AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ತಂಡಗಳಿಗೆ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಂಜಾಬ್ ಕಿಂಗ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ ಕಣಕ್ಕಿಳಿದಿರುವ ತಂಡಗಳೆಂದರೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್, ಕೊಚ್ಚಿನ ಟಸ್ಕರ್ಸ್​ ಕೇರಳ, ಪುಣೆ ವಾರಿಯರ್ಸ್ ಇಂಡಿಯಾ, ಗುಜರಾತ್ ಲಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ ಮತ್ತು ಪಂಜಾಬ್ ಕಿಂಗ್ಸ್.

ಝಾಹಿರ್ ಯೂಸುಫ್
|

Updated on: Apr 18, 2026 | 8:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 15 ತಂಡಗಳು ಕಣಕ್ಕಿಳಿದಿವೆ. ಈ ಹದಿನೈದು ತಂಡಗಳಲ್ಲಿ 14 ತಂಡಗಳಿಗೆ ಸಾಧ್ಯವಾಗದೇ ಇರುವುದನ್ನು ಪಂಜಾಬ್ ಕಿಂಗ್ಸ್ (Punjab Kings) ಸಾಧಿಸಿ ತೋರಿಸಿದೆ. ಅದು ಸಹ ಮೊದಲ 5  ಮ್ಯಾಚ್​ಗಳಲ್ಲಿ ಸೋಲು ಕಾಣದೆ ವಿಶೇಷ ದಾಖಲೆ ಬರೆದಿದ್ದಾರೆ.

1 / 6
ಅಂದರೆ ಐಪಿಎಲ್ ಇತಿಹಾಸದಲ್ಲೇ ಮೊದಲ ಐದು ಪಂದ್ಯಗಳಲ್ಲಿ ಸೋಲು ಕಾಣದೇ ಟೂರ್ನಿ ಆರಂಭಿಸಿರುವುದು ಕೇವಲ 2 ತಂಡಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ತಂಡ ಪಂಜಾಬ್ ಕಿಂಗ್ಸ್. ಇದಾದ ಬಳಿಕ ಈ ದಾಖಲೆಯನ್ನು ರಾಜಸ್ಥಾನ್ ರಾಯಲ್ಸ್ ಸರಿಗಟ್ಟಿದ್ದರು.

2 / 6
ಐಪಿಎಲ್ 2014 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಆರಂಭಿಕ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸೋಲು ಕಾಣದೇ ಮೊದಲ ಐದು ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ಪಂಜಾಬ್ ಕಿಂಗ್ಸ್ ನಿರ್ಮಿಸಿತ್ತು.

3 / 6
ಐಪಿಎಲ್ 2015 ರಲ್ಲಿ ಈ ದಾಖಲೆಯನ್ನು ರಾಜಸ್ಥಾನ್ ರಾಯಲ್ಸ್ ಸರಿಗಟ್ಟಿದ್ದರು. ಅಂದಿನ ಸೀಸನ್​ನಲ್ಲಿ ಆರ್​ಆರ್​ ಪಡೆಯು ಸತತ 5 ಪಂದ್ಯಗಳಲ್ಲೂ ಗೆಲುವು ದಾಖಲಿಸಿ, ಸೋಲಿಲ್ಲದ ಸರದಾರರಾಗಿ ಟೂರ್ನಿಯನ್ನು ಆರಂಭಿಸಿತ್ತು. ಈ ಮೂಲಕ ಪಂಜಾಬ್ ಕಿಂಗ್ಸ್ ನಂತರ ಈ ಸಾಧನೆ ಮಾಡಿದ ತಂಡವೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

4 / 6
ಇದೀಗ ಪಂಜಾಬ್ ಕಿಂಗ್ಸ್ ತಂಡವು ಮತ್ತೊಮ್ಮೆ ಸೋಲಿಲ್ಲದೇ ಮೊದಲ ಐದು ಪಂದ್ಯಗಳನ್ನು ಮುಗಿಸಿದೆ. ಪಂಜಾಬ್ ಕಿಂಗ್ಸ್ ಈ ಬಾರಿ ಆಡಿದ 5 ಪಂದ್ಯಗಳಲ್ಲಿ 4 ರಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಸೋಲಿಲ್ಲದೇ 2 ಬಾರಿ ಮೊದಲ ಐದು ಪಂದ್ಯಗಳನ್ನು ಮುಗಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಪಂಜಾಬ್ ಕಿಂಗ್ಸ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಅಂದರೆ  ಐಪಿಎಲ್​ ಯಾವುದೇ ತಂಡ 2 ಬಾರಿ ಮೊದಲ ಐದು ಪಂದ್ಯಗಳಲ್ಲಿ ಸೋಲು ಕಾಣದೇ ಟೂರ್ನಿ ಆರಂಭಿಸಿದ ಚರಿತ್ರೆ ಇಲ್ಲ. ಇದೀಗ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್, ಕೊಚ್ಚಿನ ಟಸ್ಕರ್ಸ್​ ಕೇರಳ, ಪುಣೆ ವಾರಿಯರ್ಸ್ ಇಂಡಿಯಾ, ಗುಜರಾತ್ ಲಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ ತಂಡಗಳಿಗೆ ಸಾಧ್ಯವಾಗದೇ ಇರುವುದನ್ನು ಪಂಜಾಬ್ ಕಿಂಗ್ಸ್ ಸಾಧಿಸಿ ತೋರಿಸಿದೆ. 

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ