RCB ತಂಡಕ್ಕೆ ಸ್ಫೋಟಕ ದಾಂಡಿಗ ರಿಎಂಟ್ರಿ..!
IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಕಾಯುವಿಕೆ ಅಂತ್ಯಗೊಂಡಿದೆ! ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್‌ಗೆ ತೆರಳಿದ್ದ ತಂಡದ ಸ್ಫೋಟಕ ಓಪನರ್ ಇದೀಗ ಭಾರತಕ್ಕೆ ಮರಳಿದ್ದಾರೆ. ಪ್ಲೇ-ಆಫ್ ಹಂತದ ನಿರ್ಣಾಯಕ ಪಂದ್ಯಗಳು ಹತ್ತಿರವಿರುವಾಗಲೇ ಹೊಡಿಬಡಿ ದಾಂಡಿಗ ಮರಳಿರುವುದು ಆರ್‌ಸಿಬಿ ತಂಡದ ಆತ್ಮವಿಶ್ವಾಸವನ್ನು ದುಪ್ಪಟ್ಟುಗೊಳಿಸಿದೆ.
Updated on: May 10, 2026 | 11:24 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇ-ಆಫ್ ರೇಸ್ ರಂಗೇರುತ್ತಿರುವ ಹೊತ್ತಿನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಬಿಗ್ ಬೂಸ್ಟ್ ಸಿಕ್ಕಿದೆ! ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ (Phil Salt) ಮತ್ತೆ ಭಾರತಕ್ಕೆ ಮರಳಿದ್ದಾರೆ.

ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಸಾಲ್ಟ್ ಅವರ ಎಡಗೈ ಬೆರಳಿಗೆ ಗಾಯವಾಗಿತ್ತು. ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಗಾಗಿ ಅವರು ಇಂಗ್ಲೆಂಡ್‌ಗೆ ಮರಳಿದ್ದರು. ಅವರ ಅನುಪಸ್ಥಿತಿಯಲ್ಲಿ ಜೇಕಬ್ ಬೆಥೆಲ್ ಆರಂಭಿಕರಾಗಿ ಕಾಣಿಸಿಕೊಂಡಿದ್ದರು.

ಇದೀಗ ಇಂಗ್ಲೆಂಡ್ನಿಂದ ಫಿಲ್ ಸಾಲ್ಟ್ ಭಾರತಕ್ಕೆ ಮರಳಿದ್ದಾರೆ. ಆರ್‌ಸಿಬಿ ಮೂಲಗಳ ಮಾಹಿತಿ ಪ್ರಕಾರ, ಸಾಲ್ಟ್ ಇಂದು ಮುಂಜಾನೆ ಅಹಮದಾಬಾದ್‌ಗೆ ಬಂದಿಳಿದಿದ್ದಾರೆ. ಇಲ್ಲಿಂದಲೇ ಅವರು ಛತ್ತೀಗಢ್ಗೆ ತೆರಳಲಿದ್ದು, ರಾಯ್ಪುರ್ನಲ್ಲಿರುವ ಆರ್‌ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.ಅನುಪಸ್ಥಿತಿಯಲ್ಲಿ ಜೇಕಬ್ ಬೆಥೆಲ್ ಆರಂಭಿಕರಾಗಿ ಕಾಣಿಸಿಕೊಂಡಿದ್ದರು.

ಇದಾಗ್ಯೂ ಫಿಲ್ ಸಾಲ್ಟ್ ಇಂದಿನ ಮ್ಯಾಚ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಏಕೆಂದರೆ ಗಾಯದ ಕಾರಣ ಸಾಲ್ಟ್ ಕಳೆದ ಒಂದು ವಾರದಿಂದ ಮೈದಾನದಿಂದ ಹೊರಗುಳಿದಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ಇನ್ನು ಮೇ 13 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಫಿಲ್ ಸಾಲ್ಟ್ ಮತ್ತೆ ಮೈದಾನಕ್ಕಿಳಿಯಬಹುದು. ಇತ್ತ ಸಾಲ್ಟ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದರೆ ಜೇಕಬ್ ಬೆಥೆಲ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ.

Rcb 2026 04 29t130816.337




