AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ಬಿಡುಗಡೆ ಮಾಡಲಿರುವ ಸಂಭವನೀಯ ಆಟಗಾರರ ಪಟ್ಟಿ ಇಲ್ಲಿದೆ

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ರ ಮಿನಿ ಹರಾಜು ಡಿಸೆಂಬರ್​ ತಿಂಗಳಲ್ಲಿ ನಡೆಯುವುದು ಖಚಿತವಾಗಿದೆ. ಅದಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಹಾಗೂ ರಿಲೀಸ್ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಇತ್ತ ಹಾಲಿ ಚಾಂಪಿಯನ್ ಆರ್​ಸಿಬಿ ತಂಡದಿಂದಲೂ ಕೆಲ ಆಟಗಾರರು ಈ ಬಾರಿ ಹೊರಬೀಳುವುದು ಬಹುತೇಕ ಖಚಿತ.

ಝಾಹಿರ್ ಯೂಸುಫ್
|

Updated on:Oct 11, 2025 | 8:24 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ರಲ್ಲಿ (IPL 2025) ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂದಿನ ಸೀಸನ್​ಗೂ ಮುನ್ನ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಂತೆ ಆರ್​ಸಿಬಿ ಫ್ರಾಂಚೈಸಿ ಮಿನಿ ಹರಾಜಿಗೂ ಮುನ್ನ ರಿಲೀಸ್ ಮಾಡುವ ಆಟಗಾರರು ಯಾರೆಂದು ನೋಡುವುದಾದರೆ...

1 / 8
ಲಿಯಾಮ್ ಲಿವಿಂಗ್​ಸ್ಟೋನ್: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಮುಂದಿನ ಸೀಸನ್​ಗೆ ತಂಡದಲ್ಲಿ ಉಳಿಸಿಕೊಳ್ಳುವುದು ಡೌಟ್. ಏಕೆಂಧರೆ 10 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಲಿವಿಂಗ್​ಸ್ಟೋನ್ ಈ ಬಾರಿ ಕಲೆಹಾಕಿರುವುದು ಕೇವಲ 54 ರನ್​ಗಳು ಮಾತ್ರ. ಹಾಗೆಯೇ 5 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಕಬಳಿಸಿದ್ದು 2 ವಿಕೆಟ್ ಮಾತ್ರ. ಹೀಗಾಗಿ ಲಿವಿಂಗ್​ಸ್ಟೋನ್​ಗೆ ತಂಡದಿಂದ ಗೇಟ್ ಪಾಸ್ ಸಿಗೋದು ಖಚಿತ ಎನ್ನಬಹುದು.

2 / 8
ರಾಸಿಖ್ ಸಲಾಂ ದಾರ್: ಜಮ್ಮು ಕಾಶ್ಮೀರ ಯುವ ವೇಗಿ ರಾಸಿಖ್ ಸಲಾಂ ದಾರ್ ಅವರನ್ನು ಆರ್​ಸಿಬಿ ಫ್ರಾಂಚೈಸಿ 6 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ಕಣಕ್ಕಿಳಿದ 2 ಪಂದ್ಯಗಳಲ್ಲಿ ರಾಸಿಖ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅಲ್ಲದೆ ಕೇವಲ 1 ವಿಕೆಟ್ ಮಾತ್ರ ಕಬಳಿಸಿದ್ದಾರೆ. ಅತ್ತ ಮಿನಿ ಹರಾಜಿಗೆ ಪರ್ಸ್ ಮೊತ್ತ ಹೆಚ್ಚಿಸಲು ರಾಸಿಖ್ ಅವರನ್ನು ಸಹ ಆರ್​ಸಿಬಿ ಕೈ ಬಿಡಲಿದೆ ಎನ್ನಬಹುದು.

3 / 8
ಅಭಿನಂದನ್ ಸಿಂಗ್: ಈ ಬಾರಿಯ ಐಪಿಎಲ್​ನಲ್ಲಿ ಅಭಿನಂದನ್ ಸಿಂಗ್ ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡಿಲ್ಲ. ಅದರಲ್ಲೂ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಮುಂಬರುವ ಸೀಸನ್​ಗಾಗಿ ಅಭಿನಂದನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

4 / 8
ಮೋಹಿತ್ ರಾಥಿ: ಆರ್​ಸಿಬಿ ತಂಡದಲ್ಲಿರುವ ಯುವ ಆಲ್​ರೌಂಡರ್ ಮೋಹಿತ್ ರಾಥಿ ಕೂಡ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅತ್ತ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಮೋಹಿತ್​ಗೆ ಸ್ಥಾನ ಲಭಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಅವರನ್ನು ಸಹ ತಂಡದಿಂದ ಕೈ ಬಿಡಲಿದ್ದಾರೆ.

5 / 8
ಬ್ಲೆಸಿಂಗ್ ಮುಝರಬಾನಿ: ಐಪಿಎಲ್​ನ ಕೊನೆಯ ಎರಡು ಪಂದ್ಯಗಳ ವೇಳೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಸಹ ಕೈ ಬಿಡಲಿದ್ದಾರೆ. ಏಕೆಂದರೆ ಮುಝರಬಾನಿ ಅವರನ್ನು ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

6 / 8
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

7 / 8
ಈ 6 ಆಟಗಾರರನ್ನು ಕೈ ಬಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಉಳಿದೆಲ್ಲಾ ಆಟಗಾರರು ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು, ಹೀಗಾಗಿ ಚಾಂಪಿಯನ್ ಪಡೆಯನ್ನು ಮುಂದಿನ ಸೀಸನ್​ಗೂ ಮುಂದುವರೆಸುವ ಸಾಧ್ಯತೆಯಿದೆ.

8 / 8

Published On - 8:23 am, Sat, 11 October 25

ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ

ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು

ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ

ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ