IPL 2026: ಇದೆಂತಹ ಫ್ರಾಂಚೈಸಿ… ಸಾಮಾಜಿಕ ಬದ್ಧತೆಯನ್ನೇ ಮರೆತ RCB

Updated on: Nov 16, 2025 | 10:23 AM

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡು 8 ಆಟಗಾರರನ್ನು ಬಿಡುಗಡೆ ಮಾಡಿದೆ. ಹೀಗೆ ರಿಟೈನ್ ಮಾಡಲಾದ ಆಟಗಾರರ ಪಟ್ಟಿಯಲ್ಲಿ ಅತ್ಯಾಚಾರದ ಆರೋಪಿ ಕೂಡ ಕಾಣಿಸಿಕೊಂಡಿರುವುದು ಅಚ್ಚರಿ.

1 / 7
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬೆಂಗಳೂರು ತಂಡ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಹದಿನೇಳು ಆಟಗಾರರಲ್ಲಿ ಅತ್ಯಾಚಾರ ಹಾಗೂ ಲೈಂಗಿನ ದೌರ್ಜನ್ಯ ಎಸೆಗಿದ ಆರೋಪಕ್ಕೀಡಾಗಿರುವ ಆಟಗಾರ ಕೂಡ ಇರುವುದು ಅಚ್ಚರಿ.

2 / 7
ಮೊದಲೇ ಅಭಿಮಾನಿಗಳ ಸಾವಿಗೆ ಕಾರಣರಾದ ಫ್ರಾಂಚೈಸಿ ಎಂಬ ಹಣೆಪಟ್ಟಿ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಅತ್ಯಾಚಾರಿ ಆರೋಪಿಯನ್ನು ತಂಡದಲ್ಲೇ ಉಳಿಸಿಕೊಂಡು ಅಚ್ಚರಿ ಮೂಡಿಸಿದೆ. ಅದು ಕೂಡ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಬ್ಯಾನ್ ಮಾಡಿರುವ ಆಟಗಾರರನನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 7
ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪವಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ಅವರ ವಿರುದ್ಧ ಎಫ್​ಐಆರ್​ ಕೂಡ ದಾಖಲಾಗಿದೆ. ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಯುವತಿಯೊಬ್ಬಳು ದೂರು ನೀಡಿದ್ದಾರೆ.

4 / 7
ಇದರ ಜೊತೆಗೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಯುಪಿ ಟಿ20 ಲೀಗ್​ನಿಂದ ಹೊರಗಿಟ್ಟಿದ್ದರು. ಅಷ್ಟೇ ಅಲ್ಲದೆ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲೂ ಅವರಿಗೆ ಅವಕಾಶ ನೀಡಿರಲಿಲ್ಲ.

5 / 7
ಆದರೆ ಒಂದು ಪ್ರದೇಶ ಅಥವಾ ಒಂದು ರಾಜ್ಯದ ಜನರನ್ನು ಪ್ರತಿನಿಧಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾತ್ರ ಯಶ್ ದಯಾಳ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇದರ ಬೆನ್ನಲ್ಲೇ ಆರ್​ಸಿಬಿ ಫ್ರಾಂಚೈಸಿಗೆ ಸಾಮಾಜಿಕ ಬದ್ಧತೆಯೇ ಇಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

6 / 7
ಯಶ್ ದಯಾಳ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದ ಬೆನ್ನಲ್ಲೇ ಉತ್ತರ ಪ್ರದೇಶ್ ಕ್ರಿಕೆಟ್ ಬೋರ್ಡ್ ಅವರನ್ನು ಯುಪಿ ಟಿ20 ಲೀಗ್​ನಿಂದ ಹೊರಗಿಟ್ಟಿದ್ದರು. ಅಲ್ಲದೆ ಆ ಬಳಿಕ ಅವರನ್ನು ರಾಜ್ಯ ತಂಡಕ್ಕೂ ಆಯ್ಕೆ ಮಾಡಿಲ್ಲ. ಅಂದರೆ ಆರೋಪ ಮುಕ್ತರಾಗುವವರೆಗೆ ಅವರಿಗೆ ಕಣಕ್ಕಿಳಿಯಲು ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ನಿಲುವು ತೋರಿದ್ದಾರೆ.

7 / 7
ಇದಾಗ್ಯೂ ಬೆಂಗಳೂರನ್ನು ಪ್ರತಿನಿಧಿಸುವ ಆರ್​ಸಿಬಿ ಫ್ರಾಂಚೈಸಿಗೆ ಉತ್ತರ ಪ್ರದೇಶದ ಆಟಗಾರ ಯಶ್ ದಯಾಳ್ ಅತೀ ಮುಖ್ಯರಾಗಿ ಬಿಟ್ಟಿದ್ದಾರೆ. ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಪ್ರಶ್ನೆಗಳೆದಿದ್ದು, ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಆರ್​ಸಿಬಿ ನಿಲುವನ್ನು ಪ್ರಶ್ನಿಸಿದ್ದಾರೆ.

Published On - 10:10 am, Sun, 16 November 25