- Kannada News Photo gallery Cricket photos IPL 2026: Pat Cummins is likely to miss the first few matches
IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ SRH ತಂಡಕ್ಕೆ ಆಘಾತ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2026) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ಮುಖಾಮುಖಿಯಾಗಲಿದೆ. ಆರ್ಸಿಬಿ-ಎಸ್ಆರ್ಹೆಚ್ ನಡುವಣ ಈ ಹೈವೋಲ್ಟೇಜ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪಡೆಯ ನಾಯಕನೇ ಅಲಭ್ಯರಾಗಲಿದ್ದಾರೆ.
Updated on:Mar 17, 2026 | 7:44 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಶುರುವಾಗಲು ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಮಾರ್ಚ್ 28 ರಿಂದ ಆರಂಭವಾಗಲಿರುವ ಐಪಿಎಲ್ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ SRH ತಂಡದ ಸ್ಟಾರ್ ಆಟಗಾರ ಅಲಭ್ಯರಾಗುವುದು ಖಚಿತವಾಗಿದೆ.

ಹೌದು, ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಬಾರಿಯ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಅಂದರೆ ಮೊದಲ ಹಂತದ ಪಂದ್ಯಗಳ ಆಸ್ಟ್ರೇಲಿಯನ್ ಆಲ್ರೌಂಡರ್ ಕಾಣಿಸಿಕೊಳ್ಳುವುದು ಅನುಮಾನ ಎಂದು ವರದಿಯಾಗಿದೆ.

ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಈ ಸಮಸ್ಯೆಯಿಂದ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅಲ್ಲದೆ ಇದೇ ನೋವಿನ ಕಾರಣ ಅವರು ಟಿ20 ವಿಶ್ವಕಪ್ನಿಂದಲೂ ಹೊರಗುಳಿದಿದ್ದರು. ಇದೀಗ ಐಪಿಎಲ್ನ ಆರಂಭಿಕ ಪಂದ್ಯಗಳಿಂದಲೂ ಹೊರಗುಳಿಯಲು ನಿರ್ಧರಿಸಿದ್ದಾರೆ.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳುವುದಿಲ್ಲ. ಇನ್ನು ಸಂಪೂರ್ಣವಾಗಿ ಫಿಟ್ ಆದರೆ ಮಾತ್ರ ಅವರು ಉಳಿದ ಪಂದ್ಯಗಳ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಅಂದರೆ ಈ ಬಾರಿಯ ಐಪಿಎಲ್ನಲ್ಲಿ ಪ್ಯಾಟ್ ಕಮಿನ್ಸ್ ಆಡಲಿದ್ದಾರೆ ಎಂಬುದು ಇನ್ನೂ ಸಹ ಕನ್ಫರ್ಮ್ ಆಗಿಲ್ಲ. ಏಪ್ರಿಲ್ ಮೊದಲ ವಾರದಲ್ಲಿ ಕಮಿನ್ಸ್ ಅವರ ಫಿಟ್ನೆಸ್ ಟೆಸ್ಟ್ ನಡೆಯಲಿದ್ದು, ಇದಾದ ಬಳಿಕವಷ್ಟೇ ಅವರಿಗೆ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಸಿಗಲಿದೆ. ಹೀಗಾಗಿ ಮೊದಲ ಹಂತದ ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಹೊಸ ನಾಯಕ ಮುನ್ನಡೆಸುವುದನ್ನು ಎದುರು ನೋಡಬಹುದು.

ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಬ್ರೈಡನ್ ಕಾರ್ಸ್, ಜಯದೇವ್ ಉನದ್ಕತ್, ಎಶಾನ್ ಮಾಲಿಂಗ, ಝೀಶಾನ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಓಂಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್ಸ್ಟೋನ್ಸ್, ಶಿವಂ ಮಾವಿ, ಜ್ಯಾಕ್ ಎಡ್ವರ್ಡ್ಸ್, ಪ್ಯಾಟ್ ಕಮ್ಮಿನ್ಸ್ (ಆರಂಭಿಕ ಪಂದ್ಯಗಳಿಗೆ ಅಲಭ್ಯ),
Published On - 7:37 am, Tue, 17 March 26
