ಗಂಟೆಗಳಲ್ಲೇ RCB ದಾಖಲೆಯನ್ನ ಉಡೀಸ್ ಮಾಡಿದ CSK
Royal Challengers Bengaluru vs Chennai Super Kings: ಐಪಿಎಲ್ನ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 207 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್ಸಿಬಿ 43 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
Updated on: Apr 06, 2026 | 7:53 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 250 ರನ್ ಕಲೆಹಾಕಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200+ ಸ್ಕೋರ್ಗಳಿಸಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರು.

ಹೀಗೆ ಆರ್ಸಿಬಿ ಬರೆದ ಈ ದಾಖಲೆಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗಂಟೆಗಳ ಅಂತರದಲ್ಲೇ ಅಳಿಸಿ ಹಾಕಿರುವುದು ವಿಶೇಷ. ಅಂದರೆ ಆರ್ಸಿಬಿ ನೀಡಿದ 250 ರನ್ಗಳ ಗುರಿ ಬೆನ್ನತ್ತಿದ ಸಿಎಸ್ಕೆ ತಂಡವು 19.4 ಓವರ್ಗಳಲ್ಲಿ 207 ರನ್ ಗಳಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು 200+ ಸ್ಕೋರ್ಗಳಿಸಿ ದಾಖಲೆಯನ್ನು ಮತ್ತೊಮ್ಮೆ ತಮ್ಮದಾಗಿಸಿಕೊಂಡರು.

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 274 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 36 ಬಾರಿ 200+ ಸ್ಕೋರ್ಗಳಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200+ ಸ್ಕೋರ್ಗಳಿಸಿದ ತಂಡವೆಂಬ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಸಿಎಸ್ಕೆ ಪಡೆಯು 257 ಪಂದ್ಯಗಳಲ್ಲಿ 37 ಬಾರಿ 200+ ಸ್ಕೋರ್ ಗಳಿಸಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್ಗಳಿಸಿ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




