- Kannada News Photo gallery Cricket photos IPL 2026: CSK franchise restart Sanju Samson trade talks with RR
IPL 2026: ಸ್ಟಾರ್ ಆಟಗಾರನನ್ನು ಮುಂದಿಟ್ಟು ಸಂಜು ಸ್ಯಾಮ್ಸನ್ಗಾಗಿ CSK ಗಾಳ..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ಹೊಸ ತಂಡದ ಪರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ ಆ ಹೊಸ ತಂಡ ಡೆಲ್ಲಿ ಕ್ಯಾಪಿಟಲ್ಸ್ ಆಗಿರಲಿದೆಯಾ ಅಥವಾ ಚೆನ್ನೈ ಸೂಪರ್ ಕಿಂಗ್ಸ್ ಆಗಲಿದೆಯಾ ಎಂಬುದೇ ಈಗ ಕುತೂಹಲ.
Updated on: Nov 08, 2025 | 8:23 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಬಿಗ್ಗೆಸ್ಟ್ ಡೀಲ್ ಕುದುರಿದೆ. ಈ ಡೀಲ್ನೊಂದಿಗೆ ಆರ್ಆರ್ ತಂಡದ ನಾಯಕ ಸಂಜು ಸ್ಯಾಮ್ಸನ್ (Sanju Samson) ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಪಾಲಾಗಿದ್ದಾರೆ ಎಂದು ವರದಿಯಾಗಿತ್ತು.

ಐಪಿಎಲ್ ಮೂಲಗಳ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ಜೊತೆ ಸ್ವಾಪ್ ಡೀಲ್ ಮಾಡಿಕೊಂಡಿದ್ದು, ಅದರಂತೆ ಹರಾಜಿಗೂ ಮುನ್ನ ಸ್ಯಾಮ್ಸನ್ ಡೆಲ್ಲಿ ಪಡೆಗೆ ಎಂಟ್ರಿ ಕೊಡಲಿದ್ದಾರೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಟ್ರಿಸ್ಟನ್ ಸ್ಟಬ್ಸ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇಪರ್ಡೆಯಾಗಲಿದ್ದಾರೆ ತಿಳಿಸಲಾಗಿತ್ತು.

ಅದರಂತೆ ಸಂಜು ಸ್ಯಾಮ್ಸನ್ ಇನ್ನೇನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಲಿದ್ದಾರೆ ಎನ್ನುವಾಗ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯನ್ನು ಸಂಪರ್ಕಿಸಿದೆ. ಅದು ಕೂಡ ಸ್ಟಾರ್ ಆಟಗಾರನ ಸ್ವಾಪ್ ಡೀಲ್ನ ಆಫರ್ನೊಂದಿಗೆ ಎಂಬುದು ವಿಶೇಷ.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಸಿಎಸ್ಕೆ ಫ್ರಾಂಚೈಸಿಯು ಅವರ ಖರೀದಿಗೆ ಯೋಜನೆ ರೂಪಿಸಿತ್ತು. ಇದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರಾಜಸ್ಥಾನ್ ರಾಯಲ್ಸ್ ಜೊತೆ ಕ್ಯಾಶ್ ಡೀಲ್ ಕುದಿರಿಸಲು ಯತ್ನಿಸಿದ್ದರು. ಆದರೆ ಆರ್ಆರ್ ಫ್ರಾಂಚೈಸಿಯು ಸ್ವಾಪ್ ಡೀಲ್ಗೆ ಹೆಚ್ಚಿನ ಆಸಕ್ತಿ ತೋರಿದ್ದರು. ಅಲ್ಲದೆ ರವೀಂದ್ರ ಜಡೇಜಾ ಅವರನ್ನು ನೀಡಿದರೆ ಸಂಜು ಸ್ಯಾಮ್ಸನ್ ಅವರನ್ನು ಬಿಟ್ಟು ಕೊಡುವುದಾಗಿ ತಿಳಿಸಿದ್ದರು.

ಆದರೆ ಜಡೇಜಾ ಅವರನ್ನು ನೀಡಲು ಸಿಎಸ್ಕೆ ಮುಂದಾಗಿರಲಿಲ್ಲ. ಇತ್ತ ಉಳಿದ ಆಟಗಾರರೊಂದಿಗಿನ ಸ್ವಾಪ್ ಡೀಲ್ಗೆ ಆರ್ಆರ್ ಕೂಡ ಒಪ್ಪಿಕೊಂಡಿರಲಿಲ್ಲ. ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಹರಾಜಿನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರು.

ಆದರೆ ಸಿಎಸ್ಕೆ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ಜೊತೆ ಸ್ವಾಪ್ ಡೀಲ್ಗೆ ಕುದುರಿಸಿತ್ತು. ಅದರಂತೆ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ನನ್ನು ನೀಡಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಮುಂದಾಗಿದೆ.

ಆದರೀಗ ಸ್ಟಾರ್ ಆಟಗಾರರೊಬ್ಬರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಚೆನ್ನೈ ಸೂಪರ್ ಕಿಂಗ್ಸ್ ಯೋಜನೆ ರೂಪಿಸಿದೆ. ಈ ಯೋಜನೆಯೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕ ಮನೋಜ್ ಬಡಾಳೆ ಅವರೊಂದಿಗೆ ಮಾತುಕತೆಯನ್ನು ಸಹ ನಡೆಸಿದ್ದಾರೆ ಎಂದು ಕ್ರಿಕ್ಬಝ್ ವರದಿ ಮಾಡಿದೆ.

ಅಲ್ಲದೆ ಸಂಜು ಸ್ಯಾಮ್ಸನ್ ಅವರೊಂದಿಗೆ ಸ್ವಾಪ್ ಡೀಲ್ ಮಾಡಿಕೊಳ್ಳಲು ಬಯಸಿರುವ ಆಟಗಾರನಿಗೆ ಈಗಾಗಲೇ ಸಿಎಸ್ಕೆ ಸಂದೇಶ ಕಳಿಸಿದ್ದು, ಆತನ ಒಪ್ಪಿಗೆಗಾಗಿ ಕಾಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಯಶಸ್ವಿಯಾದರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಕೈ ಬಿಟ್ಟು ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ಗೆ ಮಾರಾಟ ಮಾಡಬಹುದು. ಹೀಗಾಗಿ ಅಂತಿಮವಾಗಿ ಸ್ಯಾಮ್ಸನ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
