IPL 2026: 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ ಭಾರತದ ಇಬ್ಬರು ಆಟಗಾರರು

Updated on: Dec 02, 2025 | 9:31 AM

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಲಿದ್ದು, ಇದಾದ ಬಳಿಕ ಫೈನಲ್ ಪಟ್ಟಿ ರಿಲೀಸ್ ಆಗಲಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರು ಮಾತ್ರ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಡಿಸೆಂಬರ್ 16 ರಂದು ನಡೆಯಲಿರುವ ಮಿನಿ ಆಕ್ಷನ್​ಗಾಗಿ ಬರೋಬ್ಬರಿ 1355 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 45 ಆಟಗಾರರು 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದಾರೆ.

2 / 5
ಗರಿಷ್ಠ ಮೂಲ ಬೆಲೆ ಘೋಷಿಸಿರುವ 45 ಆಟಗಾರರಲ್ಲಿ ಕೇವಲ ಇಬ್ಬರು ಭಾರತೀಯರು ಮಾತ್ರ ಕಾಣಿಸಿಕೊಂಡಿದ್ದಾರೆ. ಅಂದರೆ 43 ವಿದೇಶಿ ಆಟಗಾರರು ಹಾಗೂ ಇಬ್ಬರು ಭಾರತೀಯರು ಮಾತ್ರ ತಮ್ಮ ಆರಂಭಿಕ ಹರಾಜು ಮೊತ್ತ 2 ಕೋಟಿ ರೂ. ಎಂದು ಘೋಷಿಸಿದ್ದಾರೆ. ಹೀಗೆ 2 ಕೋಟಿ ರೂ. ಬೇಸ್ ಪ್ರೈಸ್ ಘೋಷಿಸಿರುವ ಟೀಮ್ ಇಂಡಿಯಾ ಆಟಗಾರರು ಯಾರೆಂದರೆ...

3 / 5
ವೆಂಕಟೇಶ್ ಅಯ್ಯರ್: ಐಪಿಎಲ್ 2025 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ವೆಂಕಟೇಶ್ ಅಯ್ಯರ್ ಅವರನ್ನು ಬರೋಬ್ಬರಿ 23.5 ಕೋಟಿ ರೂ.ಗೆ ಖರೀದಿಸಿತ್ತು. ಇದಾಗ್ಯೂ ಅಯ್ಯರ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಈ ಬಾರಿ ಅವರನ್ನು ರಿಲೀಸ್ ಮಾಡಲಾಗಿದೆ. ಇದೀಗ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ವೆಂಕಟೇಶ್ ಅಯ್ಯರ್ ಮಿನಿ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

4 / 5
ರವಿ ಬಿಷ್ಣೋಯ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಕೂಡ ಐಪಿಎಲ್ ಹರಾಜಿಗಾಗಿ ಗರಿಷ್ಠ ಮೂಲ ಬೆಲೆ ಘೋಷಿಸಿದ್ದಾರೆ. ಕಳೆದ ಸೀಸನ್​ನಲ್ಲಿ ಎಲ್​ಎಸ್​ಜಿ ಪರ 11 ಕೋಟಿ ರೂ.ಗೆ ಆಡಿದ್ದ ಬಿಷ್ಣೋಯ್ ಈ ಬಾರಿ 2 ಕೋಟಿ ರೂ. ಬೇಸ್​ ಪ್ರೈಸ್​ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5
ಆದರೆ 2 ಕೋಟಿ ರೂ. ಮೂಲ ಬೆಲೆ ಘೋಷಿಸಿರುವ 45 ಆಟಗಾರರ ಹೆಸರುಗಳು ಡಿಸೆಂಬರ್ 16 ರಂದು ನಡೆಯಲಿರುವ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ 1355 ಆಟಗಾರರ ಪಟ್ಟಿಯನ್ನು ಶಾರ್ಟ್​ ಲಿಸ್ಟ್ ಮಾಡಲಿದ್ದು, ಇದಾದ ಬಳಿಕ ಅಂತಿಮ ಹರಾಜು ಪಟ್ಟಿ ಸಿದ್ಧವಾಗಲಿದೆ. ಅದರಂತೆ ಕೋಟಿ ಬೆಲೆಯ ಎಷ್ಟು ಆಟಗಾರರು ಫೈನಲ್​ ಲಿಸ್ಟ್​ನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.