IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅತ್ಯಂತ ಹೀನಾಯ ಪ್ರದರ್ಶನ ನೀಡಿತ್ತು. ಲೀಗ್ ಹಂತದಲ್ಲಿ ಕಣಕ್ಕಿಳಿದ 14 ಪಂದ್ಯಗಳಲ್ಲಿ ಸಿಎಸ್‌ಕೆ ತಂಡ ಗೆದ್ದಿದ್ದು ಕೇವಲ 4 ಮ್ಯಾಚ್ ಮಾತ್ರ. ಪರಿಣಾಮ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಅಭಿಯಾನ ಅಂತ್ಯಗೊಳಿಸಬೇಕಾಯಿತು.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವವರು ಯಾರು? ಇಂತಹದೊಂದು ಪ್ರಶ್ನೆಗಳು ಹುಟ್ಟಿಕೊಳ್ಳಲು ಮುಖ್ಯ ಕಾರಣ ತಂಡದ ಬಗ್ಗೆ ಕೇಳಿ ಬರುತ್ತಿರುವ ಕೆಲ ಊಹಾಪೋಹಗಳು. ಅಂದರೆ ಸಿಎಸ್‌ಕೆ ತಂಡಕ್ಕೆ ಸಂಜು ಸ್ಯಾಮ್ಸನ್ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.
1 / 5
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಆಸಕ್ತಿ ಹೊಂದಿದ್ದು, ಹೀಗಾಗಿ ಅವರನ್ನು ಟ್ರೇಡ್ ಮಾಡಿಕೊಳ್ಳುವ ಅಥವಾ ಹರಾಜಿನ ಮೂಲಕ ಖರೀದಿಸುವ ಸಾಧ್ಯತೆಯಿದೆ. ಈ ಸಾಧ್ಯತೆಗಳ ನಡುವೆ ಸ್ಯಾಮ್ಸನ್ ಅವರಿಗೆ ನಾಯಕತ್ವ ನೀಡಲಿದ್ದಾರೆ ಎಂಬ ಸುದ್ದಿಗಳು ಕೂಡ ಮಹತ್ವ ಪಡೆದುಕೊಂಡಿದೆ.
2 / 5
ಒಂದೆಡೆ ಸ್ಯಾಮ್ಸನ್ ಎಂಟ್ರಿಯ ಸುದ್ದಿಯು ದಿನದಿಂದ ದಿನಕ್ಕೆ ಮಹತ್ವ ಪಡೆದುಕೊಳ್ಳುತ್ತಿದ್ದರೆ, ಮತ್ತೊಂದೆಡೆ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಾರು ಮುನ್ನಡೆಸುವವರು ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಕಳೆದ ಸೀಸನ್ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ರುತುರಾಜ್ ಗಾಯಕ್ವಾಡ್ ಅವರೇ ಮುಂದಿನ ಸೀಸನ್ನಲ್ಲೂ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಧೋನಿ ತಿಳಿಸಿದ್ದಾರೆ.
3 / 5
ಚೆನ್ನೈನನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಧೋನಿ, ಸಿಎಸ್‌ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಮುಂದಿನ ಸೀಸನ್ನಲ್ಲಿ ತಂಡಕ್ಕೆ ಮರಳಲಿದ್ದಾರೆ. ಅಲ್ಲದೆ ಅವರೇ ಕ್ಯಾಪ್ಟನ್ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಐಪಿಎಲ್ 2025 ರ ಸೀಸನ್ ನಡುವೆ ಗಾಯಗೊಂಡಿದ್ದ ರುತುರಾಜ್ ಅರ್ಧದಲ್ಲೇ ಟೂರ್ನಿಯಿಂದ ಹಿಂದೆ ಸರಿದಿದ್ದರು.
4 / 5
ಹೀಗಾಗಿ ಸಿಎಸ್‌ಕೆ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸಿದ್ದರು. ಇದೀಗ ಮುಂದಿನ ಸೀಸನ್ನಲ್ಲಿ ನಾನು ನಾಯಕನಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬುದನ್ನು ಧೋನಿ ಖಚಿತಪಡಿಸಿದ್ದಾರೆ. ಇದರ ಜೊತೆಗೆ ರುತುರಾಜ್ ಗಾಯಕ್ವಾಡ್ ಅವರೇ ಕ್ಯಾಪ್ಟನ್ ಪಟ್ಟದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಸಹ ದೃಢಪಡಿಸಿದ್ದಾರೆ.