AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ನಲ್ಲಿ ಕನ್ನಡಿಗರ ಕಾರುಬಾರು; ಯಾರು ಯಾವ ತಂಡದ ಪರ ಆಡುತ್ತಾರೆ?

IPL 2026 Karnataka players: ಮಾರ್ಚ್ 28 ರಂದು ಆರಂಭವಾಗಲಿರುವ 19ನೇ ಐಪಿಎಲ್ ಸೀಸನ್‌ಗಾಗಿ 10 ತಂಡಗಳು ಸಜ್ಜಾಗಿವೆ. ಈ ಮಹತ್ವದ ಟೂರ್ನಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರ ಸಂಖ್ಯೆ, ಅವರು ಯಾವ ತಂಡಗಳ ಪರ ಆಡಲಿದ್ದಾರೆ ಮತ್ತು ಅವರ ಪ್ರಮುಖ ಪಾತ್ರಗಳ ಬಗ್ಗೆ ಈ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್ ಸೇರಿದಂತೆ ಹಲವು ಕನ್ನಡಿಗ ಪ್ರತಿಭೆಗಳು ತಮ್ಮ ತಂಡಗಳಿಗೆ ಚಾಂಪಿಯನ್ ಪಟ್ಟ ತಂದುಕೊಡಲು ಸಜ್ಜಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 20, 2026 | 9:01 PM

Share
19ನೇ ಆವೃತ್ತಿಯ ಐಪಿಎಲ್ ಮಾರ್ಚ್​ 28 ರಂದು ಆರಂಭವಾಗುತ್ತಿದೆ. ಇದರೊಂದಿಗೆ ಒಂದು ಟ್ರೋಫಿ ಗೆಲ್ಲುವ ಸಲುವಾಗಿ 10 ತಂಡಗಳು ಮೈದಾನದಲ್ಲಿ ಹೋರಾಟ ನೀಡಲಿವೆ. ಈ 10 ತಂಡಗಳಲ್ಲಿ ದೇಶ, ವಿದೇಶಗಳ 200 ಕ್ಕೂ ಅಧಿಕ ಪ್ರತಿಭಾನಿತ್ವ ಕ್ರಿಕೆಟಿಗರು ತಮ್ಮ ತಂಡವನ್ನು ಚಾಂಪಿಯನ್ ಮಾಡುವ ಸಲುವಾಗಿ ಸಾಕಷ್ಟು ಬೆವರು ಹರಿಸಲಿದ್ದಾರೆ. ಈ 200 ಕ್ಕೂ ಅಧಿಕ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಆಟಗಾರರು ಎಷ್ಟು ಮಂದಿ? ಅವರುಗಳಲ್ಲಿ ಯಾರ್ಯಾರು ಯಾವ ತಂಡದ ಪರ ಆಡಲಿದ್ದಾರೆ? ಇದರಲ್ಲಿ ಎಷ್ಟು ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ..

1 / 10
ಕೆಎಲ್ ರಾಹುಲ್: ಐಪಿಎಲ್‌ನಲ್ಲಿ ಆಡುತ್ತಿರುವ ಕರ್ನಾಟಕದ ಪ್ರಮುಖ ಆಟಗಾರರ ಪಟ್ಟಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಈ ಲೀಗ್​ನಲ್ಲಿ ಸಾಕಷ್ಟು ಅನುಭವ ಹೊಂದಿರುವ ರಾಹುಲ್ ನಾಯಕನಾಗಿಯೂ ತಂಡವನ್ನು ಮುನ್ನಡೆಸಿದ್ದಾರೆ. ಪ್ರಸ್ತುತ 14 ಕೋಟಿ ರೂ. ವೇತನ ಪಡೆಯುವದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ರಾಹುಲ್ , ಈ ಸೀಸನ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಆಡುವುದರ ಜೊತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಹೊರಲಿದ್ದಾರೆ.

2 / 10
ಕರುಣ್ ನಾಯರ್: ಕೆಎಲ್ ರಾಹುಲ್ ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಮತ್ತೊಬ್ಬ ಕನ್ನಡಿಗ ಕರುಣ್ ನಾಯರ್, ಕಳೆದ ಆವೃತ್ತಿಯಲ್ಲಿ 50 ಲಕ್ಷ ರೂ.ಗೆ ಡೆಲ್ಲಿ ತಂಡವನ್ನು ಸೇರಿಕೊಂಡಿದ್ದ ಕರುಣ್​ ಕೆಲವು ಗಮನಾರ್ಹ ಇನ್ನಿಂಗ್ಸ್ ಕೂಡ ಆಡಿದ್ದರು. ಹೀಗಾಗಿ ಅವರನ್ನು ಡೆಲ್ಲಿ ತನ್ನ ತಂಡದಲ್ಲಿಯೇ ಉಳಿಸಿಕೊಂಡಿದೆ. ಈ ಆವೃತ್ತಿಯಲ್ಲಿ ಕರುಣ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆಗಳಿವೆ.

3 / 10
ದೇವದತ್ ಪಡಿಕ್ಕಲ್; ತವರು ತಂಡ ಆರ್​ಸಿಬಿಯಲ್ಲಿರುವ ಏಕೈಕ ಕನ್ನಡಿಗ ದೇವದತ್ ಪಡಿಕ್ಕಲ್. ತಂಡದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಪಡಿಕ್ಕಲ್, ಕಳೆದ ಆವೃತ್ತಿಯಲ್ಲಿ ಇಂಜುರಿಗೊಂಡು ಲೀಗ್​ನಿಂದ ಹೊರಬೀಳುವುದಕ್ಕೂ ಮುನ್ನ ತಂಡದ ಪರ ಅಮೋಘ ಪ್ರದರ್ಶನ ನೀಡಿದ್ದರು. ಹೀಗಾಗಿ 2 ಕೋಟಿ ರೂಗೆ ಖರೀದಿಸಿದ್ದ ಪಡಿಕ್ಕಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಈನ ಆವೃತ್ತಿಗೂ ತಂಡದಲ್ಲಿ ಉಳಿಸಿಕೊಂಡಿದೆ. ಪ್ರಸ್ತುತ ಅದ್ಭುತ ಫಾರ್ಮ್​ನಲ್ಲಿರುವ ಪಡಿಕ್ಕಲ್ ಈ ಆವೃತ್ತಿಯಲ್ಲಿ ತಂಡದಲ್ಲಿ ಆಡುವುದು ಖಚಿತ.

4 / 10
ಪ್ರಸಿದ್ಧ್ ಕೃಷ್ಣ; ಗುಜರಾತ್ ಟೈಟನ್ಸ್ ತಂಡದ ಬೌಲಿಂಗ್ ವಿಭಾಗದಲ್ಲಿ ಖಾಯಂ ಸ್ಥಾನ ಪಡೆದಿರುವ ಪ್ರಸಿದ್ಧ್ ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 9.5 ಕೋಟ ರೂಗಳ ದಾಖಲೆಯ ಮೊತ್ತಕ್ಕೆ ಗುಜರಾತ್ ತಂಡವನ್ನು ಸೇರಿಕೊಂಡಿರುವ ಪ್ರಸಿದ್ಧ್ ಈ ಬಾರಿಯೂ ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

5 / 10
ವೈಶಾಕ್ ವಿಜಯ್​ಕುಮಾರ್; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗೆ ಐಪಿಎಲ್ ವೃತ್ತಿಜೀವನ ಆರಂಭಿಸಿದ್ದ ವೈಶಾಕ್ ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ. 2025 ರ ಮೆಗಾ ಹರಾಜಿನಲ್ಲಿ 1.5 ಕೋಟಿ ರೂಗಳಿಗೆ ಪಂಜಾಬ್ ತಂಡವನ್ನು ಸೇರಿಕೊಂಡಿರುವ ವೈಶಾಕ್ ಕಳೆದ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಆಡುವ ಅವಕಾಶ ಪಡೆಯಲಿದ್ದಾರೆ.

6 / 10
ಶ್ರೇಯಸ್ ಗೋಪಾಲ್; 2025 ರ ಮೆಗಾ ಹರಾಜಿನಲ್ಲಿ ಆಲ್​ರೌಂಡರ್ ಶ್ರೇಯಲ್ ಗೋಪಾಲ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ 30 ಲಕ್ಷ ರೂ ನೀಡಿ ಖರೀದಿ ಮಾಡಿದೆ. ಈ ಆವೃತ್ತಿಯಲ್ಲೂ ಅವರನ್ನು ತಂಡದಲ್ಲಿ ಉಳಿಸಿಕೊಂಡಿರುವ ಸಿಎಸ್​ಕೆ ಅವರಿಗೆ ಆಡುವ ಅವಕಾಶ ನೀಡಬಹುದು. ಐಪಿಎಲ್‌ನಲ್ಲಿ ಸಾಕಷ್ಟು ಅನುಭವ ಹೊಂದಿರುವ ಶ್ರೇಯಸ್ ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯದ ಜೊತೆಗೆ ಲೆಗ್ ಸ್ಪಿನ್ನರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

7 / 10
ಮನೀಶ್ ಪಾಂಡೆ; ಕಳೆದ 18 ಐಪಿಎಲ್ ಆವೃತ್ತಿಗಳಲ್ಲಿ ಆಡಿರುವ ಕೆಲವೇ ಕೆಲವು ಆಟಗಾರರ ಪಟ್ಟಿಯಲ್ಲಿ ಮನೀಶ್ ಪಾಂಡೆ ಕೂಡ ಒಬ್ಬರು. 2025 ರ ಮೆಗಾ ಹರಾಜಿನಲ್ಲಿ ಮನೀಶ್​ಗೆ 75 ಲಕ್ಷ ರೂ. ನೀಡಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ಖರೀದಿ ಮಾಡಿತ್ತು. ಈ ಆವೃತ್ತಿಯಲ್ಲೂ ಅವರನ್ನು ಉಳಿಸಿಕೊಂಡಿರುವ ಕೆಕೆಆರ್ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡುತ್ತಾ ಕಾದು ನೋಡಬೇಕಿದೆ.

8 / 10
ಪ್ರವೀಣ್ ದುಬೆ; ವೈಶಾಕ್ ವಿಜಯ್​ಕುಮಾರ್ ಜೊತೆಗೆ ಪಂಜಾಬ್ ಕಿಂಗ್ಸ್ ತಂಡದಲ್ಲಿರುವ ಮತ್ತೊಬ್ಬ ಆಟಗಾರ ಪ್ರವೀಣ್ ದುಬೆ. 2026 ರ ಐಪಿಎಲ್ ಹರಾಜಿನಲ್ಲಿ 30 ಲಕ್ಷ ರೂ ನೀಡಿ ಪಂಜಾಬ್ ಫ್ರಾಂಚೈಸಿ ಈ ಲೆಗ್ ಸ್ಪಿನ್ನರ್​ನ ಖರೀದಿ ಮಾಡಿದ್ದು, ಅವರಿಗೆ ಆಡುವ ಅವಕಾಶ ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

9 / 10
ಸ್ಮರಣ್ ರವಿಚಂದ್ರನ್; ಇತ್ತಿಚೆಗಷ್ಟೆ ಮುಗಿದಿದ್ದ ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ ಅಮೋಘ ಪ್ರದರ್ಶನ ನೀಡಿದ್ದ ಸ್ಮರಣ್​ರನ್ನು ಸನ್‌ರೈಸರ್ಸ್ ಹೈದರಾಬಾದ್‌ ಫ್ರಾಂಚೈಸಿ 2025 ರಲ್ಲಿ ಆಡಂ ಝಂಪಾ ಬದಲಿಗೆ 30 ಲಕ್ಷ ರೂಗಳ ಮೂಲ ಬೆಲೆಗೆ ಖರೀದಿ ಮಾಡಿತ್ತು. ತಂಡದಲ್ಲಿ ಈಗಾಗಲೇ ಅಭ್ಯಾಸ ಆರಂಭಿಸಿರುವ ಸ್ಮರಣ್​ಗೆ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡುವ ಅವಕಾಶ ಸಿಗಬಹುದು.

10 / 10
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ