IPL 2026: ಐಪಿಎಲ್ ನಿಯಮ… RCB ಈ ಇಬ್ಬರನ್ನು ಬಿಡುಗಡೆ ಮಾಡಲೇಬೇಕು!

Updated on: Aug 26, 2025 | 8:30 AM

IPL 2026: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ ಬಹುತೇಕ ಪ್ಲೇಯರ್ಸ್ ಮುಂದಿನ ಸೀಸನ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಎಲ್ 2026 ರ ಮಿನಿ ಹರಾಜಿಗೂ ಮುನ್ನ ಆರ್​ಸಿಬಿ ಕೆಲವೇ ಕೆಲವು ಆಟಗಾರರನ್ನು ಮಾತ್ರ ರಿಲೀಸ್ ಮಾಡಲಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಬಹುತೇಕ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇಬ್ಬರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

2 / 5
ಐಪಿಎಲ್ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್​ನನ್ನು ಮುಂದಿನ ಸೀಸನ್​ಗೆ ರಿಟೈನ್ ಮಾಡಿಕೊಳ್ಳಬಹುದು. ಆದರೆ ತಾತ್ಕಾಲಿಕ ಬದಲಿಯಾಗಿ ಆಯ್ಕೆಯಾದ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾವಿರುವುದಿಲ್ಲ.

3 / 5
ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿಯಾಗಿ ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದರು. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆ ಐಪಿಎಲ್ 2025 ಅನ್ನು ಕೆಲ ವಾರ ಮುಂದೂಡಲಾಗಿತ್ತು. ಹೀಗಾಗಿ ಅಂತಿಮ ಪಂದ್ಯಗಳಿಗೆ ಜೇಕಬ್ ಬೆಥೆಲ್ ಹಾಗೂ ಲುಂಗಿ ಎನ್​ಗಿಡಿ ಅಲಭ್ಯರಾಗಿದ್ದರು.  ಇದೇ ವೇಳೆ ಆರ್​ಸಿಬಿ ಇಬ್ಬರನ್ನು ತಾತ್ಕಾಲಿಕ ಬದಲಿಯಾಗಿ ಆಯ್ಕೆ ಮಾಡಿಕೊಂಡಿದ್ದರು. ಅವರೆಂದರೆ...

4 / 5
ಬ್ಲೆಸಿಂಗ್ ಮುಝರಬಾನಿ: ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆರ್​ಸಿಬಿಯ ಕೊನೆಯ ಎರಡು ಪಂದ್ಯಗಳ ವೇಳೆ ತಂಡದಲ್ಲಿ ಕಾಣಿಸಿಕೊಂಡಿದ್ದರು. ಲುಂಗಿ ಎನ್​ಗಿಡಿ ಅವರ ಬದಲಿಗೆ ಆಯ್ಕೆಯಾಗಿದ್ದ ಬ್ಲೆಸಿಂಗ್ ಮುಝರಬಾನಿಯನ್ನು ಮುಂದಿನ ಸೀಸನ್​ಗಾಗಿ ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಮುಝರಬಾನಿ ಆರ್​ಸಿಬಿ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದರು.

5 / 5
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ರಿಟೈನ್ ಮಾಡಿಕೊಳ್ಳುವಂತಿಲ್ಲ.  ಹೀಗಾಗಿ ಈ ಇಬ್ಬರು ಆಟಗಾರರು ಆರ್​ಸಿಬಿ ತಂಡದ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದಿಲ್ಲ.