DC vs MI: 0,1.. ಮತ್ತೆ ಮೊದಲ ಓವರ್​ನಲ್ಲೇ ಆಟ ಮುಗಿಸಿದ ರಾಹುಲ್

Updated on: Apr 04, 2026 | 6:23 PM

MI vs DC IPL 2026: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ IPL 2026 ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 162 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ಆಘಾತ ಎದುರಿಸಿತು. ಕೆಎಲ್ ರಾಹುಲ್ ಕೇವಲ 1 ರನ್‌ಗೆ ಔಟಾದರೆ, ನಿತೀಶ್ ರಾಣಾ ರನೌಟ್ ಆದರು. ಮುಂಬೈ ಪರ ಸೂರ್ಯಕುಮಾರ್ ಯಾದವ್ (51) ಅಬ್ಬರಿಸಿದರು. ಡೆಲ್ಲಿಯ ಬ್ಯಾಟಿಂಗ್ ವೈಫಲ್ಯ ತಂಡಕ್ಕೆ ಹಿನ್ನಡೆ ತಂದಿತು.

1 / 5
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಮೊದಲ ಪಂದ್ಯದಂತೆ ಮೊದಲ ಓವರ್​ನಲ್ಲೇ ಆಘಾತ ಎದುರಾಯಿತು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಮೊದಲ ಪಂದ್ಯದಂತೆ ಮೊದಲ ಓವರ್​ನಲ್ಲೇ ಆಘಾತ ಎದುರಾಯಿತು.

2 / 5

ಲಕ್ನೋ ವಿರುದ್ಧದ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಲು ಯತ್ನಿಸಿದ ಗೋಲ್ಡನ್ ಡಕ್​ಗೆ ಬಲಿಯಾಗಿದ್ದರು. ಇದರ ಹೊರತಾಗಿಯೂ ಡೆಲ್ಲಿ ತಂಡ ಲಕ್ನೋ ವಿರುದ್ಧ ಗೆದ್ದಿತ್ತು. ಹೀಗಾಗಿ ರಾಹುಲ್ ಮೇಲೆ ಹೆಚ್ಚಿನ ಒತ್ತಡ ಬಿದ್ದಿರಲಿಲ್ಲ.

3 / 5

ಆದರೆ ಮುಂಬೈ ತಂಡದ ವಿರುದ್ಧ ಉತ್ತಮ ಇನ್ನಿಂಗ್ಸ್ ಆಡಿ ಲಯ ಕಂಡುಕೊಳ್ಳುವ ಇರಾದೆಯಲ್ಲಿದ್ದ ರಾಹುಲ್ ಮತ್ತೊಮ್ಮೆ ಬಹುಬೇಗನೇ ವಿಕೆಟ್ ಒಪ್ಪಿಸಿದ್ದಾರೆ. ನಿಸ್ಸಾಂಕ ಜೊತೆ ಇನ್ನಿಂಗ್ಸ್ ಆರಂಭಿಸಿದ ರಾಹುಲ್ ಈ ಪಂದ್ಯದಲ್ಲಿ ಕೇವಲ 3 ಎಸೆತಗಳನ್ನು ಎದುರಿಸಿ ಕೇವಲ 1 ರನ್ ಬಾರಿಸಿ ಔಟಾದರು.

4 / 5

ರಾಹುಲ್ ವಿಕೆಟ್ ಪತನದ ಬಳಿಕ ಬಂದ ನಿತೀಶ್ ರಾಣಾ ಕೂಡ ಸತತ ಎರಡನೇ ಪಂದ್ಯದಲ್ಲಿ ರನ್ ಗಳಿಸಲು ವಿಫಲರಾದರು. ಈ ಪಂದ್ಯದಲ್ಲಿ ಸಿಂಗಲ್ ಕದಿಯುವ ಯತ್ನದಲ್ಲಿ ರಾಣಾ ರನೌಟ್​ಗೆ ಬಲಿಯಾದರು. ಬೌಲರ್ ಜಸ್ಪ್ರೀತ್ ಬುಮ್ರಾ ತಮ್ಮ ಅದ್ಭುತ ಥ್ರೋ ಮೂಲಕ ರಾಣಾ ವಿಕೆಟ್ ಉರುಳಿಸಿದರು.

5 / 5

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 162 ರನ್ ಕಲೆಹಾಕಿತು. ತಂಡದ ಪರ ನಾಯಕ ಸೂರ್ಯಕುಮಾರ್ 51 ರನ್​ಗಳ ಇನ್ನಿಂಗ್ಸ್ ಆಡಿದರೆ, ರೋಹಿತ್ 35 ರನ್ ಮತ್ತು ನಮನ್ ಧೀರ್ 28 ರನ್ ಗಳಿಸಿದರು. ದೆಹಲಿ ಪರ ಮುಖೇಶ್ ಕುಮಾರ್ ಎರಡು ವಿಕೆಟ್ ಪಡೆದರೆ, ಎನ್‌ಗಿಡಿ, ಪಟೇಲ್, ವಿಪ್ರಾಜ್ ಮತ್ತು ನಟರಾಜನ್ ತಲಾ ಒಂದು ವಿಕೆಟ್ ಪಡೆದರು.

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us