IPL 2026: ಐಪಿಎಲ್ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ LSG ಆಟಗಾರ

Updated on: Apr 21, 2026 | 11:24 AM

IPL 2026 Josh Inglis: ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಜೋಸ್ ಇಂಗ್ಲಿಸ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ ಆಡಿರುವುದು ಕೇವಲ 11 ಪಂದ್ಯಗಳನ್ನು ಮಾತ್ರ. ಅದು ಕೂಡ ಪಂಜಾಬ್ ಕಿಂಗ್ಸ್ ಪರ. ಕಳೆದ ಸೀಸನ್​ನಲ್ಲಿ ಪಂಜಾಬ್ ಪರ 11 ಮ್ಯಾಚ್​ಗಳನ್ನಾಡಿದ್ದ ಇಂಗ್ಲಿಸ್ ಒಂದು ಅರ್ಧಶತಕದೊಂದಿಗೆ 278 ರನ್ ಕಲೆಹಾಕಿದ್ದರು. ಈ ಬಾರಿ ಆಸ್ಟ್ರೇಲಿಯನ್ ದಾಂಡಿಗ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲಿದ್ದಾರೆ.

1 / 5
ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಆಟಗಾರ ಜೋಶ್ ಇಂಗ್ಲಿಸ್ (Josh Inglis) ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಏಪ್ರಿಲ್ 18, 2026 ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್‌ನಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಆಟಗಾರ ಜೋಶ್ ಇಂಗ್ಲಿಸ್ (Josh Inglis) ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಏಪ್ರಿಲ್ 18, 2026 ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್‌ನಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

2 / 5

ಈ ವಿವಾಹದ ಕಾರಣ ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಮದುವೆ ಕಾರ್ಯಕ್ರಮಗಳು ಮುಗಿದಿದ್ದು, ಹೀಗಾಗಿ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಅಂದರೆ ಮೇ 4 ರಂದು ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

3 / 5

ಸದ್ಯ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಲಕ್ನೋ ತಂಡಕ್ಕೆ ಜೋಶ್ ಇಂಗ್ಲಿಸ್ ಅವರ ಆಗಮನವು ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ. ತಂಡವು ಸತತ ಸೋಲುಗಳಿಂದ ಕಂಗೆಟ್ಟಿದ್ದು, ಇಂಗ್ಲಿಸ್ ಅವರ ಬಿರುಸಿನ ಬ್ಯಾಟಿಂಗ್ ತಂಡದ ಮಧ್ಯಮ ಕ್ರಮಾಂಕವನ್ನು ಬಲಪಡಿಸಲಿದೆ.

4 / 5

ಇದಕ್ಕೂ ಮುನ್ನ, ಅಂದರೆ ಐಪಿಎಲ್ 2025 ರಲ್ಲಿ ಜೋಶ್ ಇಂಗ್ಲಿಸ್ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ 11 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ಒಂದು ಅರ್ಧಶತಕದೊಂದಿಗೆ ಒಟ್ಟು 278 ರನ್ ಕಲೆಹಾಕಿದ್ದರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5 / 5

ಈ ಭರ್ಜರಿ ಪ್ರದರ್ಶನದ ಫಲವಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಜೋಶ್ ಇಂಗ್ಲಿಸ್ ಅವರನ್ನು ಈ ಬಾರಿಯ ಹರಾಜಿನ ಮೂಲಕ ಬರೋಬ್ಬರಿ 8.60 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಮದುವೆಯ ಕಾರಣ ಅವರು ಐಪಿಎಲ್​ನ ಮೊದಲಾರ್ಧಕ್ಕೆ ಅಲಭ್ಯರಾಗಿದ್ದಾರೆ. ಅಲ್ಲದೆ ದ್ವಿತೀಯಾರ್ಧದ ವೇಳೆ ಜೋಶ್ ಇಂಗ್ಲಿಸ್ ಎಲ್​ಎಸ್​ಜಿ ತಂಡವನ್ನು ಕೂಡಿಕೊಳ್ಳಲಿದ್ದು, ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಗೆಲುವಿನ ಲಯಕ್ಕೆ ಮುನ್ನಡೆಸಲಿದ್ದಾರಾ ಕಾದು ನೋಡಬೇಕಿದೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us