AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 5 ಆಟಗಾರರ ಬಗ್ಗೆ ಬಿಗ್ ಅಪ್​ಡೇಟ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಶುರುವಾಗಿ ವಾರಗಳೇ ಕಳೆದಿವೆ. ಇದಾಗ್ಯೂ ನಾಲ್ಕು ತಂಡಗಳ 5 ಪ್ರಮುಖ ಆಟಗಾರರು ಇನ್ನೂ ಕೂಡ ಕಣಕ್ಕಿಳಿದಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಇವರಲ್ಲಿ ಮೂವರು ಇನ್ನೂ ಸಹ ತಂಡವನ್ನು ಕೂಡಿಕೊಂಡಿಲ್ಲ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Apr 09, 2026 | 10:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 14 ಪಂದ್ಯಗಳು ಮುಗಿದಿವೆ. ಇದಾಗ್ಯೂ ಕೆಲ ಸ್ಟಾರ್ ಆಟಗಾರರು ಇನ್ನೂ ಕೂಡ ತಂಡವನ್ನು ಕೂಡಿಕೊಂಡಿಲ್ಲ. ಅಂದರೆ ಗಾಯದ ಸಮಸ್ಯೆಯ ಕಾರಣ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದೀಗ ಈ ಆಟಗಾರರ ಇಂಜುರಿ ಅಪ್​ಡೇಟ್ ಹೊರಬಿದಿದ್ದು, ಯಾವ ಆಟಗಾರ ಯಾವಾಗ ಕಣಕ್ಕಿಳಿಯಲಿದ್ದಾರೆ ಎಂದು ನೋಡುವುದಾದರೆ...

1 / 6
ಎಂ.ಎಸ್. ಧೋನಿ (CSK): ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡ ಚಿಂತೆ ಮುಂದಿನ ಪಂದ್ಯದಲ್ಲೂ ಮುಂದುವರೆಯಲಿದೆ. ಏಕೆಂದರೆ ಕಾಲಿನ ಸ್ನಾಯು ಸೆಳೆತದಿಂದ (Calf Strain) ಧೋನಿ ಇನ್ನೂ ಚೇತರಿಸಿಕೊಂಡಿಲ್ಲ. ಸದ್ಯದ ವರದಿಗಳ ಪ್ರಕಾರ, ಏಪ್ರಿಲ್ 11 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೂ ಧೋನಿ ಅಲಭ್ಯರಾಗಲಿದ್ದಾರೆ. 

2 / 6
ಮಿಚೆಲ್ ಸ್ಟಾರ್ಕ್ (DC): ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್ ಭುಜ ಮತ್ತು ಮೊಣಕೈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸದ್ಯ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಟಾರ್ಕ್​ ಏಪ್ರಿಲ್ 21ರ ಸುಮಾರಿಗೆ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

3 / 6
ಡೆವಾಲ್ಡ್ ಬ್ರೆವಿಸ್ (CSK): ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಸ್ಫೋಟಕ ದಾಂಡಿಗ ಡೆವಾಲ್ಡ್ ಬ್ರೆವಿಸ್ ಅವರು ತಮ್ಮ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಏಪ್ರಿಲ್ 11ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯವಿರಲಿದ್ದಾರೆ ಎಂದು ಸಿಎಸ್​ಕೆ ತಂಡ ಖಚಿತಪಡಿಸಿದೆ.

4 / 6
ವನಿಂದು ಹಸರಂಗ (LSG):  ಶ್ರೀಲಂಕಾದ ಆಲ್‌ರೌಂಡರ್ ಹಸರಂಗ ಅವರ ವಿಷಯದಲ್ಲಿ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಕಾಲಿನ ಸ್ನಾಯು ಹರಿತದ (Hamstring tear) ಸಮಸ್ಯೆಯಿಂದ ಬಳಲುತ್ತಿರುವ ಅವರು ಇನ್ನೂ ಫಿಟ್‌ನೆಸ್ ಟೆಸ್ಟ್ ಪೂರ್ಣಗೊಳಿಸಬೇಕಿದೆ. ಹೀಗಾಗಿ ಅವರು ಈ ಸೀಸನ್‌ನಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ.

5 / 6
ಮಥೀಶ ಪತಿರಾಣ (KKR): ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಪತಿರಾಣ ಅವರು ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 16ರ ಪಂದ್ಯಕ್ಕೆ ಅವರು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಮೈದಾನಕ್ಕಿಳಿಯಲಿದ್ದಾರೆ.

6 / 6

Published On - 10:51 am, Thu, 9 April 26

Follow Us
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ

ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ

ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ

ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್

ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು

ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!

RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​

ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ