
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್‌ಸಿಬಿ ಪ್ಲೇಆಫ್ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL)

ಇತ್ತ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ. ಹೌದು, ಪ್ಲೇಆಫ್ ಪಂದ್ಯಕ್ಕೂ ಮುನ್ನ ಫಿಲ್ ಸಾಲ್ಟ್ ಆರ್‌ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. (PC: IPL)

ಕಳೆದ ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ತೀವ್ರ ಪೆಟ್ಟಾಗಿತ್ತು. ಈ ಗಾಯದ ಕಾರಣ ಇಂಗ್ಲೆಂಡ್ಗೆ ತೆರಳಿದ್ದ ಅವರು, ಇದೀಗ ಸಂಪೂರ್ಣ ಫಿಟ್ ಆಗಿದ್ದು ಆರ್‌ಸಿಬಿ ಕ್ಯಾಂಪ್ ಸೇರಿಕೊಳ್ಳಲು ಸಜ್ಜಾಗಿದ್ದಾರೆ. (PC: IPL)

ಅದರಂತೆ ಮೇ 26 ಕ್ಕೂ ಮುನ್ನ ಫಿಲ್ ಸಾಲ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರಿಂದ ಆರ್‌ಸಿಬಿ ತಂಡದ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಏಕೆಂದರೆ ಐಪಿಎಲ್ನ ಮೊದರ್ಲಾರ್ಧದಲ್ಲಿ 6 ಪಂದ್ಯಗಳನ್ನಾಡಿದ್ದ ಸಾಲ್ಟ್ 2 ಭರ್ಜರಿ ಅರ್ಧಶತಕಗಳೊಂದಿಗೆ 206 ರನ್ ಕಲೆಹಾಕಿದ್ದರು. (PC: IPL)

ಇತ್ತ ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಪರ 7 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೇಕಬ್ ಬೆಥೆಲ್ ಕಲೆಹಾಕಿರುವುದು ಕೇವಲ 96 ರನ್ಗಳು ಮಾತ್ರ. ಅಂದರೆ ಸಾಲ್ಟ್ ಅನುಪಸ್ಥಿತಿಯಿಂದ ಆರ್‌ಸಿಬಿ ಉತ್ತಮ ಆರಂಭವನ್ನೇ ಪಡೆದಿರಲಿಲ್ಲ. ಇದೀಗ ನಿರ್ಣಾಯಕ ಹಂತಕ್ಕೂ ಮುನ್ನ ಫಿಲ್ ಸಾಲ್ಟ್ ಎಂಟ್ರಿ ಕೊಡುತ್ತಿರುವುದು ಆರ್‌ಸಿಬಿ ಪಾಲಿಗೆ ಶುಭ ಸೂಚನೆ ಎಂದೇ ಹೇಳಬಹುದು. (PC: IPL)
Published On - 11:53 am, Thu, 21 May 26