IPL 2026: ಅತಿ ಹೆಚ್ಚು ಪಂದ್ಯ ಶ್ರೇಷ್ಠ; ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

Updated on: Jun 01, 2026 | 10:40 PM

Virat Kohli most MoM awards: ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2026 ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ಅಜೇಯ 75 ರನ್ ಗಳಿಸಿ ಆರ್‌ಸಿಬಿಗೆ ಸತತ 2ನೇ ಟ್ರೋಫಿ ಗೆಲ್ಲಿಸಿಕೊಟ್ಟರು. ಈ ಅದ್ಭುತ ಆಟಕ್ಕಾಗಿ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಪಡೆದ ಕೊಹ್ಲಿ, ತಮ್ಮ 22ನೇ MoM ಪ್ರಶಸ್ತಿಯೊಂದಿಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಭಾರತೀಯ ಆಟಗಾರ ಎಂಬ ದಾಖಲೆ ನಿರ್ಮಿಸಿ ರೋಹಿತ್ ಶರ್ಮಾರನ್ನು ಹಿಂದಿಕ್ಕಿದರು.

1 / 5
ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2026 ರ ಫೈನಲ್‌ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್  ತಂಡ ನೀಡಿದ 155 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಪರ 37 ವರ್ಷದ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಸತತ ಎರಡನೇ ಐಪಿಎಲ್ ಟ್ರೋಫಿಗೆ ಮುನ್ನಡೆಸಿದರು. ಕೊಹ್ಲಿಯ ಈ ಅಜೇಯ ಆಟಕ್ಕಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.

2 / 5
ಆರಂಭಿಕನಾಗಿ ಬಂದು ಕೊನೆಯವರೆಗೂ ಅಜೇಯರಾಗಿ ಉಳಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 75 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಅವರ ಅದ್ಭುತ ಪ್ರದರ್ಶನದಿಂದಾಗಿ, ಆರ್‌ಸಿಬಿ 5 ವಿಕೆಟ್‌ಗಳಿಂದ ಗೆದ್ದು ಪ್ರಶಸ್ತಿಯನ್ನು ಪಡೆದುಕೊಂಡಿತು. ಈ ಸ್ಮರಣೀಯ ಇನ್ನಿಂಗ್ಸ್‌ಗಾಗಿ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಯೊಂದಿಗೆ, ಅವರು ಐಪಿಎಲ್ ಇತಿಹಾಸದಲ್ಲಿ ಮತ್ತೊಂದು ದೊಡ್ಡ ದಾಖಲೆಯನ್ನು ಸೃಷ್ಟಿಸಿದರು.

3 / 5
ಐಪಿಎಲ್ 2026 ರ ಫೈನಲ್‌ನಲ್ಲಿ ವಿರಾಟ್ ಪಡೆದ ಪಂದ್ಯಶ್ರೇಷ್ಠ ಪ್ರಶಸ್ತಿಯು ಅವರ ಐಪಿಎಲ್ ವೃತ್ತಿಜೀವನದಲ್ಲಿ 22 ನೇ ಪಂದ್ಯಶ್ರೇಷ್ಠ ಪ್ರಶಸ್ತಿಯಾಗಿದೆ. ಇದರೊಂದಿಗೆ, ಅವರು ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಭಾರತೀಯ ಆಟಗಾರನೆಂಬ ದಾಖಲೆ ನಿರ್ಮಿಸಿದರು.

4 / 5
ಈ ಮೊದಲು ಈ ದಾಖಲೆಯನ್ನು ಹೊಂದಿದ್ದ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 21 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದರು. ಸಿಎಸ್​ಕೆ ತಂಡದ ಮಾಜಿ ನಾಯಕ ಎಂಎಸ್ ಧೋನಿ 18 ಪ್ರಶಸ್ತಿಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ತಲಾ 17 ಬಾರಿ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.

5 / 5
ಇನ್ನು ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ದಾಖಲೆ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ, ಅವರು ಈ ಪ್ರಶಸ್ತಿಯನ್ನು 25 ಬಾರಿ ಗೆದ್ದಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಲ್ ಇಬ್ಬರೂ ತಲಾ 22 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದಿದ್ದ್ದು ಎರಡನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ರೋಹಿತ್ ಶರ್ಮಾ 21 ಪ್ರಶಸ್ತಿಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಡೇವಿಡ್ ವಾರ್ನರ್ 18 ಪ್ರಶಸ್ತಿಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

Published On - 10:40 pm, Mon, 1 June 26

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us