AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್​ನಿಂದ ಔಟ್..!

IPL 2026 playoffs scenario: ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್ ಆಡುವುದು ಖಚಿತವಾಗಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದಾಗ್ಯೂ ಒಂದು ಸ್ಥಾನಕ್ಕಾಗಿ 5 ತಂಡಗಳ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on:May 20, 2026 | 8:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL)

1 / 5
ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ ಒಟ್ಟು 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಏಕೆಂದರೆ ಪ್ಲೇಆಫ್ ರೇಸ್​ನಲ್ಲಿರುವ ಉಳಿದ ಯಾವುದೇ ತಂಡಗಳಿಗೆ 16 ಅಂಕಗಳನ್ನು ಗಳಿಸಲು ಅವಕಾಶವಿಲ್ಲ. (PC: IPL)

2 / 5
ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್​ ಮುಂದಿನ ಪಂದ್ಯಗಳನ್ನು ಗೆದ್ದರೆ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು​ ಕೊನೆಯ ಮ್ಯಾಚ್​ನಲ್ಲಿ ಜಯಿಸಿದರೆ ಒಟ್ಟು ಪಾಯಿಂಟ್ಸ್​ 14 ಕ್ಕೇರಲಿದೆ. (PC: IPL)

3 / 5
ಆದರೆ ಈಗಾಗಲೇ 14 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮೇ 24 ರಂದು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಒಟ್ಟು ಅಂಕಗಳು 16 ಕ್ಕೇರಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. (PC: IPL)

4 / 5
ಹೀಗೆ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಪಂದ್ಯದಲ್ಲಿ ಜಯ ಸಾಧಿಸಿದರೆ, ಪ್ಲೇಆಫ್ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳನ್ನು ಎದುರಿಸಲಿದೆ. ಅಂದರೆ ಈ ಮೂರು ತಂಡಗಳು ಈಗಾಗಲೇ ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಇವರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವವರು ಯಾರು? ಎಲಿಮಿನೇಟರ್​ನಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಮುಂದಿನ ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ. (PC: IPL)

5 / 5

Published On - 8:52 am, Wed, 20 May 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ