಕೋಟಿ ಮೊತ್ತ ನೀಡಿ ಖರೀದಿಸಿದ ಬಾಂಗ್ಲಾದೇಶ್ ಆಟಗಾರನನ್ನು ತಂಡದಿಂದ ಕೈ ಬಿಡುವಂತೆ ಬಿಸಿಸಿಐ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ಸೂಚಿಸಿದೆ.

3 / 5
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ರಾಜತಾಂತ್ರಿಕ ಸಂಬಂಧಗಳು ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದ್ದು, ಈ ಬಗ್ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ತಿಳಿಸಲಾಗಿದೆ. ಹೀಗಾಗಿ ಮುಂಬರುವ ಐಪಿಎಲ್​ನಲ್ಲಿ ಬಾಂಗ್ಲಾ ವೇಗಿ ಮುಸ್ತಫಿಝುರ್ ರೆಹಮಾನ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

4 / 5
ಇತ್ತ ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟು ಬದಲಿ ಆಟಗಾರನನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಹರಾಜಿನಲ್ಲಿ ಮಾರಾಟವಾಗದೇ ಉಳಿದಿರುವ ಯಾವುದಾದರೂ ವಿದೇಶಿ ಆಟಗಾರನನ್ನು ಆಯ್ಕೆ ಮಾಡುವ ಅವಕಾಶವನ್ನು ಪಡೆಯಲಿದ್ದಾರೆ.

5 / 5
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ

ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ

ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ

4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?