AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮೊಹಮ್ಮದ್ ಶಮಿಗಾಗಿ ಕಾವ್ಯಾ ಮಾರನ್ ಹಿಂದೆ ಬಿದ್ದ 2 ತಂಡಗಳು

IPL 2026 Trade Window: ಐಪಿಎಲ್ 2026 ಹರಾಜಿಗೂ ಮುನ್ನ ನವೆಂಬರ್ 15ರ ಗಡುವು ಸಮೀಪಿಸುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊಹಮ್ಮದ್ ಶಮಿ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕಳೆದ ಸೀಸನ್‌ನಲ್ಲಿ ಕಳಪೆ ಪ್ರದರ್ಶನ ಹಾಗೂ ಇಂಜುರಿಯಿಂದಾಗಿ ಶಮಿ ಟೀಂ ಇಂಡಿಯಾದಲ್ಲೂ ಸ್ಥಾನ ಕಳೆದುಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಶಮಿ ಅವರನ್ನು ಟ್ರೇಡಿಂಗ್ ವಿಂಡೋ ಮೂಲಕ ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಆಸಕ್ತಿ ತೋರಿಸಿವೆ.

ಪೃಥ್ವಿಶಂಕರ
|

Updated on: Nov 14, 2025 | 10:45 AM

Share
ಐಪಿಎಲ್ 2026 ರ ಹರಾಜಿಗೂ ಮೊದಲು ಎಲ್ಲಾ ತಂಡಗಳು ತಾವು ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದಕ್ಕೆ ಕೊನೆಯ ದಿನಾಂಕ ನವೆಂಬರ್ 15 ಆಗಿದೆ. ಇದಕ್ಕೂ ಮೊದಲು, ಕೆಲವು ಫ್ರಾಂಚೈಸಿಗಳು ಟ್ರೇಡಿಂಗ್ ವಿಂಡೋದಡಿಯಲ್ಲಿ ಇತರ ತಂಡಗಳಲ್ಲಿರುವ ಕೆಲವು ಆಟಗಾರರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸುತ್ತಿವೆ.

1 / 6
ಅದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಟ್ರೇಡಿಂಗ್ ಒಪ್ಪಂದದ ಬಗ್ಗೆ ಬಹಳ ಹಿಂದಿನಿಂದಲೂ ಸುದ್ದಿ ಹರಿದಾಡುತ್ತಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆಯೂ ಮಾತುಕತೆ ನಡೆಯುತ್ತಿದೆ. ಇದೆಲ್ಲದರ ನಡುವೆ, ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲಿರುವ ವೇಗಿ ಮೊಹಮ್ಮದ್ ಶಮಿ ಹಿಂದೆ ಎರಡೆರಡು ಫ್ರಾಂಚೈಸಿಗಳು ಬಿದ್ದಿವೆ ಎನ್ನಲಾಗುತ್ತಿದೆ.

2 / 6
ಐಪಿಎಲ್ 2026 ರ ಹರಾಜಿಗೆ ಮುನ್ನ ಸನ್‌ರೈಸರ್ಸ್ ಹೈದರಾಬಾದ್‌ನ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಮೇಲೆ ಎರಡು ತಂಡಗಳು ಕಣ್ಣಿಟ್ಟಿವೆ. ಕ್ರಿಕ್‌ಬಜ್ ವರದಿಯ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಶಮಿ ಅವರನ್ನು ತಂಡಕ್ಕೆ ಖರೀದಿ ಮಾಡಲು ಆಸಕ್ತಿ ಹೊಂದಿವೆ ಎಂದು ವರದಿಯಾಗಿದೆ.

3 / 6
ಕಳೆದ ಮೆಗಾ ಹರಾಜಿನಲ್ಲಿ ಮೊಹಮ್ಮದ್ ಶಮಿ ಅವರನ್ನು ಸನ್‌ರೈಸರ್ಸ್ ಹೈದರಾಬಾದ್‌ ಫ್ರಾಂಚೈಸಿ 10 ಕೋಟಿಗೆ ಖರೀದಿಸಿತ್ತು ಎಂಬುದು ಗಮನಿಸಬೇಕಾದ ಸಂಗತಿ. ಆದಾಗ್ಯೂ, ಶಮಿ ಅವರ ಪ್ರದರ್ಶನವು ಕಳಪೆಯಾಗಿದ್ದು, ಕೇವಲ 6 ವಿಕೆಟ್‌ಗಳನ್ನು ಮಾತ್ರ ಪಡೆದುಕೊಂಡಿದ್ದರು. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್‌ ಫ್ರಾಂಚೈಸಿ ಶಮಿ ಅವರನ್ನು ಬಿಟ್ಟುಕೊಡುವ ಸಾಧ್ಯತೆಗಳಿವೆ.

4 / 6
ವರದಿಗಳ ಪ್ರಕಾರ, ಶಮಿ ಅವರನ್ನು ನಗದು ಒಪ್ಪಂದದ ಮೂಲಕ ಇತರ ತಂಡಕ್ಕೆ ಕಳುಹಿಸುವ ನಿರ್ಧಾರಕ್ಕೆ ಹೈದರಾಬಾದ್ ಫ್ರಾಂಚೈಸಿ ಬರಬಹುದು. ಇದರರ್ಥ ಸನ್‌ರೈಸರ್ಸ್ ಹೈದರಾಬಾದ್, ಶಮಿ ಬದಲಿಗೆ ಬೇರೆ ಆಟಗಾರನನ್ನು ವಿನಿಮಯ ಮಾಡಿಕೊಳ್ಳುವುದಿಲ್ಲ.

5 / 6
2013 ರಿಂದ ಐಪಿಎಲ್​ನಲ್ಲಿ ಆಡುತ್ತಿರುವ ಶಮಿ ಕಳೆದ 12 ವರ್ಷಗಳಲ್ಲಿ 119 ಪಂದ್ಯಗಳನ್ನಾಡಿದ್ದು 133 ವಿಕೆಟ್‌ಗಳನ್ನು ಪಡೆದಿದ್ದಾರೆ. 2022 ಮತ್ತು 2023 ರಲ್ಲಿ ಗುಜರಾತ್ ಟೈಟಾನ್ಸ್ ಪರ ಉತ್ತಮ ಪ್ರದರ್ಶನ ನೀಡಿದ್ದ ಶಮಿ, 2022 ರಲ್ಲಿ 20 ಮತ್ತು 2023 ರಲ್ಲಿ 28 ವಿಕೆಟ್‌ಗಳನ್ನು ಪಡೆದರು. ಆದಾಗ್ಯೂ ಇಂಜುರಿ ಸಮಸ್ಯೆ ಶಮಿ ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರಿವೆ. ಇದರಿಂದಾಗಿ ಅವರಿಗೂ ಟೀಂ ಇಂಡಿಯಾದಲ್ಲೂ ಸ್ಥಾನ ಸಿಕ್ಕಿಲ್ಲ.

6 / 6
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ