IPL 2026: ಇಲ್ಲಿದೆ ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ, ಸೇವ್ ಮಾಡಿಟ್ಟುಕೊಳ್ಳಿ

Updated on: Mar 11, 2026 | 8:58 PM

ಟಿ20 ವಿಶ್ವಕಪ್ ಬಳಿಕ ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪ್ರಾರಂಭವಾಗಲಿದ್ದು, 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಸೀಸನ್-19 ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಿಡುಗಡೆ ಮಾಡಿದೆ. ಇದೇ ಮಾರ್ಚ್ 28ರಿಂದ ಏಪ್ರಿಲ್ 12ರವರೆಗೆ ಮೊದಲ ಹಂತದ ಪಂದ್ಯಗಳು ನಡೆಯಲಿವೆ. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೋಡಿಕೊಂಡು ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಬಿಸಿಸಿಐ ತಿಳಿಸಿದೆ. ಹಾಗಾದ್ರೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಪಂದ್ಯಗಳ ಸಮಯ, ಸ್ಥಳದ ಸಂಪೂರ್ಣ ವಿವರ ಇಲ್ಲಿದೆ.

1 / 6
 ಭಾರತದ ದೊಡ್ಡ ಕ್ರಿಕೆಟ್ ಉತ್ಸವವಾದ ಇಂಡಿಯನ್ ಪ್ರೀಮಿಯರ್ ಲೀಗ್ 2026 (IPL 2026) ಮೊದಲ ಹಂತದ ಒಟ್ಟು 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಪ್ರಾರಂಭವಾಗಲಿದ್ದು, ಮೊದಲ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ. ಅದು ತವರು ಅಂಗಳ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ.

2 / 6
ಐಪಿಎಲ್ ಸೀಸನ್ 19ರ ಮೊದಲ ಹಂತದ ಪಂದ್ಯಗಳು ಮಾರ್ಚ್ 28ರಿಂದ ಏಪ್ರಿಲ್ 12ರವರೆಗೂ ನಡೆಯಲಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​​ಸಿಬಿ) ತಂಡ ಮೊದಲ ಹಂತದ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಆಡಲಿದೆ. ಎರಡು ಪಂದ್ಯ ತವರು ಅಂಗಳ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದ್ದು, ಇನ್ನೆರೆಡು ಮ್ಯಾಚ್​ ಗುವಾಹಟ್ಟಿ ಹಾಗೂ ಮುಂಬೈನಲ್ಲಿ ಆಡಲಿದೆ.

3 / 6
ಮಾರ್ಚ್ 28ರಂದು ಐಪಿಎಲ್ ಸೀಸನ್ 19ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯದಲ್ಲಿ ಸನ್​ ರೈಸರ್ಸ್ ಹೆದರಾಬಾದ್ ತಂಡವನ್ನು ಎದುರಿಸಲಿದೆ. ಪಂದ್ಯ ಮಾ.28ರ ಸಂಜೆ 7:30ಕ್ಕೆ ನಡೆಯಲಿದೆ.

4 / 6
ಉದ್ಘಾಟನಾ ಪಂದ್ಯದ ನಂತರ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂರ್ಜ್ ಬೆಂಗಳೂರು ತಂಡ ತನ್ನ ಎರಡನೇ ಮ್ಯಾಚ್​​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​​ಕೆ) ತಂಡವನ್ನು ಎದುರಿಸಲಿದೆ. ಈ ಪಂದ್ಯ ಏಪ್ರಿಲ್ 5ರ ಸಂಜೆ 7.30ಕ್ಕೆ ತವರು ಅಂಗಳ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

5 / 6
ಇನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೂರನೇ ಪಂದ್ಯವನ್ನು ಏಪ್ರಿಲ್ 10ರಂದು ರಾಜಸ್ಥಾನ ರಾಯಲ್ಸ್ ತಂಡದ ಎದುರು ಸೆಣಸಾಡಲಿದೆ. ಈ ಮ್ಯಾಚ್ ಸಂಜೆ 7.30ಕ್ಕೆ ಗುವಾಹಟ್ಟಿಯಲ್ಲಿ ನಡೆಯಲಿದೆ.

6 / 6
ಮೊದಲ ಹಂತದ ವೇಳಾಪಟ್ಟಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಪಂದ್ಯವನ್ನು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಆಡಲಿದೆ. ಈ ಪಂದ್ಯ ಏಪ್ರಿಲ್ 12ರಂದು ಸಂಜೆ 730ಕ್ಕೆ ಮುಂಬೈನ  ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

Published On - 8:58 pm, Wed, 11 March 26

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us