AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಇಬ್ಬರ ಡೀಲ್… ಸಂಜು ಸ್ಯಾಮ್ಸನ್ ಮೇಲೆ KKR ಕಣ್ಣು

IPL 2026: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಂದಿನ ಸೀಸನ್​ಗಾಗಿ ಹೊಸ ನಾಯಕ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಎದುರು ನೋಡುತ್ತಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಆರ್​ಆರ್​ ಬಳಗದಿಂದ ಹೊರಬರಲು ಬಯಸಿದ್ದಾರೆ. ಹೀಗಾಗಿಯೇ ಇದೀಗ ಸ್ಯಾಮ್ಸನ್ ಮೇಲೆ ಕೆಕೆಆರ್ ಕಣ್ಣಿಟ್ಟಿದೆ.

ಝಾಹಿರ್ ಯೂಸುಫ್
|

Updated on: Aug 16, 2025 | 1:56 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಜು ಸ್ಯಾಮ್ಸನ್ (Sanju Samson) ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ? ಎಂಬುದೇ ಈಗ ಕುತೂಹಲ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದಿಂದ ಹೊರಬರಲು ಸಂಜು ನಿರ್ಧರಿಸಿದ್ದಾರೆ. ಈ ನಿರ್ಧಾರದ ಬೆನ್ನಲ್ಲೇ ಆರ್​ಆರ್ ತಂಡದ ನಾಯಕನನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಮುಂದಾಗಿತ್ತು. 

1 / 5
ಆದರೆ ಸಂಜು ಸ್ಯಾಮ್ಸನ್ ಟ್ರೇಡ್​ಗಾಗಿ ರಾಜಸ್ಥಾನ್ ರಾಯಲ್ಸ್​ ಸ್ಟಾರ್ ಆಟಗಾರರ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಅಂದರೆ ಸಿಎಸ್​ಕೆ ತಂಡದಲ್ಲಿರುವ ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ, ಈ ಮೂವರಲ್ಲಿ ಒಬ್ಬರನ್ನು ನೀಡಿದರೆ ಸಂಜು ಸ್ಯಾಮ್ಸನ್ ಅವರನ್ನು ನೀಡುವುದಾಗಿ ಸಿಎಸ್​ಕೆಗೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಿಳಿಸಿದೆ.

2 / 5
ಆದರೆ ಇತ್ತ ಸಿಎಸ್​ಕೆ ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಡುವಣ ಟ್ರೇಡ್ ಪ್ರಕ್ರಿಯೆಯು ವಿಫಲವಾಗಿದೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಂಗಕ್ಕೆ ಇಳಿದಿದೆ.

3 / 5
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್​ಗಾಗಿ ಇಬ್ಬರು ಆಟಗಾರರನ್ನು ನೀಡಲು ಮುಂದಾಗಿದೆ. ಆ ಇಬ್ಬರು ಆಟಗಾರರೆಂದು ರಮಣ್​ದೀಪ್ ಸಿಂಗ್ ಹಾಗೂ ಅಂಗ್​ಕ್ರಿಶ್ ರಘುವಂಶಿ. ಕಳೆದ ಕೆಲ ವರ್ಷಗಳಿಂದ ಕೆಕೆಆರ್ ತಂಡದ ಭಾಗವಾಗಿರುವ ರಮಣ್​ದೀಪ್ ಹಾಗೂ ಅಂಗ್​ಕ್ರಿಶ್ ಅವರನ್ನು ನೀಡುವ ಮೂಲಕ ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಕೆಕೆಆರ್ ಆಸಕ್ತಿ ತೋರಿದೆ.

4 / 5
ಕೆಕೆಆರ್ ನೀಡಿದ ಈ ಆಫರ್​ ಅನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಇನ್ನೂ ಸಹ ತಿರಸ್ಕರಿಸಿಲ್ಲ. ಹೀಗಾಗಿ ಇಬ್ಬರು ಆಟಗಾರರೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಟ್ರೇಡ್ ಕುದುರಿಕೊಳ್ಳುವ ಸಾಧ್ಯತೆಯಿದೆ. ಹೀಗೆ ಟ್ರೇಡ್ ಪ್ರಕ್ರಿಯೆ ಯಶಸ್ವಿಯಾದರೆ ಸಂಜು ಸ್ಯಾಮ್ಸನ್ ಮುಂದಿನ ಸೀಸನ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು

ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!

ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ