AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ರಿಲೀಸ್ ಮಾಡಿದ ಆಟಗಾರರ ಪಟ್ಟಿ ಇಲ್ಲಿದೆ

IPL 2026: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರು ಕಾಣಿಸಿಕೊಂಡಿದ್ದರು. ಈ 22 ಆಟಗಾರರಲ್ಲಿ ಬಹುತೇಕ ಪ್ಲೇಯರ್ಸ್ ಅನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇದಾಗ್ಯೂ ಕೆಲ ಆಟಗಾರರನ್ನು ರಿಲೀಸ್ ಮಾಡಿದ್ದಾರೆ. ಹೀಗೆ ಆರ್​ಸಿಬಿ ತಂಡದಿಂದ ಹೊರಬಿದ್ದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Nov 15, 2025 | 5:25 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 8 ಆಟಗಾರರನ್ನು ಬಿಡುಗಡೆ ಮಾಡಿದ್ದಾರೆ. ಕಳೆದ ಸೀಸನ್​​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕೆಲ ಆಟಗಾರರಿಗೆ ಆರ್​​ಸಿಬಿ ಗೇಟ್ ಪಾಸ್ ನೀಡಿದೆ.

1 / 10
ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಟ್ಟು 22 ಆಟಗಾರರು ಕಾಣಿಸಿಕೊಂಡಿದ್ದರು. ಅಲ್ಲದೆ ಮೂವರು ಬದಲಿ ಆಟಗಾರರಾಗಿ ಎಂಟ್ರಿ ಕೊಟ್ಟಿದ್ದರು. ಇದೀಗ ಈ 25 ಆಟಗಾರರಲ್ಲಿ ಆರ್​ಸಿಬಿ ಫ್ರಾಂಚೈಸಿ 17 ಆಟಗಾರರನ್ನು ಮಾತ್ರ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಿಂದ ಬಿಡುಗಡೆಯಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 10
ಲಿಯಾಮ್ ಲಿವಿಂಗ್​ಸ್ಟೋನ್: ಐಪಿಎಲ್​ 2025 ರಲ್ಲಿ ಆರ್​ಸಿಬಿ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡ ಲಿಯಾಮ್ ಲಿವಿಂಗ್​ಸ್ಟೋನ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಒಟ್ಟು  10 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಲಿವಿಂಗ್​ಸ್ಟೋನ್ ಕೇವಲ 112 ರನ್​ ಮಾತ್ರ ಕಲೆಹಾಕಿದ್ದರು. ಅಲ್ಲದೆ 5 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಕಬಳಿಸಿದ್ದು 2 ವಿಕೆಟ್ ಮಾತ್ರ. ಹೀಗಾಗಿಯೇ ಆರ್​ಸಿಬಿ ಲಿಯಾಮ್ ಲಿವಿಂಗ್​ಸ್ಟೋನ್​ ಅವರನ್ನು ತಂಡದಿಂದ ಬಿಡುಗಡೆ ಮಾಡಿದ್ದಾರೆ.

3 / 10
ಮಯಾಂಕ್ ಅಗರ್ವಾಲ್: ಐಪಿಎಲ್ 2025 ರಲ್ಲಿ ದೇವದತ್ ಪಡಿಕ್ಕಲ್ ಗಾಯಗೊಂಡಾಗ ಮಯಾಂಕ್ ಅಗರ್ವಾಲ್ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಅದರಂತೆ ಕಳೆದ ಸೀಸನ್​ನಲ್ಲಿ 4 ಪಂದ್ಯಗಳನ್ನಾಡಿದ್ದ ಮಯಾಂಕ್ ಅವರನ್ನೂ ಸಹ ಆರ್​ಸಿಬಿ ರಿಲೀಸ್ ಮಾಡಿದೆ.

4 / 10
ಬ್ಲೆಸಿಂಗ್ ಮುಝರಬಾನಿ: ಐಪಿಎಲ್​ನ ಕೊನೆಯ ಎರಡು ಪಂದ್ಯಗಳ ವೇಳೆ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಸಹ ಕೈ ಬಿಟ್ಟಿದ್ದಾರೆ. ಏಕೆಂದರೆ ಮುಝರಬಾನಿ ಅವರನ್ನು ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ.

5 / 10
ಟಿಮ್ ಸೈಫರ್ಟ್​: ಜೇಕಬ್ ಬೆಥೆಲ್ ತವರಿಗೆ ಹಿಂತಿರುಗಿದ ಕಾರಣ ಆರ್​ಸಿಬಿ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಟಿಮ್ ಸೈಫರ್ಟ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿತ್ತು. ಆದರೆ ತಾತ್ಕಾಲಿಕ ಬದಲಿ ಆಟಗಾರನಾಗಿ ಆಯ್ಕೆಯಾಗಿರುವ ಸೈಫರ್ಟ್ ಅವರನ್ನು ಸಹ ತಂಡದಲ್ಲಿ ಉಳಿಸಿಕೊಳ್ಳುವಂತಿಲ್ಲ. ಹೀಗಾಗಿ ಟಿಮ್ ಸೈಫರ್ಟ್ ಅವರನ್ನು ಸಹ ಆರ್​ಸಿಬಿ ಬಿಡುಗಡೆ ಮಾಡಿದೆ.

6 / 10
ಮೋಹಿತ್ ರಾಥಿ: ಆರ್​ಸಿಬಿ ತಂಡದಲ್ಲಿರುವ ಯುವ ಆಲ್​ರೌಂಡರ್ ಮೋಹಿತ್ ರಾಥಿ ಕೂಡ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅತ್ತ ಇಂಪ್ಯಾಕ್ಟ್ ಸಬ್ ಪಟ್ಟಿಯಲ್ಲೂ ಮೋಹಿತ್​ಗೆ ಸ್ಥಾನ ಲಭಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಅವರನ್ನು ಸಹ ತಂಡದಿಂದ ಕೈ ಬಿಟ್ಟಿದ್ದಾರೆ.

7 / 10
ಮನೋಜ್ ಭಾಂಡಗೆ: ಆರ್​ಸಿಬಿ ತಂಡದಲ್ಲಿದ್ದ ಕರ್ನಾಟಕದ ಯುವ ಆಲ್​​ರೌಂಡರ್ ಮನೋಜ್ ಭಾಂಡಗೆ ಅವರನ್ನು ಸಹ ಮುಂದಿನ ಸೀಸನ್​​ಗಾಗಿ ತಂಡದಲ್ಲಿ ಉಳಿಸಿಕೊಂಡಿಲ್ಲ. ಕಳೆದ ಸೀಸನ್​​ನಲ್ಲಿ ಆರ್​ಸಿಬಿ ಪರ ಮೊನೋಜ್ ಒಂದು ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರನ್ನು ರಿಟೈನ್ ಮಾಡಿಕೊಂಡಿಲ್ಲ.

8 / 10
ಸ್ವಸ್ತಿಕ್ ಚಿಕಾರ: ಐಪಿಎಲ್ 2025 ರಲ್ಲಿ ಆರ್​​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಸ್ವಸ್ತಿಕ್ ಚಿಕಾರ ಅವರನ್ನು ಸಹ ರಿಟೈನ್ ಮಾಡಿಕೊಂಡಿಲ್ಲ. ಸ್ಫೋಟಕ ದಾಂಡಿಗನಾಗಿ ಗುರುತಿಸಿಕೊಂಡಿರುವ ಸ್ವಸ್ತಿಕ್​​ಗೆ ಕಳೆದ ಸೀಸನ್​​ನಲ್ಲಿ ಒಂದು ಒಂದು ಮ್ಯಾಚ್​​ನಲ್ಲಿ ಚಾನ್ಸ್ ಸಿಕ್ಕಿರಲಿಲ್ಲ. ಇದೀಗ ಆರ್​ಸಿಬಿ ಫ್ರಾಂಚೈಸಿ ಅವರನ್ನು ಸಹ ತಂಡದಿಂದ ಕೈ ಬಿಟ್ಟಿದ್ದಾರೆ.

9 / 10
ಲುಂಗಿ ಎನ್​ಗಿಡಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಳೆದ ಸೀಸನ್​ನಲ್ಲಿ 2 ಮ್ಯಾಚ್ ಆಡಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ಅವರನ್ನು ಸಹ ರಿಲೀಸ್ ಮಾಡಲಾಗಿದೆ. ಲುಂಗಿ ಎನ್​ಗಿಡಿ ಐಪಿಎಲ್ 2025 ರಲ್ಲಿ 2 ಪಂದ್ಯಗಳಿಂದ 4 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಆರ್​ಸಿಬಿ ಅವರನ್ನು ತಂಡದಿಂದ ಕೈ ಬಿಟ್ಟಿದೆ.

10 / 10

Published On - 5:24 pm, Sat, 15 November 25

ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ

ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ

ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ

ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು

ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್

ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!