AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

IPL 2026 RR vs CSK: ಐಪಿಎಲ್​ನ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡವು ಕೇವಲ 12.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಸಿಎಸ್​ಕೆ ತಂಡವನ್ನು ಮೊದಲ ಮ್ಯಾಚ್​ನಲ್ಲಿ ಭಾರೀ ಅಂತರದಿಂದ ಸೋಲಿಸಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Mar 31, 2026 | 2:24 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಆದರೆ ಇದು ಅಂತಿಂಥ ಸೋಲಲ್ಲ. ಬದಲಾಗಿ 19 ವರ್ಷಗಳ ಕಂಡಂತಹ ಅತ್ಯಂತ ಹೀನಾಯ ಸೋಲು.

1 / 5
ಗುವಾಹಟಿಯ ಬರ್ಸಪಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು.  ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು.

2 / 5
ಈ ಸುಲಭ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೇವಲ 12.1 ಓವರ್​ಗಳಲ್ಲಿ 128 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

3 / 5
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ಬರೋಬ್ಬರಿ 47 ಎಸೆತಗಳನ್ನು ಬಾಕಿಯಿರಿಸಿ ಪಂದ್ಯವನ್ನು ಗೆದ್ದುಕೊಂಡಿದ್ದಾರೆ. ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಒಮ್ಮೆಯೂ ಇಷ್ಟೊಂದು ಬಾಲ್​​ಗಳ ಅಂತರದಿಂದ ಸೋತಿರಲಿಲ್ಲ.

4 / 5
ಇದಕ್ಕೂ ಮುನ್ನ 2012 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 21 ಎಸೆತಗಳ ಅಂತರದಿಂದ ಸೋತಿದ್ದು ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಅಂತ್ಯಂತ ಹೀನಾಯ 'ಆರಂಭಿಕ ' ಸೋಲಾಗಿತ್ತು. ಇದೀಗ ಮೊದಲ ಪಂದ್ಯದಲ್ಲೇ ಸಿಎಸ್​ಕೆ ತಂಡವನ್ನು 12.1 ಓವರ್​ಗಳಲ್ಲಿ ಬಗ್ಗು ಬಡಿದು ರಾಜಸ್ಥಾನ್ ರಾಯಲ್ಸ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಸಿಎಸ್​ಕೆ ತಂಡವನ್ನು ಮೊದಲ ಮ್ಯಾಚ್​ನಲ್ಲಿ ಅತ್ಯಂತ ಹೀನಾಯವಾಗಿ ಸೋಲಿಸಿದ ಹೆಗ್ಗಳಿಕೆಯನ್ನು ಆರ್​ಆರ್​ ಪಡೆ ತನ್ನದಾಗಿಸಿಕೊಂಡಿದೆ.

5 / 5
Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ

ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು

ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!

ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ

ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?

ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’

ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ

ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ

ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್