
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಇದೀಗ ತನ್ನ ಬದ್ಧ ವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಅಳಿಸಿ ಹಾಕಿದೆ.

ಏಪ್ರಿಲ್ 3, 2026 ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತ್ತು. ಈ ಬೃಹತ್ ಮೊತ್ತದೊಂದಿಗೆ ಸಿಎಸ್ಕೆ ಪಡೆ ಐಪಿಎಲ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

ಅಂದರೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಿದ ತಂಡ ಎಂಬ ಹೆಗ್ಗಳಿಕೆಗೆ ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 273 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 35 ಬಾರಿ 200+ ಸ್ಕೋರ್ಗಳಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200+ ಸ್ಕೋರ್ಗಳಿಸಿದ ತಂಡವೆಂಬ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಸಿಎಸ್ಕೆ ಪಡೆಯು 255 ಪಂದ್ಯಗಳಲ್ಲಿ 36 ಬಾರಿ 200+ ಸ್ಕೋರ್ ಗಳಿಸಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್ಗಳಿಸಿ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.