IPL 2026: ಮೂರು ಪಂದ್ಯಗಳಿಗೆ ಆಸ್ಟ್ರೆಲಿಯನ್ ವೇಗಿ ಅಲಭ್ಯ

Updated on: Apr 07, 2026 | 7:23 PM

IPL 2026: ಆಸ್ಟ್ರೇಲಿಯಾದ ವೇಗದ ಬೌಲರ್​ ಮಿಚೆಲ್ ಸ್ಟಾರ್ಕ್​ ಇನ್ನೂ ಕೂಡ ಐಪಿಎಲ್​ಗಾಗಿ ಆಗಮಿಸಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನಾಗಿರುವ ಸ್ಟಾರ್ಕ್​ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಐಪಿಎಲ್​ನ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಮುಂದುವರೆಸಿರುವ ಸ್ಟಾರ್ಕ್​ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಮುಂದಿನ ಮೂರು ಮ್ಯಾಚ್​ಗಳಿಗೂ ಅಲಭ್ಯರಾಗಲಿದ್ದಾರೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರಲ್ಲಿ ಭರ್ಜರಿ ಆರಂಭ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ, ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್ (Mitchell Starc) ಅವರು ಗಾಯದ ಸಮಸ್ಯೆಯಿಂದಾಗಿ ಮುಂಬರುವ ಕನಿಷ್ಠ ಮೂರು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರಲ್ಲಿ ಭರ್ಜರಿ ಆರಂಭ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇದೀಗ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ, ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್ (Mitchell Starc) ಅವರು ಗಾಯದ ಸಮಸ್ಯೆಯಿಂದಾಗಿ ಮುಂಬರುವ ಕನಿಷ್ಠ ಮೂರು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

2 / 6

ಇತ್ತೀಚೆಗೆ ನಡೆದ 2025-26ರ ಆಶಸ್ ಸರಣಿಯ ವೇಳೆ ಸ್ಟಾರ್ಕ್ ಅವರ ಭುಜ ಮತ್ತು ಮೊಣಕೈಗೆ ತೀವ್ರ ಪೆಟ್ಟಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಪ್ರಸ್ತುತ ಆಸ್ಟ್ರೇಲಿಯಾದಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.  ಅಲ್ಲದೆ ಸಂಪೂರ್ಣ ಗುಣಮುಖರಾಗದ ಹೊರತು ಅವರು ಮೈದಾನಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

3 / 6

ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ಮೂರು ಪಂದ್ಯಗಳಿಂದ ಅವರು ಹೊರಗುಳಿಯಲಿದ್ದಾರೆ. ಅದರಂತೆ ಏಪ್ರಿಲ್ 8 ರಂದು ನಡೆಯಲಿರುವ ಗುಜರಾತ್ ಟೈಟಾನ್ಸ್, ಏಪ್ರಿಲ್ 11 ರಂದು ಜರುಗಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಏಪ್ರಿಲ್ 18 ರಂದು ನಡೆಯಲಿರುವ ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಮಿಚೆಲ್ ಸ್ಟಾರ್ಕ್​ ಅಲಭ್ಯರಾಗಲಿದ್ದಾರೆ.

4 / 6

ಇನ್ನು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಏಪ್ರಿಲ್ 21 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಂದರೆ ಮಿಚೆಲ್ ಸ್ಟಾರ್ಕ್​ ಐಪಿಎಲ್​​ನಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಸಹ ಖಚಿತವಾಗಿಲ್ಲ.

5 / 6

ಇತ್ತ ಸ್ಟಾರ್ಕ್ ಅನುಪಸ್ಥಿತಿಯಲ್ಲೂ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದಿರುವ ಡೆಲ್ಲಿ ಒಟ್ಟು 4 ಅಂಕಗಳನ್ನು ಸಂಪಾದಿಸಿದೆ. ಸದ್ಯ ಮುಖೇಶ್ ಕುಮಾರ್, ಟಿ. ನಟರಾಜನ್ ಮತ್ತು ಲುಂಗಿ ಎನ್ಗಿಡಿ ಅವರು ವೇಗದ ಬೌಲಿಂಗ್ ವಿಭಾಗವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಇವರೊಂದಿಗೆ ಸ್ಟಾರ್ಕ್​ ಸೇರಿದಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗುವುದರಲ್ಲಿ ಅನುಮಾನವೇ ಇಲ್ಲ.

6 / 6

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್ (ನಾಯಕ), ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us