IPL 2026: ಐಪಿಎಲ್​ನಿಂದ ಸ್ಟಾರ್ ಆಟಗಾರ ಬ್ಯಾನ್..!

Updated on: Dec 11, 2025 | 10:54 AM

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಡಿಸೆಂಬರ್ 16 ರಂದು ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಒಟ್ಟು 359 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಈ 359 ಆಟಗಾರರಲ್ಲಿ ಇಂಗ್ಲೆಂಡ್ ಟಿ20 ತಂಡದ ನಾಯಕ ಹ್ಯಾರಿ ಬ್ರೂಕ್ ಸ್ಥಾನ ಪಡೆದಿಲ್ಲ ಎಂಬುದು ವಿಶೇಷ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಸೀಸನ್-19 ರ ಮಿನಿ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಹರಾಜಿಗಾಗಿ 359 ಆಟಗಾರರು ಆಯ್ಕೆಯಾಗಿದ್ದಾರೆ. ಹೀಗೆ ಆಯ್ಕೆಯಾದ ಆಟಗಾರರ ಪಟ್ಟಿಯಲ್ಲಿ ಇಂಗ್ಲೆಂಡ್​ನ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ಹೆಸರು ಕಾಣಿಸಿಕೊಂಡಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026)​ ಸೀಸನ್-19 ರ ಮಿನಿ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಹರಾಜಿಗಾಗಿ 359 ಆಟಗಾರರು ಆಯ್ಕೆಯಾಗಿದ್ದಾರೆ. ಹೀಗೆ ಆಯ್ಕೆಯಾದ ಆಟಗಾರರ ಪಟ್ಟಿಯಲ್ಲಿ ಇಂಗ್ಲೆಂಡ್​ನ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ಹೆಸರು ಕಾಣಿಸಿಕೊಂಡಿಲ್ಲ.

2 / 6

ಇತ್ತ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದರೂ ಹ್ಯಾರಿ ಬ್ರೂಕ್ ಅವರ ಹೆಸರನ್ನು ಪರಿಗಣಿಸಲಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಬ್ಯಾನ್​ನಲ್ಲಿರುವುದು. ಹೌದು, ಇಂಗ್ಲೆಂಡ್ ಟಿ20 ತಂಡದ ನಾಯಕ ಹ್ಯಾರಿ ಬ್ರೂಕ್ ಮೇಲೆ ಐಪಿಎಲ್ ಗರ್ವನರ್ ಕೌನ್ಸಿಲ್ 2 ವರ್ಷಗಳ ನಿಷೇಧ ಹೇರಿದೆ. 

3 / 6

ಹ್ಯಾರಿ ಬ್ರೂಕ್ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬರೋಬ್ಬರಿ 6.25 ಕೋಟಿ ರೂ.ಗೆ ಖರೀದೀಸಿತ್ತು. ಆದರೆ ಟೂರ್ನಿ ಆರಂಭಕ್ಕೆ ದಿನಗಳು ಮಾತ್ರಗಳಿರುವಾಗ ಬ್ರೂಕ್ ಐಪಿಎಲ್​ನಿಂದ ಹಿಂದೆ ಸರಿದಿದ್ದರು.

4 / 6

ಅಂತರರಾಷ್ಟ್ರೀಯ ಕ್ರಿಕೆಟ್​ಗಾಗಿ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಬ್ರೂಕ್ ಐಪಿಎಲ್​ಗೆ ಅಲಭ್ಯರಾಗುವುದಾಗಿ ತಿಳಿಸಿದ್ದರು. ಬ್ರೂಕ್ ಅವರ ಈ ನಿರ್ಧಾರವೇ ಇದೀಗ ಅವರಿಗೆ ಮುಳುವಾಗಲಿದೆ. ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ನ ಹೊಸ ನಿಯಮದ ಪ್ರಕಾರ, ಐಪಿಎಲ್​ ಹರಾಜಿನ ಮೂಲಕ ಆಯ್ಕೆಯಾದ ಆಟಗಾರರು ಟೂರ್ನಿಯಿಂದ ಹಿಂದೆ ಸರಿದರೆ ಅಂತಹ ಆಟಗಾರರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ.

5 / 6

ಇಂತಹದೊಂದು ನಿಯಮ ಜಾರಿಗೊಳಿಸಲು ಮುಖ್ಯ ಕಾರಣ, ಕೆಲ ಆಟಗಾರರು ಆಯ್ಕೆಯಾದರೂ ಐಪಿಎಲ್ ಆರಂಭದ ವೇಳೆ ಹಿಂದೆ ಸರಿಯುತ್ತಿರುವುದು. ವಿದೇಶಿ ಆಟಗಾರರ ಇಂತಹ ನಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ಹೊಸ ನಿಯಮವನ್ನು ಪರಿಚಯಿಸಿದೆ.

6 / 6

ಅದರಂತೆ ಕಳೆದ ಬಾರಿ ಆಯ್ಕೆಯಾಗಿ ಟೂರ್ನಿಯಿಂದ ವಿನಾಕಾರಣ ಹಿಂದೆ ಸರಿದ ಹ್ಯಾರಿ ಬ್ರೂಕ್ ಅವರ ಮೇಲೆ ಎರಡು ವರ್ಷಗಳ ನಿಷೇಧ ಹೇರಲಾಗಿದೆ. ಅದರಂತೆ ಐಪಿಎಲ್ 2026 ಮತ್ತು 2027 ರ ಹರಾಜಿಗೆ ಇಂಗ್ಲೆಂಡ್ ಆಟಗಾರನನ್ನು ಪರಿಣಿಸಲಾಗುವುದಿಲ್ಲ. ಹಾಗಾಗಿ ಹ್ಯಾರಿ ಬ್ರೂಕ್ ಮತ್ತೆ ಐಪಿಎಲ್ ಆಡಬೇಕೆಂದರೆ 2028 ರವರೆಗೆ ಕಾಯಲೇಬೇಕು.

Loading...
Unable to load recommendations.
Follow Us