AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ತಂಡದ ನಾಯಕ ಯಾರೆಂದು ತಿಳಿಸಿದ ಧೋನಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅತ್ಯಂತ ಹೀನಾಯ ಪ್ರದರ್ಶನ ನೀಡಿತ್ತು. ಲೀಗ್ ಹಂತದಲ್ಲಿ ಕಣಕ್ಕಿಳಿದ 14 ಪಂದ್ಯಗಳಲ್ಲಿ ಸಿಎಸ್​ಕೆ ತಂಡ ಗೆದ್ದಿದ್ದು ಕೇವಲ 4 ಮ್ಯಾಚ್ ಮಾತ್ರ. ಪರಿಣಾಮ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಅಭಿಯಾನ ಅಂತ್ಯಗೊಳಿಸಬೇಕಾಯಿತು.

ಝಾಹಿರ್ ಯೂಸುಫ್
|

Updated on:Aug 04, 2025 | 3:01 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವವರು ಯಾರು? ಇಂತಹದೊಂದು ಪ್ರಶ್ನೆಗಳು ಹುಟ್ಟಿಕೊಳ್ಳಲು ಮುಖ್ಯ ಕಾರಣ ತಂಡದ ಬಗ್ಗೆ ಕೇಳಿ ಬರುತ್ತಿರುವ ಕೆಲ ಊಹಾಪೋಹಗಳು. ಅಂದರೆ ಸಿಎಸ್​ಕೆ ತಂಡಕ್ಕೆ ಸಂಜು ಸ್ಯಾಮ್ಸನ್ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.

1 / 5
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಆಸಕ್ತಿ ಹೊಂದಿದ್ದು, ಹೀಗಾಗಿ ಅವರನ್ನು ಟ್ರೇಡ್ ಮಾಡಿಕೊಳ್ಳುವ ಅಥವಾ ಹರಾಜಿನ ಮೂಲಕ ಖರೀದಿಸುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ನಡುವೆ ಸ್ಯಾಮ್ಸನ್ ಅವರಿಗೆ ನಾಯಕತ್ವ ನೀಡಲಿದ್ದಾರೆ ಎಂಬ ಸುದ್ದಿಗಳು ಕೂಡ ಮಹತ್ವ ಪಡೆದುಕೊಂಡಿದೆ.

2 / 5
ಒಂದೆಡೆ ಸ್ಯಾಮ್ಸನ್ ಎಂಟ್ರಿಯ ಸುದ್ದಿಯು ದಿನದಿಂದ ದಿನಕ್ಕೆ ಮಹತ್ವ ಪಡೆದುಕೊಳ್ಳುತ್ತಿದ್ದರೆ, ಮತ್ತೊಂದೆಡೆ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಾರು ಮುನ್ನಡೆಸುವವರು ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಕಳೆದ ಸೀಸನ್​ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ರುತುರಾಜ್ ಗಾಯಕ್ವಾಡ್ ಅವರೇ ಮುಂದಿನ ಸೀಸನ್​ನಲ್ಲೂ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಧೋನಿ ತಿಳಿಸಿದ್ದಾರೆ.

3 / 5
ಚೆನ್ನೈನನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಧೋನಿ, ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಮುಂದಿನ ಸೀಸನ್​ನಲ್ಲಿ ತಂಡಕ್ಕೆ ಮರಳಲಿದ್ದಾರೆ. ಅಲ್ಲದೆ ಅವರೇ ಕ್ಯಾಪ್ಟನ್ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಐಪಿಎಲ್ 2025 ರ ಸೀಸನ್​ ನಡುವೆ ಗಾಯಗೊಂಡಿದ್ದ ರುತುರಾಜ್ ಅರ್ಧದಲ್ಲೇ ಟೂರ್ನಿಯಿಂದ ಹಿಂದೆ ಸರಿದಿದ್ದರು.

4 / 5
ಹೀಗಾಗಿ ಸಿಎಸ್​ಕೆ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರು. ಇದೀಗ ಮುಂದಿನ ಸೀಸನ್​ನಲ್ಲಿ ನಾನು ನಾಯಕನಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದನ್ನು ಧೋನಿ ಖಚಿತಪಡಿಸಿದ್ದಾರೆ. ಇದರ ಜೊತೆಗೆ ರುತುರಾಜ್ ಗಾಯಕ್ವಾಡ್ ಅವರೇ ಕ್ಯಾಪ್ಟನ್ ಪಟ್ಟದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಸಹ ದೃಢಪಡಿಸಿದ್ದಾರೆ.

5 / 5

Published On - 2:53 pm, Mon, 4 August 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​