AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ತಂಡದಲ್ಲಿ ರವೀಂದ್ರ ಜಡೇಜಾ ಯುಗಾಂತ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ 2026 ರಲ್ಲಿ ರವೀಂದ್ರ ಜಡೇಜಾ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದ ಸಂಜು ಸ್ಯಾಮ್ಸನ್ ಸಿಎಸ್​ಕೆ ಪರ ಬ್ಯಾಟ್ ಬೀಸಲಿದ್ದಾರೆ. ಇದರ ಜೊತೆಗೆ ಸಿಎಸ್​ಕೆ ತಂಡದ ಸ್ಯಾಮ್ ಕರನ್ ಕೂಡ ಆರ್​ಆರ್ ತಂಡದ ಪಾಲಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 11, 2025 | 8:24 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಆಕ್ಷನ್​ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ರಾಕ್​ಸ್ಟಾರ್ ರವೀಂದ್ರ ಜಡೇಜಾ (Ravindra jadeja) ಟ್ರೇಡ್ ಆಗುವುದು ಖಚಿತವಾಗಿದೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗಾಗಿ ಎಂಬುದು ವಿಶೇಷ.

1 / 5
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಸಿಎಸ್​ಕೆ-ಆರ್​ಆರ್ ಫ್ರಾಂಚೈಸಿಗಳು ಸ್ವಾಪ್ ಡೀಲ್​ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.

2 / 5
ಅಲ್ಲದೆ ಇನ್ನೆರಡು ದಿನಗಳ ಒಳಗೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಒಪ್ಪಂದ ಅಧಿಕೃತವಾಗಲಿದೆ ಎಂದು ತಿಳಿದು ಬಂದಿದೆ. ಇದರೊಂದಿಗೆ ರವೀಂದ್ರ ಜಡೇಜಾ ಅವರ ಸಿಎಸ್​ಕೆ ಪಯಣ ಕೂಡ ಅಂತ್ಯವಾಗಲಿದೆ.

3 / 5
ಕಳೆದ 12 ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಭಾಗವಾಗಿದ್ದ ರವೀಂದ್ರ ಜಡೇಜಾ ಇದೀಗ ಮತ್ತೆ ತನ್ನ ಮಾಜಿ ತಂಡಕ್ಕೆ ಮರಳುತ್ತಿದ್ದಾರೆ. ಅಂದರೆ ಜಡೇಜಾ 2008 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದರು.  ಇದೀಗ 15 ವರ್ಷಗಳ ಬಳಿಕ ಮತ್ತೆ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಸೇರ್ಪಡೆಯಾಗುತ್ತಿದ್ದಾರೆ. 

4 / 5
ಇನ್ನು 12 ವರ್ಷಗಳಲ್ಲಿ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 149 ಇನಿಂಗ್ಸ್ ಆಡಿರುವ ಅವರು 2354 ರನ್ ಕಲೆಹಾಕಿದ್ದಾರೆ. ಇದರ ನಡುವೆ 5 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ 3 ಬಾರಿ ಸಿಎಸ್​ಕೆ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು. ಇದೀಗ 12 ವರ್ಷಗಳ ಬಳಿಕ ಚಾಂಪಿಯನ್ ಆಟಗಾರನನ್ನು ಕೈ ಬಿಡಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನಿರ್ಧರಿಸಿದೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ