AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2026: 16.75 ಕೋಟಿ ರೂ. ನಷ್ಟದೊಂದಿಗೆ ಆರ್​ಸಿಬಿ ಸೇರಿದ ವೆಂಕಟೇಶ್ ಅಯ್ಯರ್

Venkatesh Iyer Auction Price: ಐಪಿಎಲ್ 2026 ಮಿನಿ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ RCB ಸೇರಿಕೊಂಡಿದ್ದಾರೆ. ಕಳೆದ ಮೆಗಾ ಹರಾಜಿನಲ್ಲಿ 23.75 ಕೋಟಿ ಪಡೆದಿದ್ದ ವೆಂಕಟೇಶ್​ ಈ ಬಾರಿ ಕಡಿಮೆ ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಅವರ ಕಳಪೆ ಪ್ರದರ್ಶನವೇ ಇದಕ್ಕೆ ಕಾರಣ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ನೆರವಾಗಬಲ್ಲ ಅಯ್ಯರ್ ಆರ್​ಸಿಬಿಗೆ ಉತ್ತಮ ಆಯ್ಕೆ ಎನ್ನಲಾಗಿದೆ.

ಪೃಥ್ವಿಶಂಕರ
|

Updated on: Dec 16, 2025 | 7:16 PM

Share
ಅಬುಧಾಬಿಯಲ್ಲಿ ನಡೆದ ಐಪಿಎಲ್ 2026 ಮಿನಿ ಹರಾಜಿನಲ್ಲಿ ಭಾರತದ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಹಿಂದಿನ ಮೆಗಾ ಹರಾಜಿನಲ್ಲಿ 23.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಕೊಂಡಿದ್ದ ವೆಂಕಟೇಶ್, ಈ ಮಿನಿ ಹರಾಜಿನಲ್ಲಿ 7 ಕೋಟಿಗೆ ಮಾರಾಟವಾದರು.

1 / 5
ವಾಸ್ತವವಾಗಿ ಕಳೆದ ಬಾರಿಯ ಮೆಗಾ ಹರಾಜಿನಲ್ಲಿ ಇದೇ ವೆಂಕಟೇಶ್​ಗಾಗಿ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಭಾರಿ ಪೈಪೋಟಿ ನಡೆದಿತ್ತು. ಅಂತಿಮವಾಗಿ ಬಿಡ್ ಗೆಲ್ಲುವಲ್ಲಿ ಕೆಕೆಆರ್ ಯಶಸ್ವಿಯಾಗಿತ್ತು. ಈ ಬಾರಿಯೂ ಇದೇ ಎರಡು ತಂಡಗಳು ಪೈಪೋಟಿಗೆ ಬಿದ್ದಿದ್ದವು. ಆದರೆ ಈ ಬಾರಿ ಬಿಡ್ ಗೆದ್ದಿದ್ದು ಆರ್​ಸಿಬಿ, ಅದು ಕೇವಲ 7 ಕೋಟಿ ರೂ.ಗಳಿಗೆ.

2 / 5
ಕಳೆದ ಆವೃತ್ತಿಯಲ್ಲಿ ಬರೋಬ್ಬರಿ 23.75 ಕೋಟಿ ರೂ. ಪಡೆದಿದ್ದ ವೆಂಕಟೇಶ್​, ಈ ಬಾರಿ ಪಡೆದಿದ್ದು, 7 ಕೋಟಿ. ಅಂದರೆ ವೆಂಕಟೇಶ್​ ಖಜಾನೆಗೆ 16.75 ಕೋಟಿ ರೂ. ನಷ್ಟವುಂಟಾಗಿದೆ. ವೆಂಕಟೇಶ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಆರ್​ಸಿಬಿ ನೆರವಾಗಲಿದ್ದು, ಅವರ ಖರೀದಿ ತಂಡದ ಉತ್ತಮ ನಿರ್ಧಾರ ಎನ್ನಲಾಗುತ್ತಿದೆ.

3 / 5
ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ವೆಂಕಟೇಶ್​ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ಡಿಂಗ್ ಮಾಡಿತು. ನಂತರ ಗುಜರಾತ್ ಟೈಟನ್ಸ್ ಬಿಡ್ಡಿಂಗ್ ಆರಂಭಿಸಿತು. ಗುಜರಾತ್ ಹೊರಬಿದ್ದ ಬಳಿಕ ಕಣಕ್ಕಿಳಿದ ಆರ್​ಸಿಬಿ ಬಿಡ್ ಅನ್ನು 7 ಕೋಟಿಗೆ ಏರಿಸಿ ಅಂತಿಮವಾಗಿ ವೆಂಕಟೇಶ್​ರನ್ನು ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

4 / 5
ಆದಾಗ್ಯೂ, ಕಳೆದ ಆವೃತ್ತಿಯಲ್ಲಿ ವೆಂಕಟೇಶ್ ಅವರ ಪ್ರದರ್ಶನ ತೀರ ಕಳಪೆಯಾಗಿತ್ತು. ಹೀಗಾಗಿ ಅವರನ್ನು ಕೆಕೆಆರ್ ಕೈಬಿಟ್ಟಿತು. ವೆಂಕಟೇಶ್ ಅಯ್ಯರ್ 2021 ರಿಂದ ಐಪಿಎಲ್‌ನಲ್ಲಿ ಆಡುತ್ತಿದ್ದು, ಇದುವರೆಗೆ ಐಪಿಎಲ್‌ನಲ್ಲಿ ಒಟ್ಟು 62 ಪಂದ್ಯಗಳನ್ನು ಆಡಿದ್ದಾರೆ. 29.95 ರ ಸರಾಸರಿಯಲ್ಲಿ 1,468 ರನ್ ಗಳಿಸಿದ್ದಾರೆ. 2024 ರಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ವೆಂಕಟೇಶ್, 370 ರನ್ ಬಾರಿಸಿದ್ದರು. ಆದಾಗ್ಯೂ, ಕಳೆದ ಆವೃತ್ತಿಯಲ್ಲಿ 11 ಪಂದ್ಯಗಳನ್ನಾಡಿದ ಅವರು ಕೇವಲ 142 ರನ್‌ ಗಳಿಸಿದರು. ಇದು ಅವರನ್ನು ಕೆಕೆಆರ್‌ನಿಂದ ಬಿಡುಗಡೆ ಮಾಡಲು ಕಾರಣವಾಯಿತು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ

ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು

‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು

ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ

KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್

ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು

ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ

ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ

ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ