- Kannada News Photo gallery Cricket photos IPL 2026: Matheesha Pathirana has received his NOC For IPL
IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿನಲ್ಲಿ ಶ್ರೀಲಂಕಾ ವೇಗಿ ಮಥೀಶ ಪತಿರಾಣ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 18 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಅವರು ಮೊದಲ ನಾಲ್ಕು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಸಂಪೂರ್ಣ ಫಿಟ್ ಆಗಿರುವ ಪತಿರಾಣ ಮುಂದಿನ ಮ್ಯಾಚ್ ಮೂಲಕ ಕೆಕೆಆರ್ ಪರ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
Updated on: Apr 12, 2026 | 12:53 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಕೊನೆಗೂ ಸಿಹಿ ಸಿಕ್ಕಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಶ ಪತಿರಾಣ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಅಂತಿಮವಾಗಿ 'ನಿರಕ್ಷೇಪಣಾ ಪತ್ರ' (NOC) ನೀಡಿದ್ದು, ಅವರು ಶೀಘ್ರದಲ್ಲೇ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಟಿ20 ವಿಶ್ವಕಪ್ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಮಥೀಶ ಪತಿರಾಣ, ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ವಂಚಿತರಾಗಿದ್ದರು. ಶ್ರೀಲಂಕಾದಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದ ಅವರು ಈಗ ಸಂಪೂರ್ಣ ಫಿಟ್ ಆಗಿದ್ದು, ಮಂಡಳಿಯಿಂದ ಐಪಿಎಲ್ ಆಡಲು ಹಸಿರು ನಿಶಾನೆ ಪಡೆದಿದ್ದಾರೆ.

ಅದರಂತೆ ಇಂದು (ಏಪ್ರಿಲ್ 12) ಅವರು ಶ್ರೀಲಂಕಾದಿಂದ ನೇರವಾಗಿ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಕೆಕೆಆರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇತ್ತ ಮಥೀಶ ಪತಿರಾಣ ಅವರ ಆಗಮನವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬಲವನ್ನು ಹೆಚ್ಚಿಸಲಿದೆ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಕೆಕೆಆರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೂ ಬೌಲಿಂಗ್ ವೈಫಲ್ಯದಿಂದಾಗಿ ಸತತ ಮೂರು ಪಂದ್ಯಗಳನ್ನು ಸೋತಿದೆ.

ಇದೀಗ ಡೆತ್ ಓವರ್ ಸ್ಪೆಷಲಿಸ್ಟ್ ಆಗಿರುವ ಮಥೀಶ ಪತಿರಾಣ ಅವರ ಆಗಮನವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬೌಲಿಂಗ್ ಬಲವನ್ನು ಹೆಚ್ಚಿಸಲಿದೆ. ಇತ್ತ ಏಪ್ರಿಲ್ 14 ರಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧಕ್ಕಾಗಿ ಕೆಕೆಆರ್ ಸಿದ್ಧತೆಗಳನ್ನು ಆರಂಭಿಸಿದ್ದು, ಈ ಪಂದ್ಯದ ಮೂಲಕ ಮಥೀಶ ಪತಿರಾಣ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಪಾದಾರ್ಪಣೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಅಂಗ್ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್ ಗ್ರೀನ್, ಫಿನ್ ಅಲೆನ್, ಮಥೀಶ ಪತಿರಾಣ, ತೇಜಸ್ವಿ ಸಿಂಗ್, ಕಾರ್ತಿಕ್ ತ್ಯಾಗಿ, ಪ್ರಶಾಂತ್ ಸೋಲಂಕಿ, ರಾಹುಲ್ ತ್ರಿಪಾಠಿ, ಟಿಮ್ ಸೈಫರ್ಟ್, ಬ್ಲೆಸ್ಸಿಂಗ್ ಮುಝರಬಾನಿ, ಸಾರ್ಥಕ್ ರಂಜನ್, ದಕ್ಷ್ ಕಮ್ರಾ, ರಚಿನ್ ರವೀಂದ್ರ, ಆಕಾಶ್ ದೀಪ್, ಹರ್ಷಿತ್ ರಾಣಾ (ಅಲಭ್ಯ).




