AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2026 playoff qualification scenario: ಐಪಿಎಲ್​ ಟೂರ್ನಿಯ ಲೀಗ್​ ಹಂತದ 14 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿದ  ಎಲ್ಲಾ ತಂಡಗಳು ಪ್ಲೇ-ಆಫ್‌ಗೆ ಅರ್ಹತೆ ಪಡೆದಿವೆ. ಅಂದರೆ ಪ್ಲೇಆಫ್ ಖಚಿತಪಡಿಸಿಕೊಳ್ಳಲು 16 ಅಂಕಗಳು ಅನಿವಾರ್ಯ. ಈ ಲೆಕ್ಕಾಚಾರದಂತೆ ಪ್ಲೇಆಫ್​ಗೆ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 06, 2026 | 8:52 AM

Share
IPL 2026: ಐಪಿಎಲ್ 2026ರ ಕಾದಾಟ ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ! ಹತ್ತು ತಂಡಗಳ ನಡುವಿನ ಈ ಬಲಿಷ್ಠ ಪೈಪೋಟಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಡುವ ನಾಲ್ಕು ಅದೃಷ್ಟವಂತ ತಂಡಗಳು ಯಾವುವು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ. ಕೆಲ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇನ್ನು ಕೆಲವು ತಂಡಗಳು ಪ್ರತಿ ಪಂದ್ಯವನ್ನೂ 'ಮಾಡು ಇಲ್ಲವೇ ಮಡಿ' ಎಂಬಂತೆ ಆಡಬೇಕಾದ ಅನಿವಾರ್ಯತೆಯಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ... (PC: BCCI)

1 / 11
ಪಂಜಾಬ್ ಕಿಂಗ್ಸ್​: ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಮ್ಯಾಚ್​ಗಳಲ್ಲಿ 6 ಗೆಲುವು ದಾಖಲಿಸಿರುವ ಪಂಜಾಬ್ ಪಡೆ ಒಟ್ಟು 13 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಮುಂದಿನ 5 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಕೇವಲ 2 ಮ್ಯಾಚ್ ಗೆದ್ದರೆ 17 ಅಂಕಗಳೊಂದಿಗೆ ಪ್ಲೇಆಫ್​ಗೇರಲಿದೆ. (PC: BCCI)

2 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದ ಆರ್​ಸಿಬಿ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ 5 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ. (PC: BCCI)

3 / 11
ಸನ್​​ರೈಸರ್ಸ್ ಹೈದರಾಬಾದ್​: ಪ್ಯಾಟ್ ಕಮಿನ್ಸ್ ಮುಂದಾಳತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ಎಸ್​ಆರ್​​ಹೆಚ್ ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ ಪ್ಲೇಆಫ್​ಗೇರಬಹುದು. (PC: BCCI)

4 / 11
ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಈಗಾಗಲೇ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 12 ಅಂಕಗಳನ್ನು ಪಡೆದಿರುವ ಆರ್​ಆರ್ ಪಡೆ ಮುಂದಿನ 4 ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದರೆ ಒಟ್ಟು ಅಂಕಗಳನ್ನು 16 ಕ್ಕೇರಿಸಬಹುದು. ಈ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. (PC: BCCI)

5 / 11
ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಕೂಡ 10 ಪಂದ್ಯಗಳನ್ನಾಡಿದೆ. ಈ ವೇಳೆ 4 ಮ್ಯಾಚ್​ಗಳಲ್ಲಿ ಸೋತರೆ, 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅದರಂತೆ ಇದೀಗ 12 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಮುಂದಿನ 4 ಪಂದ್ಯಗಳಲ್ಲಿ 2 ಜಯ ಸಾಧಿಸಿ 16 ಅಂಕಗಳ ಮೂಲಕ ಪ್ಲೇಆಫ್​ಗೇರಬಹುದು. (PC: BCCI)

6 / 11
ಚೆನ್ನೈ ಸೂಪರ್ ಕಿಂಗ್ಸ್​​: ರುತುರಾಜ್ ಗಾಯಕ್ವಾಡ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ 5 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 4 ಪಂದ್ಯಗಳಲ್ಲಿ ಮೂರು ಜಯ ಸಾಧಿಸಿದರೆ ಸಿಎಸ್​ಕೆ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಳ್ಳಬಹುದು. (PC: BCCI)

7 / 11
ಡೆಲ್ಲಿ ಕ್ಯಾಪಿಟಲ್ಸ್​: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಮ್ಯಾಚ್​ಗಳಲ್ಲಿ ಗೆದ್ದರೆ 6 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ 8 ಅಂಕಗಳನ್ನು ಮಾತ್ರ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ ನೇರವಾಗಿ ಪ್ಲೇಆಫ್​ಗೇಬಹುದು. (PC: BCCI)

8 / 11
ಕೊಲ್ಕತ್ತಾ ನೈಟ್ ರೈಡರ್ಸ್​: ಅಜಿಂಕ್ಯ ರಹಾನೆ ನಾಯಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದೆ. ಈ ವೇಳೆ ಕೆಕೆಆರ್ ಗೆದ್ದಿರುವುದು 3 ಪಂದ್ಯಗಳಲ್ಲಿ ಮಾತ್ರ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ 1 ಅಂಕ ಗಿಟ್ಟಿಸಿಕೊಂಡಿದೆ. ಅದರಂತೆ ಇದೀಗ 7 ಅಂಕಗಳನ್ನು ಹೊಂದಿರುವ ಕೆಕೆಆರ್ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ 17 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಲಿದೆ. (PC: BCCI)

9 / 11
ಮುಂಬೈ ಇಂಡಿಯನ್ಸ್​​: ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಒಂದು ವೇಳೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳನ್ನು ಪಡೆದಿದ್ದರೆ ಮಾತ್ರ ಮುಂಬೈ ಇಂಡಿಯನ್ಸ್​ ನೆಟ್ ರನ್ ರೇಟ್​ ನೆರವಿನೊಂದಿಗೆ ನಾಲ್ಕನೇ ಸ್ಥಾನ ಪಡೆದು ಪ್ಲೇಆಫ್​ಗೇರಬಹುದು. (PC: BCCI)

10 / 11
ಲಕ್ನೋ ಸೂಪರ್ ಜೈಂಟ್ಸ್​: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಆಡಿದ 9 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇದೀಗ ಕೇವಲ 4 ಅಂಕಗಳನ್ನು ಮಾತ್ರ ಹೊಂದಿರುವ ಎಸ್​ಎಸ್​ಜಿ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಒಂದು ವೇಳೆ ಲೀಗ್ ಹಂತದ ಮುಕ್ತಾಯದ ವೇಳೆ ಟಾಪ್-4 ನಲ್ಲಿರುವ ಒಂದು ತಂಡವು 14 ಅಂಕಗಳನ್ನು ಮಾತ್ರ ಪಡೆದಿದ್ದರೆ, ನೆಟ್ ರನ್ ರೇಟ್ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪ್ಲೆಆಫ್​ಗೆ ಪ್ರವೇಶಿಸಲು ಅವಕಾಶ ದೊರೆಯಬಹುದು. (PC: BCCI)

11 / 11
Follow Us
ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತು ಬಿಟ್ಟು ಹೋಗ್ತೀರಾ? ಎಚ್ಚರ

ಬಂಡೆಯ ಸಂದಿಯಲ್ಲಿ ಸಿಲುಕಿದ ಬಾಲಕನ ತಲೆ, ಕಣ್ಣೆದುರೇ ಹೆಡೆ ಎತ್ತಿ ನಿಂತ ಹಾವು

ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ

ಇಂದು ಈ ರಾಶಿಯವರಿಗೆ ಹೂಡಿಕೆಯಿಂದ ಲಾಭವಿದೆ
ಇಂದು ಈ ರಾಶಿಯವರಿಗೆ ಹೂಡಿಕೆಯಿಂದ ಲಾಭವಿದೆ
ಮಾಂಗಲ್ಯ ಸರ ಮನೆ ಮುಂದೆ ಪ್ರತ್ಯಕ್ಷ: ಆದ್ರೂ ಅವನ್ನ ಹೊಡಿಬೇಕು ಎಂದ ಮಹಿಳೆ

ತಪ್ಪಿದ ಭಾರೀ ದುರಂತ; ಕಾರು ಚಾಲಕ ಬ್ರೇಕ್ ಹಾಕಿದ್ದರಿಂದ ಉಳಿಯಿತು ಜೀವ

ಹುತಾತ್ಮ ಅಂಬಾರಿ ಆನೆ ಅರ್ಜುನ ಸ್ಮಾರಕ ಉದ್ಘಾಟನೆ, ಹೇಗಿದೆ, ಎಲ್ಲಿದೆ ನೋಡಿ

ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಸ್ಪಷ್ಟನೆ

ಭಾರತದಲ್ಲಿ ವಿಶೇಷ ತ್ರಿಶತಕ ಪೂರೈಸಿದ ಅಭಿಷೇಕ್ ಶರ್ಮಾ

ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ; ಸುವೇಂದು ಅಧಿಕಾರಿ