AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದ ಪ್ಲೇಆಫ್ ಲೆಕ್ಕಾಚಾರ ಹೀಗಿದೆ

IPL 2026 RCB playoff scenarios: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡ ಸೋತಿರುವುದು ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ನಿರೀಕ್ಷೆಯಿದೆ.

ಝಾಹಿರ್ ಯೂಸುಫ್
|

Updated on: May 04, 2026 | 7:40 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗಾಗಲೇ ಬಹುತೇಕ ತಂಡಗಳು 9 ಮ್ಯಾಚ್​ಗಳನ್ನು ಆಡಿದೆ. ಇದಾಗ್ಯೂ ಯಾವುದೇ ತಂಡ ಪ್ಲೇಆಫ್​ಗೇರಿಲ್ಲ. ಅತ್ತ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ  ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. 

1 / 5
ಸದ್ಯದ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಆರ್‌ಸಿಬಿ, ಈ ಬಾರಿ ಕೂಡ ಪ್ಲೇಆಫ್ ಆಡುವುದು ಬಬುತೇಕ ಖಚಿತ. ಏಕೆಂದರೆ ಆರ್​ಸಿಬಿ ಮುಂದೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ 4 ಅಂಕಗಳನ್ನು ಪಡೆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಪ್ಲೇಆಫ್​ಗೇರಲಿದೆ.

2 / 5
ಏಕೆಂದರೆ ಆರ್​ಸಿಬಿ ತಂಡವು ಈಗಾಗಲೇ 9 ಪಂದ್ಯಗಳಿಂದ 12 ಅಂಕಗಳನ್ನು ಪಡೆದುಕೊಂಡಿದ್ದು, ಅದರ ಜೊತೆಗೆ  +1.420 ನೆಟ್ ರನ್ ರೇಟ್ ಹೊಂದಿದೆ. ಇದು ಇತರ ಎಲ್ಲಾ ತಂಡಗಳಿಗಿಂತ ಉತ್ತಮವಾಗಿದ್ದು, ಪ್ಲೇ-ಆಫ್ ರೇಸ್‌ನಲ್ಲಿ ಆರ್‌ಸಿಬಿಗೆ ದೊಡ್ಡ ರಕ್ಷಣಾ ಕವಚದಂತಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಸಮೀಕರಣ ಈ ಕೆಳಗಿನಂತಿದೆ...

3 / 5
ಕನಿಷ್ಠ ಗುರಿ: ಉಳಿದಿರುವ 5 ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆದ್ದರೆ ಆರ್‌ಸಿಬಿ 16 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇ-ಆಫ್ ಪ್ರವೇಶಿಸುವುದು ಖಚಿತವಾಗಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್​, ಪಂಜಾಬ್ ಕಿಂಗ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್​... ಈ ತಂಡಗಳ ವಿರುದ್ಧ ಪಂದ್ಯಗಳಲ್ಲಿ ಆರ್​ಸಿಬಿ 2 ಗೆಲುವು  ದಾಖಲಿಸಿದರೆ ಸಾಕು, ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

4 / 5
ಟಾಪ್-2 ಸ್ಥಾನದ ಗುರಿ: ಒಂದು ವೇಳೆ ಆರ್​ಸಿಬಿ ತಂಡವು ಉಳಿದ 5 ಪಂದ್ಯಗಳಲ್ಲಿ 3 ಅಥವಾ ಹೆಚ್ಚಿನ ಪಂದ್ಯಗಳನ್ನು ಗೆದ್ದರೆ, ತಂಡವು ಅಂಕಪಟ್ಟಿಯಲ್ಲಿ ಮೊದಲ ಅಥವಾ ಎರಡನೇ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇದರಿಂದ ಫೈನಲ್‌ಗೆ ಹೋಗಲು ತಂಡಕ್ಕೆ ಎರಡು ಅವಕಾಶಗಳು (Qualifiers) ಸಿಗಲಿವೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ ಐದು ಪಂದ್ಯಗಳಲ್ಲಿ ಕನಿಷ್ಠ 3 ಮ್ಯಾಚ್​ಗಳನ್ನು ಗೆಲ್ಲಲು ಪ್ಲ್ಯಾನ್ ರೂಪಿಸಲಿದೆ. 

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ