AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: 64.30 ಕೋಟಿ ರೂ.​ ಮೊತ್ತ… ಪತಿರಾಣ ಮೇಲೆ 2 ಫ್ರಾಂಚೈಸಿಗಳ ಕಣ್ಣು

Matheesha Pathirana: ಮತೀಶ ಪತಿರಾಣ 2022 ರಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್​​ಗೆ ಎಂಟ್ರಿ ಕೊಟ್ಟಿದ್ದರು. ಅಲ್ಲದೆ ಕಳೆದ ಮೂರು ಸೀಸನ್​ಗಳಿಂದ ಸಿಎಸ್​ಕೆ ತಂಡದ ಭಾಗವಾಗಿದ್ದ ಪತಿರಾಣ ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿಯೇ ಲಂಕಾ ವೇಗಿಯ ಖರೀದಿಗೆ ಕೆಲ ಫ್ರಾಂಚೈಸಿಗಳು ಪ್ಲ್ಯಾನ್ ರೂಪಿಸುತ್ತಿದೆ.

ಝಾಹಿರ್ ಯೂಸುಫ್
|

Updated on: Nov 20, 2025 | 5:30 PM

Share
ಬೇಬಿ ಮಲಿಂಗ ಖ್ಯಾತಿಯ ಮತೀಶ ಪತಿರಾಣ (Matheesha Pathirana) ಐಪಿಎಲ್ ಸೀಸನ್-19ರ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲ ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದ ಪತಿರಾಣ ಅವರನ್ನು ಇದೇ ಮೊದಲ ಬಾರಿಗೆ ಸಿಎಸ್​ಕೆ ಫ್ರಾಂಚೈಸಿ ಬಿಡುಗಡೆ ಮಾಡಿದೆ.

1 / 6
ಅದರಂತೆ ಐಪಿಎಲ್ 2026 ರ ಮಿನಿ ಹರಾಜಿಗಾಗಿ ಮತೀಶ ಪತಿರಾಣ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಅದು ಕೂಡ 2 ಕೋಟಿ ರೂ. ಮೂಲ ಬೆಲೆಯೊಂದಿಗೆ. ಸ್ಟಾರ್ ಬೌಲರ್ ಎನಿಸಿಕೊಂಡಿರುವ ಶ್ರೀಲಂಕಾ ವೇಗಿ ಗರಿಷ್ಠ ಬೇಸ್ ಪ್ರೈಸ್​ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2 / 6
ಇದಕ್ಕೆ ಮುಖ್ಯ ಕಾರಣ ಮತೀಶ ಪತಿರಾಣ ಮೇಲೆ ಎರಡು ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿರುವುದು. ಸಿಎಸ್​ಕೆ ತಂಡದಲ್ಲಿರುವಾಗಲೇ ಕೆಕೆಆರ್ ಫ್ರಾಂಚೈಸಿಯು ಪತಿರಾಣ ಅವರನ್ನು ಟ್ರೇಡ್ ಮಾಡಿಕೊಳ್ಳಲು ತೆರೆಮರೆಯ ಪ್ರಯತ್ನ ನಡೆಸಿತ್ತು. ಇದಾಗ್ಯೂ ಅದು ಸಫಲವಾಗಿರಲಿಲ್ಲ.

3 / 6
ಆದರೆ ಅಚ್ಚರಿ ಎಂಬಂತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಇದೀಗ ಮತೀಶ ಪತಿರಾಣ ಅವರನ್ನು ಬಿಡುಗಡೆ ಮಾಡಿದೆ. ಈ ರಿಲೀಸ್ ಹೊರತಾಗಿಯೂ ಸಿಎಸ್​ಕೆ ಮತ್ತೆ ಪತಿರಾಣ ಅವರನ್ನು ಖರೀದಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಮತೀಶ ಪತಿರಾಣಗೆ ನೀಡಿದ್ದು ಬರೋಬ್ಬರಿ 13 ಕೋಟಿ ರೂ. ಈ ಬೃಹತ್ ಮೊತ್ತದ ಕಾರಣದಿಂದಾಗಿ ರಿಲೀಸ್ ಮಾಡಿದ್ದು, ಕಡಿಮೆ ಮೊತ್ತಕ್ಕೆ ಮತ್ತೆ ಖರೀದಿಸಲು ಸಿಎಸ್​ಕೆ ಮುಂದಾಗಲಿದೆ.

4 / 6
ಇತ್ತ ಮತೀಶ ಪತಿರಾಣ ರಿಲೀಸ್ ಆಗುತ್ತಿದ್ದಂತೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಯುವ ವೇಗಿಯನ್ನು ಖರೀದಿಸಲು ಪ್ಲ್ಯಾನ್ ರೂಪಿಸುತ್ತಿದೆ ಎಂದು ವರದಿಯಾಗಿದೆ. ಅದರಲ್ಲೂ 64.30 ಕೋಟಿ ರೂ. ಪರ್ಸ್ ಮೊತ್ತ ಹೊಂದಿರುವ ಕೆಕೆಆರ್ ಮತೀಶ ಪತಿರಾಣಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ದಿಟ.

5 / 6
ಏಕೆಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ವೇಗದ ಬೌಲರ್​ನ ಅವಶ್ಯಕತೆಯಿದೆ. ಐಪಿಎಲ್​ನಲ್ಲಿ ಈಗಾಗಲೇ ತನ್ನ ಸಾಮರ್ಥ್ಯವನ್ನು ತೆರೆದಿಟ್ಟಿರುವ ಪತಿರಾಣ ಅವರನ್ನು ಖರೀದಿಸುವುದು ಕೆಕೆಆರ್​​​ಗೆ ಕಷ್ಟವೇನಲ್ಲ. ಏಕೆಂದರೆ ಹರಾಜಿನಲ್ಲಿ 64.30 ಕೋಟಿ ರೂ.ನೊಂದಿಗೆ ಕಾಣಿಸಿಕೊಳ್ಳಲಿರುವ ಕೆಕೆಆರ್ ಬೃಹತ್ ಮೊತ್ತದವರೆಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆಯಿದೆ. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬೇಬಿ ಮಲಿಂಗನನ್ನು ತನ್ನ ತೆಕ್ಕೆಗೆ ತೆಗೆದುಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ

ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು

ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ

ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ