IPL 2026: ಹೀಗಾದ್ರೆ CSK ಪ್ಲೇಆಫ್ಗೇರುವುದು ಖಚಿತ..!
IPL 2026 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಸಿಎಸ್ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಸಿಎಸ್ಕೆ ತಂಡ ಪ್ಲೇಆಫ್ ರೇಸ್ನಲ್ಲಿ ಉಳಿಯಲಿದೆ.
Updated on: May 21, 2026 | 12:17 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್ಗಳು ಪ್ಲೇಆಫ್ ಹಂತಕ್ಕೇರಿದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಒಂದು ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್ ಹಂತಕ್ಕೇರಬಹುದು. ಇದಕ್ಕಾಗಿ ಈ ಒಂದು ಫಲಿತಾಂಶವನ್ನು ಎದುರು ನೋಡಬೇಕು. (PC: IPL)

ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಜಯ ಸಾಧಿಸಬೇಕು. ಅದು ಕೂಡ ಕನಿಷ್ಠ 20 ರನ್ಗಳ ಅಂತರದಿಂದ. ಇಂತಹದೊಂದು ಗೆಲುವು ಸಿಕ್ಕರೆ 14 ಅಂಕಗಳೊಂದಿಗೆ ಸಿಎಸ್ಕೆ ತಂಡವು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ.

ಈ ನಾಲ್ಕನೇ ಸ್ಥಾನವನ್ನು ಕಾಯ್ದುಕೊಳ್ಳಬೇಕಿದ್ದರೆ ಸಿಎಸ್ಕೆ ತಂಡವು ಮೂರು ತಂಡಗಳ ಸೋಲನ್ನು ಸಹ ಎದುರು ನೋಡಬೇಕು. ಏಕೆಂದರೆ ಮುಂದಿನ ಮೂರು ಮ್ಯಾಚ್ಗಳಲ್ಲಿ ಒಂದು ತಂಡವು ಭರ್ಜರಿ ಜಯ ಸಾಧಿಸಿದರೆ ಸಿಎಸ್ಕೆ ತಂಡವು ಅಂಕ ಪಟ್ಟಿಯಲ್ಲಿ ಮತ್ತೆ 5ನೇ ಸ್ಥಾನಕ್ಕೆ ಕುಸಿಯಲಿದೆ.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದ ಬಳಿಕ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಗೆಲುವನ್ನು ಎದುರು ನೋಡಬೇಕು. ಅಂದರೆ ಎಲ್ಎಸ್ಜಿ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲಬೇಕು. ಹಾಗೆಯೇ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪರಾಜಯಗೊಳ್ಳಬೇಕು. ಹಾಗೆಯೇ ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲಬೇಕು.

ಅಂದರೆ ಇಂದಿನ ಮ್ಯಾಚ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ, ಆ ಬಳಿಕ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಮ್ಯಾಚ್ನಲ್ಲಿ ಸೋಲುವುದನ್ನು ಎದುರು ನೋಡಬೇಕು. ಇಂತಹದೊಂದು ಫಲಿತಾಂಶ ಮೂಡಿಬಂದರೆ ಸಿಎಸ್ಕೆ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ 4ನೇ ಸ್ಥಾನ ಪಡೆದು ಪ್ಲೇಆಫ್ಗೇರಲಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




