IPL 2026: ಕೊನೆಗೂ RCB ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

Updated on: Dec 14, 2025 | 10:09 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಇತ್ತೀಗಷ್ಟೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಬೆಂಗಳೂರಿನಲ್ಲಿ ಪಂದ್ಯವನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನೂ ತಿಂಗಳುಗಳು ಮಾತ್ರ ಬಾಕಿಯಿವೆ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧವನ್ನು ತೆರವುಗೊಳಿಸುವಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಇದರೊಂದಿಗೆ ಆರ್​ಸಿಬಿ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿರುವುದು ಕೂಡ ಖಚಿತವಾಗಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನೂ ತಿಂಗಳುಗಳು ಮಾತ್ರ ಬಾಕಿಯಿವೆ. ಅದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ ಮೇಲಿನ ನಿಷೇಧವನ್ನು ತೆರವುಗೊಳಿಸುವಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಇದರೊಂದಿಗೆ ಆರ್​ಸಿಬಿ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿರುವುದು ಕೂಡ ಖಚಿತವಾಗಿದೆ.

2 / 6

ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ಶೀಘ್ರದಲ್ಲೇ ಬೆಂಗಳೂರು ಮೈದಾನದಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಮರಳಲಿದೆ. ಅಲ್ಲದೆ ಮಾರ್ಚ್​​ನಿಂದ ಶುರುವಾಗಲಿರುವ ಐಪಿಎಲ್​ ಪಂದ್ಯಗಳು ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

3 / 6

ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ ಹಲವಾರು ಮಂದಿ ಗಾಯಗೊಂಡಿದ್ದರು. ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

4 / 6

ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಅಲ್ಲದೆ ಜಾನ್ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗವು ಚಿನ್ನಸ್ವಾಮಿ ಸ್ಟೇಡಿಯಂ ಪಂದ್ಯಗಳ ಆಯೋಜನೆಗೆ ಕೆಲ ಸಲಹೆಗಳನ್ನು ಶಿಫಾರಸ್ಸು ಮಾಡಿದ್ದರು.

5 / 6

ಇದೀಗ ಕೆಎಸ್​ಸಿಎಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟೀಮ್ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಸಮಿತಿಯು, ಸರ್ಕಾರ ಸೂಚಿಸಿದ ಸಲಹೆಗಳನ್ನು ಪಾಲಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದಿಂದಲೂ ಚಿನ್ನಸ್ವಾಮಿ ಸ್ಟೇಡಿಯಂಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

6 / 6

ಅದರಂತೆ ಶೀಘ್ರದಲ್ಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಮರಳಲಿದೆ. ಅದರಲ್ಲೂ ಮುಂಬರುವ ವಿಜಯ ಹಝಾರೆ ಟೂರ್ನಿಯ ಕೆಲ ಪಂದ್ಯಗಳನ್ನು ಆಯೋಜಿಸಲು ಕೆಎಸ್​ಸಿಎ ಉತ್ಸುಕವಾಗಿದೆ. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕ್ರಿಕೆಟ್ ಮರಳಿ ತರಲು ಸಿದ್ಧತೆಗಳನ್ನು ಶುರು ಮಾಡಿದ್ದಾರೆ. ಇದರೊಂದಿಗೆ ಮುಂಬರುವ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದು ಸಹ ಖಚಿತವಾಗಿದೆ.

Published On - 10:08 am, Sun, 14 December 25

Loading...
Unable to load recommendations.
Follow Us