AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2026 playoff qualification scenario: ಐಪಿಎಲ್​ ಟೂರ್ನಿಯ ಲೀಗ್​ ಹಂತದ 14 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿದ  ಎಲ್ಲಾ ತಂಡಗಳು ಪ್ಲೇ-ಆಫ್‌ಗೆ ಅರ್ಹತೆ ಪಡೆದಿವೆ. ಅಂದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲು 16 ಅಂಕಗಳು ಅನಿವಾರ್ಯ. ಈ ಲೆಕ್ಕಾಚಾರದಂತೆ ಪ್ಲೇಆಫ್​ಗೆ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 06, 2026 | 8:52 AM

Share
IPL 2026: ಐಪಿಎಲ್ 2026ರ ಲೀಗ್ ಹಂತವು ಈಗ ರೋಚಕ ಘಟ್ಟಕ್ಕೆ ತಲುಪಿದ್ದು, ಪ್ಲೇ-ಆಫ್ ತಲುಪಲು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯದ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ಹಾಗೂ ಪಂಜಾಬ್ ಕಿಂಗ್ಸ್ (PBKS)​  ತಂಡಗಳು ಟಾಪ್-4 ನಲ್ಲಿವೆ. ಇನ್ನುಳಿದ 4 ತಂಡಗಳೂ ಕೂಡ ಪ್ಲೇಆಫ್ ರೇಸ್​ನಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ... (PC: BCCI)

1 / 11
ಪಂಜಾಬ್ ಕಿಂಗ್ಸ್​: ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ  6 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಒಟ್ಟು 13 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಕೇವಲ 2 ಮ್ಯಾಚ್ ಗೆದ್ದರೆ 17 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ. (PC: BCCI)

2 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದ ಆರ್​ಸಿಬಿ ತಂಡವು ಈವರೆಗೆ 11 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 14 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ 3 ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. (PC: BCCI)

3 / 11
ಸನ್​​ರೈಸರ್ಸ್ ಹೈದರಾಬಾದ್​: ಪ್ಯಾಟ್ ಕಮಿನ್ಸ್ ಮುಂದಾಳತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ಎಸ್​ಆರ್​​ಹೆಚ್ ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ ಪ್ಲೇಆಫ್​ಗೇರಬಹುದು. (PC: BCCI)

ಸನ್​​ರೈಸರ್ಸ್ ಹೈದರಾಬಾದ್​: ಪ್ಯಾಟ್ ಕಮಿನ್ಸ್ ಮುಂದಾಳತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ 7 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 14 ಅಂಕಗಳನ್ನು ಹೊಂದಿರುವ ಎಸ್​ಆರ್​​ಹೆಚ್ ಮುಂದಿನ 2 ಪಂದ್ಯಗಳಲ್ಲಿ 1 ಗೆಲುವು ಸಾಧಿಸಿ ಪ್ಲೇಆಫ್​ಗೇರಬಹುದು. (PC: BCCI)

4 / 11
ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ 11 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 12 ಅಂಕಗಳನ್ನು ಪಡೆದಿರುವ ಆರ್​ಆರ್ ಪಡೆ ಮುಂದಿನ 3 ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದರೆ ಒಟ್ಟು ಅಂಕಗಳನ್ನು 16 ಕ್ಕೇರಿಸಬಹುದು. ಈ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. (PC: BCCI)

5 / 11
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಕೂಡ 12 ಪಂದ್ಯಗಳನ್ನಾಡಿದೆ. ಈ ವೇಳೆ 4 ಮ್ಯಾಚ್​ಗಳಲ್ಲಿ ಸೋತರೆ, 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅದರಂತೆ ಇದೀಗ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಿದೆ. ಇನ್ನು ಮುಂದಿನ 2 ಪಂದ್ಯಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೇರಲಿದೆ. (PC: BCCI)

6 / 11
ಚೆನ್ನೈ ಸೂಪರ್ ಕಿಂಗ್ಸ್​​: ರುತುರಾಜ್ ಗಾಯಕ್ವಾಡ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 6 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಸಿಎಸ್​ಕೆ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಳ್ಳಬಹುದು. (PC: BCCI)

7 / 11
ಡೆಲ್ಲಿ ಕ್ಯಾಪಿಟಲ್ಸ್​: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 12 ಪಂದ್ಯಗಳನ್ನಾಡಿದ್ದು, ಈ ವೇಳೆ 5 ಮ್ಯಾಚ್​ಗಳಲ್ಲಿ ಗೆದ್ದರೆ 7 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ 10 ಅಂಕಗಳನ್ನು ಮಾತ್ರ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 2 ಪಂದ್ಯಗಳಲ್ಲೂ ಗೆಲುವು ದಾಖಲಿಸಿದರೆ 14 ಅಂಕಗಳನ್ನು ಪಡೆಯಬಹುದು. ಅದರಂತೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಟಾಪ್-4 ನಲ್ಲಿರುವ ಯಾವುದಾದರೂ ತಂಡ 14 ಅಂಕ ಹೊಂದಿದ್ದರೆ ಮಾತರ ನೆಟ್ ರನ್ ರೇಟ್ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್​ಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶ ದೊರೆಯಲಿದೆ. (PC: BCCI)

8 / 11
ಕೊಲ್ಕತ್ತಾ ನೈಟ್ ರೈಡರ್ಸ್​: ಅಜಿಂಕ್ಯ ರಹಾನೆ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ ಕೆಕೆಆರ್ ಗೆದ್ದಿರುವುದು 4 ಪಂದ್ಯಗಳಲ್ಲಿ ಮಾತ್ರ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ 1 ಅಂಕ ಗಿಟ್ಟಿಸಿಕೊಂಡಿದೆ. ಅದರಂತೆ ಇದೀಗ 9 ಅಂಕಗಳನ್ನು ಹೊಂದಿರುವ ಕೆಕೆಆರ್ ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಲಿದೆ. (PC: BCCI)

9 / 11
ಮುಂಬೈ ಇಂಡಿಯನ್ಸ್​​: ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳನ್ನು ಮಾತ್ರ ಪಡೆಯಬಹುದು. ಇತ್ತ ಟಾಪ್-4 ನಲ್ಲಿರುವ ನಾಲ್ಕು ತಂಡಗಳು 13 ಕ್ಕಿಂತ ಹೆಚ್ಚಿನ ಅಂಕಗಳನ್ನು ಹೊಂದಿದೆ. ಹೀಗಾಗಿ ಮುಂಬೈ ಇಂಡಿಯನ್ಸ್  ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. (PC: BCCI)

10 / 11
ಲಕ್ನೋ ಸೂಪರ್ ಜೈಂಟ್ಸ್​: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಆಡಿದ 11 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಕೇವಲ 6 ಅಂಕಗಳನ್ನು ಮಾತ್ರ ಹೊಂದಿರುವ ಎಸ್​ಎಸ್​ಜಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳನ್ನು ಮಾತ್ರ ಪಡೆಯಬಹುದು. 12 ಅಂಕಗಳೊಂದಿಗೆ ಪ್ಲೇಆಫ್​ ಪ್ರವೇಶಿಸಲು ಅವಕಾಶ ಇಲ್ಲದಿರುವುದರಿಂದ ಎಲ್​ಎಸ್​​ಜಿ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. (PC: BCCI)

11 / 11
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ