AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್​ಸಿಬಿಗೆ ಎಷ್ಟನೇ ಸ್ಥಾನ?

Most IPL final appearances: ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ, ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿ 5ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಈ ಮೂಲಕ ಅತಿ ಹೆಚ್ಚು ಐಪಿಎಲ್ ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ 10 ಫೈನಲ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 6 ಫೈನಲ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಪೃಥ್ವಿಶಂಕರ
|

Updated on:May 27, 2026 | 6:32 PM

Share
ಐಪಿಎಲ್ 2026 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಅದ್ಭುತ ಗೆಲುವಿನೊಂದಿಗೆ ಆರ್​ಸಿಬಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಗಿದ್ದರೆ 19 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್​ಗೇರಿದ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ (PC- PTI)..

1 / 5
ಐಪಿಎಲ್ 2026 ಕ್ವಾಲಿಫೈಯರ್ 1 ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದೆ. ಈ ಮೂಲಕ ಆರ್‌ಸಿಬಿ ಮೂರು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿರುವ ಕೆಕೆಆರ್ ದಾಖಲೆಯನ್ನು ಮುರಿದಿದೆ. ಕೆಕೆಆರ್ ಇಲ್ಲಿಯವರೆಗೆ 4 ಬಾರಿ ಫೈನಲ್ ತಲುಪಿದ್ದರೆ.. ಆರ್‌ಸಿಬಿ ಈಗ 5 ನೇ ಬಾರಿಗೆ ಫೈನಲ್ ತಲುಪಿದೆ (PC- PTI).

2 / 5
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಂಬರ್ ಒನ್ ಸ್ಥಾನದಲ್ಲಿದೆ. ಸಿಎಸ್‌ಕೆ ಇದುವರೆಗೆ ದಾಖಲೆಯ 10 ಬಾರಿ ಐಪಿಎಲ್ ಫೈನಲ್ ತಲುಪಿದೆ. ಇವುಗಳಲ್ಲಿ 5 ಬಾರಿ ಟ್ರೋಫಿ ಗೆದ್ದಿದ್ದು 5 ಬಾರಿ ರನ್ನರ್ ಅಪ್ ಆಗಿದೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಫೈನಲ್‌ಗಳನ್ನು ಗೆದ್ದ ದಾಖಲೆಯ ಜೊತೆಗೆ, ಚೆನ್ನೈ ಅತಿ ಹೆಚ್ಚು ಫೈನಲ್‌ಗಳನ್ನು ಸೋತ ವಿಚಿತ್ರ ದಾಖಲೆಯನ್ನು ಸಹ ಹೊಂದಿದೆ (PC- PTI).

3 / 5
ಈ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಡೆದುಕೊಂಡಿದೆ. ಮುಂಬೈ ತಂಡವು ಇಲ್ಲಿಯವರೆಗೆ ಒಟ್ಟು 6 ಬಾರಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈ ತಂಡದ ಫೈನಲ್ ದಾಖಲೆ ಎಷ್ಟು ಪ್ರಭಾವಶಾಲಿಯಾಗಿದೆಯೆಂದರೆ, ಆಡಿದ ಆರು ಫೈನಲ್‌ಗಳಲ್ಲಿ 5 ಬಾರಿ ಪ್ರಶಸ್ತಿಯನ್ನು ಗೆದ್ದಿದೆ (PC- PTI).

4 / 5
ಕೋಲ್ಕತ್ತಾ ನೈಟ್ ರೈಡರ್ಸ್ 4 ಬಾರಿ ಫೈನಲ್‌ನಲ್ಲಿ ಆಡಿ 3 ಬಾರಿ ಟ್ರೋಫಿ ಗೆದ್ದಿದ್ದು ನಾಲ್ಕನೇ ಸ್ಥಾನದಲ್ಲಿದೆ. ಇಲ್ಲಿಯವರೆಗೆ 3 ಬಾರಿ ಐಪಿಎಲ್ ಫೈನಲ್ ಆಡಿರುವ ಸನ್‌ರೈಸರ್ಸ್ ಹೈದರಾಬಾದ್ ಐದನೇ ಸ್ಥಾನದಲ್ಲಿದೆ. ಈ ವರ್ಷವೂ ಸಹ, ಎಲಿಮಿನೇಟರ್ ಮೂಲಕ ಎಸ್‌ಆರ್‌ಹೆಚ್ ಫೈನಲ್ ತಲುಪುವ ಅವಕಾಶ ಹೊಂದಿದೆ (PC- PTI).

5 / 5

Published On - 6:31 pm, Wed, 27 May 26

Follow Us
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!

ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ

ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ

ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ

ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್

ರಾಜಾಜಿನಗರ ಇಸ್ಕಾನ್ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಬೆಂಗಳೂರಿನ ಈ 4 ಫ್ಲೈ ಓವರ್​ಗಳಲ್ಲಿ ಇಂದಿನಿಂದಲೇ ಹೊಸ ನಿಯಮ ಜಾರಿ

ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ
ಇಂದು ಕೃಷ್ಣ ಜನ್ಮಾಷ್ಟಮಿ ಶುಭದಿನ
30 ವರ್ಷ ಬಳಿಕ ‘ಅಮೆರಿಕ ಅಮೆರಿಕ’ ಸೀಕ್ವೆಲ್; ನಾಗತಿಹಳ್ಳಿ ವಿಶೇಷ ಸಂದರ್ಶನ