AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಚಿನ್ನಸ್ವಾಮಿ ಸ್ಟೇಡಿಯಂ ನಿಷೇಧ: RCB ಕಣಕ್ಕಿಳಿಯುವುದು ಎಲ್ಲಿ?

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ​ಸಿ ಬಿ) ತಂಡವು ಮುಂದಿನ ಸೀಸನ್​ನಲ್ಲಿ ಹೊಸ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ 2ನೇ ತವರು ಮೈದಾನವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Nov 12, 2025 | 2:33 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದು ಅನುಮಾನ. ಹೀಗಾಗಿಯೇ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದೆಲ್ಲಿ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 5
ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಎಂಸಿಎ. ಮಹಾರಾಷ್ಟ್ರ ಕ್ರಿಕೆಟ್  ಅಸೋಸಿಯೇಷನ್​ನ ​​(ಎಂಸಿಎ) ಅಧೀನದಲ್ಲಿರುವ ಪುಣೆಯ MCA ಸ್ಟೇಡಿಯಂನಲ್ಲಿ ಆರ್​ಸಿಬಿ ತನ್ನ ಪಂದ್ಯಗಳನ್ನು ಆಯೋಜಿಸಲು ಮಾತುಕತೆ ನಡೆಸಿದೆ. ಹೀಗಾಗಿ ಐಪಿಎಲ್ 2026 ರಲ್ಲಿ ಆರ್​ಸಿಬಿ ಪುಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.

2 / 5
ಆರ್​ಸಿಬಿ ತಂಡಕ್ಕೆ ತವರಿನಲ್ಲಿ ಪಂದ್ಯ ಆಯೋಜಿಸಲು ಸಮಸ್ಯೆಗಳಿವೆ. ಹೀಗಾಗಿ ಅವರು ಪರ್ಯಾಯ ಸ್ಥಳಗಳನ್ನು ಹುಡುಕುತ್ತಿದ್ದಾರೆ. ಈ ಬಗ್ಗೆ ನಮ್ಮೊಂದಿಗೆ ಚರ್ಚಿಸಿದ್ದಾರೆ. ಐಪಿಎಲ್ ವೇಳೆ ನಮ್ಮ ಕ್ರೀಡಾಂಗಣ ಫ್ರೀ ಇರುವುದರಿಂದ ಇಲ್ಲಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಎಂಸಿಎ ಕಾರ್ಯದರ್ಶಿ ಕಮಲೇಶ್ ಪಿಸಾಲ್ ತಿಳಿಸಿದ್ದಾರೆ.

3 / 5
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

4 / 5
ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿಲ್ಲ. ಅಲ್ಲದೆ ಮುಂಬರುವ ಐಪಿಎಲ್​ ಪಂದ್ಯಗಳಿಗೂ ಎನ್​ಒಸಿ ಸಿಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪುಣೆಯ ಸ್ಟೇಡಿಯಂ ಅನ್ನು ತನ್ನ 2ನೇ ತವರು ಮೈದಾನವಾಗಿ ಆಯ್ಕೆ ಮಾಡಲು ಮುಂದಾಗಿದೆ.

5 / 5

Published On - 2:09 pm, Wed, 12 November 25