AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದಿಂದ 6 ಆಟಗಾರರಿಗೆ ಗೇಟ್ ಪಾಸ್ ಖಚಿತ

IPL 2026: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ 16 ಪ್ಲೇಯರ್ಸ್ ಮುಂದಿನ ಸೀಸನ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಎಲ್ 2026 ರ ಮಿನಿ ಹರಾಜಿಗೂ ಮುನ್ನ ಆರ್​ಸಿಬಿ ಕೆಲವೇ ಕೆಲವು ಆಟಗಾರರನ್ನು ಮಾತ್ರ ರಿಲೀಸ್ ಮಾಡಲಿದೆ.

ಝಾಹಿರ್ ಯೂಸುಫ್
|

Updated on: Jun 10, 2025 | 8:54 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಂತೆ ಆರ್​ಸಿಬಿ ಫ್ರಾಂಚೈಸಿ ಮಿನಿ ಹರಾಜಿಗೂ ಮುನ್ನ ರಿಲೀಸ್ ಮಾಡುವ ಆಟಗಾರರು ಯಾರೆಂದು ನೋಡುವುದಾದರೆ...

1 / 8
ಲಿಯಾಮ್ ಲಿವಿಂಗ್​ಸ್ಟೋನ್: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಮುಂದಿನ ಸೀಸನ್​ಗೆ ತಂಡದಲ್ಲಿ ಉಳಿಸಿಕೊಳ್ಳುವುದು ಡೌಟ್. ಏಕೆಂಧರೆ 10 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಲಿವಿಂಗ್​ಸ್ಟೋನ್ ಈ ಬಾರಿ ಕಲೆಹಾಕಿರುವುದು ಕೇವಲ 54 ರನ್​ಗಳು ಮಾತ್ರ. ಹಾಗೆಯೇ 5 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಕಬಳಿಸಿದ್ದು 2 ವಿಕೆಟ್ ಮಾತ್ರ. ಹೀಗಾಗಿ ಲಿವಿಂಗ್​ಸ್ಟೋನ್​ಗೆ ತಂಡದಿಂದ ಗೇಟ್ ಪಾಸ್ ಸಿಗೋದು ಖಚಿತ ಎನ್ನಬಹುದು.

2 / 8
ರಾಸಿಖ್ ಸಲಾಂ ದಾರ್: ಜಮ್ಮು ಕಾಶ್ಮೀರ ಯುವ ವೇಗಿ ರಾಸಿಖ್ ಸಲಾಂ ದಾರ್ ಅವರನ್ನು ಆರ್​ಸಿಬಿ ಫ್ರಾಂಚೈಸಿ 6 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ಕಣಕ್ಕಿಳಿದ 2 ಪಂದ್ಯಗಳಲ್ಲಿ ರಾಸಿಖ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅಲ್ಲದೆ ಕೇವಲ 1 ವಿಕೆಟ್ ಮಾತ್ರ ಕಬಳಿಸಿದ್ದಾರೆ. ಅತ್ತ ಮಿನಿ ಹರಾಜಿಗೆ ಪರ್ಸ್ ಮೊತ್ತ ಹೆಚ್ಚಿಸಲು ರಾಸಿಖ್ ಅವರನ್ನು ಸಹ ಆರ್​ಸಿಬಿ ಕೈ ಬಿಡಲಿದೆ ಎನ್ನಬಹುದು.

3 / 8
ಅಭಿನಂದನ್ ಸಿಂಗ್: ಈ ಬಾರಿಯ ಐಪಿಎಲ್​ನಲ್ಲಿ ಅಭಿನಂದನ್ ಸಿಂಗ್ ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡಿಲ್ಲ. ಅದರಲ್ಲೂ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಮುಂಬರುವ ಸೀಸನ್​ಗಾಗಿ ಅಭಿನಂದನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

4 / 8
ಮೋಹಿತ್ ರಾಥಿ: ಆರ್​ಸಿಬಿ ತಂಡದಲ್ಲಿರುವ ಯುವ ಆಲ್​ರೌಂಡರ್ ಮೋಹಿತ್ ರಾಥಿ ಕೂಡ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅತ್ತ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಮೋಹಿತ್​ಗೆ ಸ್ಥಾನ ಲಭಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಅವರನ್ನು ಸಹ ತಂಡದಿಂದ ಕೈ ಬಿಡಲಿದ್ದಾರೆ.

5 / 8
ಬ್ಲೆಸಿಂಗ್ ಮುಝರಬಾನಿ: ಐಪಿಎಲ್​ನ ಕೊನೆಯ ಎರಡು ಪಂದ್ಯಗಳ ವೇಳೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಸಹ ಕೈ ಬಿಡಲಿದ್ದಾರೆ. ಏಕೆಂದರೆ ಮುಝರಬಾನಿ ಅವರನ್ನು ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

6 / 8
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

7 / 8
ಈ 6 ಆಟಗಾರರನ್ನು ಕೈ ಬಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಉಳಿದೆಲ್ಲಾ ಆಟಗಾರರು ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು, ಹೀಗಾಗಿ ಚಾಂಪಿಯನ್ ಪಡೆಯನ್ನು ಮುಂದಿನ ಸೀಸನ್​ಗೂ ಮುಂದುವರೆಸುವ ಸಾಧ್ಯತೆಯಿದೆ.

8 / 8
Follow us
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!

ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ

ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್

ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ

ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ

ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!

ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ

ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!