IPL 2026: ಮೊದಲಾರ್ಧದ ಪೂರ್ಣ: ಹೀಗಿದೆ ಪಾಯಿಂಟ್ಸ್ ಟೇಬಲ್
IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್ನ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಸನ್ರೈಸರ್ಸ್ ಹೈದರಾಬಾದ್ (SRH) ತಂಡವು 5 ವಿಕೆಟ್ಗಳಿಂದ ಸೋಲಿಸಿದೆ. ಎಸ್ಆರ್ಹೆಚ್ ತಂಡದ ಈ ಭರ್ಜರಿ ಗೆಲುವಿನ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲೂ ಮಹತ್ದದ ಬದಲಾವಣೆಯಾಗಿದೆ.
Updated on:Apr 27, 2026 | 7:10 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲಾರ್ಧ ಪೂರ್ಣಗೊಂಡಿದೆ. ಈಗಾಗಲೇ ಎಲ್ಲಾ ತಂಡಗಳು 7 ಪಂದ್ಯಗಳನ್ನಾಡಿದ್ದು, ಈ ವೇಳೆ ಒಂದು ತಂಡವು 6 ಗೆಲುವು ದಾಖಲಿಸಿದರೆ, ಮೂರು ತಂಡಗಳು 5 ಜಯ ಸಾಧಿಸಿದೆ. ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನು ಕೆಕೆಆರ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಅಂದರೆ ಒಟ್ಟು 7 ಮ್ಯಾಚ್ಗಳ ಮೂಲಕ ಪಂಜಾಬ್ ಕಿಂಗ್ಸ್ 13 ಅಂಕಗಳನ್ನು ಪಡೆದುಕೊಂಡಿದ್ದು, ಈ ಮೂಲಕ +1.333 ನೆಟ್ ರನ್ ರೇಟ್ನೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

2- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು ಈವರೆಗೆ ಆಡಿರುವುದು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್ಗಳಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಸಿಎಸ್ಕೆ, ಎಲ್ಎಸ್ಜಿ, ಎಸ್ಆರ್ಹೆಚ್, ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ 10 ಅಂಕ ಹಾಗೂ +1.101 ನೆಟ್ ರನ್ ರೇಟ್ನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.

3- ಸನ್ರೈಸರ್ಸ್ ಹೈದರಾಬಾದ್: ಎಸ್ಆರ್ಹೆಚ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದ್ದು, ಈ ವೇಳೆ 5 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 10 ಅಂಕಗಳನ್ನು ಪಡೆದಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು +0.815 ನೆಟ್ ರನ್ ರೇಟ್ನೊಂದಿಗೆ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

4- ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದೆ. ಈ ವೇಳೆ ಸಿಎಸ್ಕೆ, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಆರ್ಸಿಬಿ ವಿರುದ್ಧ ಜಯ ಸಾಧಿಸಿದೆ. ಇನ್ನು ಕೆಕೆಆರ್ ಹಾಗೂ ಎಸ್ಆರ್ಹೆಚ್ ವಿರುದ್ಧ ಸೋಲು ಕಂಡಿರುವ ಆರ್ಆರ್ ಪಡೆ ಒಟ್ಟು 10 ಅಂಕಗಳೊಂದಿಗೆ +0.602 ನೆಟ್ ರನ್ ರೇಟ್ ಪಡೆಯುವ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದೆ.

5- ಚೆನ್ನೈ ಸೂಪರ್ ಕಿಂಗ್ಸ್: ಸಿಎಸ್ಕೆ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ವೇಳೆ ಮೂರು ಮ್ಯಾಚ್ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇದಾಗ್ಯೂ +0.118 ನೆಟ್ ರನ್ ರೇಟ್ ಹೊಂದುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಟ್ಟು 6 ಅಂಕಗಳೊಂದಿಗೆ ಐದನೇ ಸ್ಥಾನ ಅಲಂಕರಿಸಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್, 6ನೇ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ 7ನೇ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕ್ರಮವಾಗಿ 8ನೇ ಮತ್ತು 9ನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಈವರೆಗೆ ಒಂದು ಪಂದ್ಯ ಮಾತ್ರ ಗೆದ್ದಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
Published On - 1:49 pm, Sun, 26 April 26

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




