- Kannada News Photo gallery Cricket photos IPL 2026: Injury Setback for RCB Ahead of Delhi Capitals Match
RCB ತಂಡದ ಮುಂದಿನ ಪಂದ್ಯಕ್ಕೆ ಇಬ್ಬರು ಅಲಭ್ಯ?
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈವರೆಗೆ ಆಡಿರುವ 7 ಪಂದ್ಯಗಳಲ್ಲಿ ಆರ್ಸಿಬಿ 5 ರಲ್ಲಿ ಗೆಲುವು ದಾಖಲಿಸಿದರೆ, 2 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಒಟ್ಟು 10 ಅಂಕಗಳನ್ನು ಪಡೆದಿರುವ ಆರ್ಸಿಬಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.
Updated on: Apr 26, 2026 | 11:54 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಇಬ್ಬರು ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಭ್ಯಾಸದ ವೇಳೆ ಗಾಯಗೊಂಡಿದ್ದರು. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೇ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಯುವ ವೇಗಿ ರಾಸಿಖ್ ಸಲಾಂ ದಾರ್ ಕೂಡ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ ಮ್ಯಾಚ್ನಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದ ರಾಸಿಖ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆಊ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತ ಫಿಲ್ ಸಾಲ್ಟ್ ಹೊರಗುಳಿದರೆ ಆರ್ಸಿಬಿ ಪರ ಆರಂಭಿಕನಾಗಿ ಜೇಕಬ್ ಬೆಥೆಲ್ ಕಣಕ್ಕಿಳಿಯಲಿದ್ದಾರೆ. ಅತ್ತ ರಾಸಿಖ್ ಸಲಾಂ ದಾರ್ ಬದಲಿಗೆ ಬಲಗೈ ವೇಗಿ ಅಭಿನಂದನ್ ಸಿಂಗ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ನಿರೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಲ್ (ಅಲಭ್ಯ).




