AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮೊದಲಾರ್ಧದ ಪೂರ್ಣ: ಹೀಗಿದೆ ಪಾಯಿಂಟ್ಸ್ ಟೇಬಲ್

IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್​ನ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಸನ್​ರೈಸರ್ಸ್ ಹೈದರಾಬಾದ್ (SRH) ತಂಡವು 5 ವಿಕೆಟ್​ಗಳಿಂದ ಸೋಲಿಸಿದೆ. ಎಸ್​ಆರ್​ಹೆಚ್ ತಂಡದ ಈ ಭರ್ಜರಿ ಗೆಲುವಿನ ಬಳಿಕ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲೂ ಮಹತ್ದದ ಬದಲಾವಣೆಯಾಗಿದೆ.

ಝಾಹಿರ್ ಯೂಸುಫ್
|

Updated on:Apr 27, 2026 | 7:10 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಪೂರ್ಣಗೊಂಡಿದೆ. ಈಗಾಗಲೇ ಎಲ್ಲಾ ತಂಡಗಳು 7 ಪಂದ್ಯಗಳನ್ನಾಡಿದ್ದು, ಈ ವೇಳೆ ಒಂದು ತಂಡವು 6 ಗೆಲುವು ದಾಖಲಿಸಿದರೆ, ಮೂರು ತಂಡಗಳು 5 ಜಯ ಸಾಧಿಸಿದೆ. ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 7
1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಕೆಕೆಆರ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಅಂದರೆ ಒಟ್ಟು 7 ಮ್ಯಾಚ್​ಗಳ ಮೂಲಕ ಪಂಜಾಬ್ ಕಿಂಗ್ಸ್​ 13 ಅಂಕಗಳನ್ನು ಪಡೆದುಕೊಂಡಿದ್ದು, ಈ ಮೂಲಕ +1.333 ನೆಟ್ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

2 / 7
2- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈವರೆಗೆ ಆಡಿರುವುದು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಸಿಎಸ್​ಕೆ, ಎಲ್​ಎಸ್​ಜಿ, ಎಸ್​ಆರ್​ಹೆಚ್, ಗುಜರಾತ್ ಟೈಟಾನ್ಸ್​ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ 10 ಅಂಕ ಹಾಗೂ +1.101 ನೆಟ್ ರನ್ ರೇಟ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.

3 / 7
3- ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈವರೆಗೆ 8 ಪಂದ್ಯಗಳನ್ನಾಡಿದ್ದು, ಈ ವೇಳೆ 5 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 10 ಅಂಕಗಳನ್ನು ಪಡೆದಿರುವ ಸನ್​ರೈಸರ್ಸ್​ ಹೈದರಾಬಾದ್​ ತಂಡವು +0.815 ನೆಟ್​ ರನ್ ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

4 / 7
4- ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದೆ. ಈ ವೇಳೆ ಸಿಎಸ್​ಕೆ, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ವಿರುದ್ಧ ಜಯ ಸಾಧಿಸಿದೆ. ಇನ್ನು ಕೆಕೆಆರ್​ ಹಾಗೂ ಎಸ್​ಆರ್​ಹೆಚ್ ವಿರುದ್ಧ ಸೋಲು ಕಂಡಿರುವ ಆರ್​ಆರ್ ಪಡೆ ಒಟ್ಟು 10 ಅಂಕಗಳೊಂದಿಗೆ +0.602 ನೆಟ್ ರನ್ ರೇಟ್ ಪಡೆಯುವ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದೆ.

5 / 7
5- ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​​ಕೆ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ವೇಳೆ ಮೂರು ಮ್ಯಾಚ್​ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇದಾಗ್ಯೂ +0.118 ನೆಟ್ ರನ್ ರೇಟ್ ಹೊಂದುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಟ್ಟು 6 ಅಂಕಗಳೊಂದಿಗೆ ಐದನೇ ಸ್ಥಾನ ಅಲಂಕರಿಸಿದೆ.

6 / 7
ಇನ್ನು ಡೆಲ್ಲಿ ಕ್ಯಾಪಿಟಲ್ಸ್,  6ನೇ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ 7ನೇ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕ್ರಮವಾಗಿ 8ನೇ ಮತ್ತು 9ನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಈವರೆಗೆ ಒಂದು ಪಂದ್ಯ ಮಾತ್ರ ಗೆದ್ದಿರುವ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

7 / 7

Published On - 1:49 pm, Sun, 26 April 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ

ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ

ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?