IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

Updated on: Jan 22, 2026 | 8:31 AM

IPL 2026 RCB: ಐಪಿಎಲ್ 2025ರ ಬಳಿಕ ನಡೆದ ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳ ಆಯೋಜನೆಗೆ ನಿಷೇಧ ಹೇರಿದ್ದರು. ಇದೀಗ ನಿಷೇಧ ತೆರವುಗೊಳಿಸಿದರೂ ಆರ್​ಸಿಬಿ ಬೆಂಗಳೂರಿನಲ್ಲಿ ಪಂದ್ಯವಾಡಲು ಹಿಂಜರಿಯುತ್ತಿದೆ.

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಿ ಕಣಕ್ಕಿಳಿಯಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿಷೇಧ ತೆರವಾದರೂ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಮನಸ್ಸು ಮಾಡುತ್ತಿಲ್ಲ.

2 / 6
ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಾಜ್ಯ ಸರ್ಕಾರ ಮುಂದಿಟ್ಟಿರುವ ಕೆಲ ಷರತ್ತುಗಳು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇಲ್ಲಿ ನೀಡಲಾದ ಕೆಲ ಷರತ್ತುಗಳೇ ಆರ್​ಸಿಬಿ ಪಾಲಿಗೆ ತೊಡಕಾಗಿ ಪರಿಣಮಿಸಿದೆ.

3 / 6
ಬೆಂಗಳೂರಿನಲ್ಲಿ ಪಂದ್ಯವಾಡಲು ಅನುಮತಿ ನೀಡಿರುವ ಕರ್ನಾಟಕ ಸರ್ಕಾರ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕೆಂದು ತಿಳಿಸಿದೆ. ಇದರ ಜೊತೆಗೆ ಯಾವುದೇ ದುರ್ಘಟನೆಗಳು ನಡೆದರೂ ಅದಕ್ಕೆಲ್ಲಾ ನೀವೇ ಜವಾಬ್ದಾರರು ಎಂಬುದನ್ನು ಒತ್ತಿ ಹೇಳಿದ್ದಾರೆ.

4 / 6
ಅಂದರೆ ಪಂದ್ಯದ ದಿನದಂದು ಸ್ಟೇಡಿಯಂನ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಏನಾದರೂ ಸಂಭವಿಸಿದರೂ ಆರ್​ಸಿಬಿ ಫ್ರಾಂಚೈಸಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಇದೇ ಕಾರಣಕ್ಕೆ ಆರ್‌ಸಿಬಿ ಮಾಲೀಕರು ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

5 / 6
ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಕಡೆಯಿಂದ ಅಂತಿಮ ನಿರ್ಧಾರ ಬಂದಿಲ್ಲ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋಮ್ ಗ್ರೌಂಡ್ ಯಾವುದೆಂದು ತಿಳಿಸಲು ಜನವರಿ 27 ರವರೆಗೆ ಗಡುವು ನೀಡಲಾಗಿದೆ. ಹೀಗಾಗಿ ಮಂಗಳವಾರದೊಳಗೆ ಆರ್​ಸಿಬಿ ಎಲ್ಲಿ ಕಣಕ್ಕಿಳಿಯಲಿದೆ ಎಂಬುದು ನಿರ್ಧಾರವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾರೆ. 

6 / 6
ಅದರಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿಯೇ ಕಣಕ್ಕಿಳಿಯಲಿದೆಯಾ ಅಥವಾ ಬೇರೆ ಮೈದಾನವನ್ನು ಹೋಮ್ ಗ್ರೌಂಡ್ ಆಗಿ ಆಯ್ಕೆ ಮಾಡಿಕೊಳ್ಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.