RCB ತಂಡಕ್ಕೆ ಸ್ಫೋಟಕ ದಾಂಡಿಗ ರಿಎಂಟ್ರಿ..!

Updated on: May 10, 2026 | 11:29 AM

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಕಾಯುವಿಕೆ ಅಂತ್ಯಗೊಂಡಿದೆ! ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್‌ಗೆ ತೆರಳಿದ್ದ ತಂಡದ ಸ್ಫೋಟಕ ಓಪನರ್ ಇದೀಗ ಭಾರತಕ್ಕೆ ಮರಳಿದ್ದಾರೆ. ಪ್ಲೇ-ಆಫ್‌ ಹಂತದ ನಿರ್ಣಾಯಕ ಪಂದ್ಯಗಳು ಹತ್ತಿರವಿರುವಾಗಲೇ ಹೊಡಿಬಡಿ ದಾಂಡಿಗ ಮರಳಿರುವುದು ಆರ್‌ಸಿಬಿ ತಂಡದ ಆತ್ಮವಿಶ್ವಾಸವನ್ನು ದುಪ್ಪಟ್ಟುಗೊಳಿಸಿದೆ. 

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇ-ಆಫ್ ರೇಸ್ ರಂಗೇರುತ್ತಿರುವ ಹೊತ್ತಿನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಬಿಗ್ ಬೂಸ್ಟ್ ಸಿಕ್ಕಿದೆ! ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ (Phil Salt) ಮತ್ತೆ ಭಾರತಕ್ಕೆ ಮರಳಿದ್ದಾರೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇ-ಆಫ್ ರೇಸ್ ರಂಗೇರುತ್ತಿರುವ ಹೊತ್ತಿನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಬಿಗ್ ಬೂಸ್ಟ್ ಸಿಕ್ಕಿದೆ! ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ (Phil Salt) ಮತ್ತೆ ಭಾರತಕ್ಕೆ ಮರಳಿದ್ದಾರೆ.

2 / 6

ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಸಾಲ್ಟ್ ಅವರ ಎಡಗೈ ಬೆರಳಿಗೆ ಗಾಯವಾಗಿತ್ತು. ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಗಾಗಿ ಅವರು ಇಂಗ್ಲೆಂಡ್‌ಗೆ ಮರಳಿದ್ದರು. ಅವರ ಅನುಪಸ್ಥಿತಿಯಲ್ಲಿ ಜೇಕಬ್ ಬೆಥೆಲ್ ಆರಂಭಿಕರಾಗಿ ಕಾಣಿಸಿಕೊಂಡಿದ್ದರು.

3 / 6

ಇದೀಗ ಇಂಗ್ಲೆಂಡ್​ನಿಂದ ಫಿಲ್ ಸಾಲ್ಟ್ ಭಾರತಕ್ಕೆ ಮರಳಿದ್ದಾರೆ. ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ಸಾಲ್ಟ್ ಇಂದು ಮುಂಜಾನೆ ಅಹಮದಾಬಾದ್‌ಗೆ ಬಂದಿಳಿದಿದ್ದಾರೆ. ಇಲ್ಲಿಂದಲೇ ಅವರು ಛತ್ತೀಗಢ್​ಗೆ ತೆರಳಲಿದ್ದು, ರಾಯ್​ಪುರ್​ನಲ್ಲಿರುವ ಆರ್​ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

4 / 6

ಇದಾಗ್ಯೂ ಫಿಲ್ ಸಾಲ್ಟ್ ಇಂದಿನ ಮ್ಯಾಚ್​ನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಏಕೆಂದರೆ ಗಾಯದ ಕಾರಣ ಸಾಲ್ಟ್​ ಕಳೆದ ಒಂದು ವಾರದಿಂದ ಮೈದಾನದಿಂದ ಹೊರಗುಳಿದಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಾಲ್ಟ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. 

5 / 6

ಇನ್ನು ಮೇ 13 ರಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಫಿಲ್ ಸಾಲ್ಟ್ ಮತ್ತೆ ಮೈದಾನಕ್ಕಿಳಿಯಬಹುದು. ಇತ್ತ ಸಾಲ್ಟ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದರೆ ಜೇಕಬ್ ಬೆಥೆಲ್ ಆಡುವ ಬಳಗದಿಂದ ಹೊರಗುಳಿಯಲಿದ್ದಾರೆ. 

6 / 6

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

Published On - 11:24 am, Sun, 10 May 26

Loading...
Unable to load recommendations.
Follow Us