
ಐಪಿಎಲ್ 2026 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಅದ್ಭುತ ಗೆಲುವಿನೊಂದಿಗೆ ಆರ್‌ಸಿಬಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಗಿದ್ದರೆ 19 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ಗೇರಿದ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ (PC- PTI)..

ಐಪಿಎಲ್ 2026 ಕ್ವಾಲಿಫೈಯರ್ 1 ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದೆ. ಈ ಮೂಲಕ ಆರ್‌ಸಿಬಿ ಮೂರು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿರುವ ಕೆಕೆಆರ್ ದಾಖಲೆಯನ್ನು ಮುರಿದಿದೆ. ಕೆಕೆಆರ್ ಇಲ್ಲಿಯವರೆಗೆ 4 ಬಾರಿ ಫೈನಲ್ ತಲುಪಿದ್ದರೆ.. ಆರ್‌ಸಿಬಿ ಈಗ 5 ನೇ ಬಾರಿಗೆ ಫೈನಲ್ ತಲುಪಿದೆ (PC- PTI).

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ನಂಬರ್ ಒನ್ ಸ್ಥಾನದಲ್ಲಿದೆ. ಸಿಎಸ್‌ಕೆ ಇದುವರೆಗೆ ದಾಖಲೆಯ 10 ಬಾರಿ ಐಪಿಎಲ್ ಫೈನಲ್ ತಲುಪಿದೆ. ಇವುಗಳಲ್ಲಿ 5 ಬಾರಿ ಟ್ರೋಫಿ ಗೆದ್ದಿದ್ದು 5 ಬಾರಿ ರನ್ನರ್ ಅಪ್ ಆಗಿದೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಫೈನಲ್‌ಗಳನ್ನು ಗೆದ್ದ ದಾಖಲೆಯ ಜೊತೆಗೆ, ಚೆನ್ನೈ ಅತಿ ಹೆಚ್ಚು ಫೈನಲ್‌ಗಳನ್ನು ಸೋತ ವಿಚಿತ್ರ ದಾಖಲೆಯನ್ನು ಸಹ ಹೊಂದಿದೆ (PC- PTI).

ಈ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಡೆದುಕೊಂಡಿದೆ. ಮುಂಬೈ ತಂಡವು ಇಲ್ಲಿಯವರೆಗೆ ಒಟ್ಟು 6 ಬಾರಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈ ತಂಡದ ಫೈನಲ್ ದಾಖಲೆ ಎಷ್ಟು ಪ್ರಭಾವಶಾಲಿಯಾಗಿದೆಯೆಂದರೆ, ಆಡಿದ ಆರು ಫೈನಲ್‌ಗಳಲ್ಲಿ 5 ಬಾರಿ ಪ್ರಶಸ್ತಿಯನ್ನು ಗೆದ್ದಿದೆ (PC- PTI).

ಕೋಲ್ಕತ್ತಾ ನೈಟ್ ರೈಡರ್ಸ್ 4 ಬಾರಿ ಫೈನಲ್‌ನಲ್ಲಿ ಆಡಿ 3 ಬಾರಿ ಟ್ರೋಫಿ ಗೆದ್ದಿದ್ದು ನಾಲ್ಕನೇ ಸ್ಥಾನದಲ್ಲಿದೆ. ಇಲ್ಲಿಯವರೆಗೆ 3 ಬಾರಿ ಐಪಿಎಲ್ ಫೈನಲ್ ಆಡಿರುವ ಸನ್‌ರೈಸರ್ಸ್ ಹೈದರಾಬಾದ್ ಐದನೇ ಸ್ಥಾನದಲ್ಲಿದೆ. ಈ ವರ್ಷವೂ ಸಹ, ಎಲಿಮಿನೇಟರ್ ಮೂಲಕ ಎಸ್‌ಆರ್‌ಹೆಚ್ ಫೈನಲ್ ತಲುಪುವ ಅವಕಾಶ ಹೊಂದಿದೆ (PC- PTI).
Published On - 6:31 pm, Wed, 27 May 26