AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಕಠಿಣ ನಿಯಮ ಜಾರಿಗೂ ಮುನ್ನ RCB ತಂಡ ಮಾರಾಟ?

Royal Challengers Bengaluru (RCB): ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಒಂದು ವಾರದಿಂದ ಸದಾ ಸುದ್ದಿಯಲ್ಲಿದೆ. ಇದಕ್ಕೆ ಒಂದು ಕಾರಣ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಪ್ರಕರಣ. ಇದರ ನಡುವೆ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಚಾರವೊಂದು ಬಹಿರಂಗವಾಗಿದೆ.

ಝಾಹಿರ್ ಯೂಸುಫ್
|

Updated on:Jun 10, 2025 | 2:16 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಕಠಿಣ ನಿಯಮವೊಂದು ಜಾರಿಯಾಗುವ ಸಾಧ್ಯತೆಯಿದೆ. ಈ ನಿಯಮ ಜಾರಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಅದಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಸಮಾಲೋಚಿಸಿದೆ ಎಂದು ವರದಿಯಾಗಿದೆ.

1 / 5
ಅಷ್ಟಕ್ಕೂ ಐಪಿಎಲ್​ನಲ್ಲಿ ಜಾರಿಯಾಗಲಿರುವ ಹೊಸ ನಿಯಮವೆಂದರೆ... ತಂಬಾಕು ಮತ್ತು ಆಲ್ಕೋಹಾಲ್ ಬ್ರ್ಯಾಂಡ್​​ಗಳ ಜಾಹೀರಾತು ನಿಷೇಧ. ಅಂದರೆ ಟೂರ್ನಿಯಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತಿನ ಪ್ರಚಾರ ನಿಷೇಧಿಸಲು ಆರೋಗ್ಯ ಸಚಿವಾಲಯ ಚಿಂತಿಸುತ್ತಿದೆ. ಈ ನಿಯಮ ಜಾರಿಯಾದರೆ ಆರ್​ಸಿಬಿ ತಂಡಕ್ಕೆ ಸಮಸ್ಯೆ ಎದುರಾಗಲಿದೆ.

2 / 5
ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇತ್ತ ಐಪಿಎಲ್​ನಲ್ಲಿ ಅನಾರೋಗ್ಯಕರ ವಸ್ತುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರ ಮಾಡದಂತಹ ನಿಯಮವನ್ನು ಜಾರಿಗೆ ತರುವ ಬಗ್ಗೆ ಚಿಂತಿಸಲಾಗಿದೆ.

3 / 5
ಈ ನಿಯಮ ಜಾರಿಯಾದರೆ, ಆರ್​ಸಿಬಿ ಫ್ರಾಂಚೈಸಿಯು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಏಕೆಂದರೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವುದು ಆಲ್ಕೋಹಾಲ್ ಕಂಪೆನಿಯ ಒಡೆತನದಲ್ಲಿ. ಇದೇ ಕಾರಣದಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ಷೇರು ಮಾರಾಟ ಮಾಡಲು ಅಥವಾ ಸಂಪೂರ್ಣ ಫ್ರಾಂಚೈಸಿಯನ್ನು ಸೇಲ್ ಮಾಡಲು ಚರ್ಚಿಸಿದೆ ಎಂದು ವರದಿಯಾಗಿದೆ.

4 / 5
ಪ್ರಸ್ತುತ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್. ಅಂದರೆ ಭಾರತೀಯ ರೂಪಾಯಿ ಮೌಲ್ಯ ಬರೋಬ್ಬರಿ 17 ಸಾವಿರ ಕೋಟಿ ರೂ. ಈ ಮೊತ್ತಕ್ಕೆ ಆರ್​ಸಿಬಿ ತಂಡವನ್ನು ಖರೀದಿಸಲು ಯಾರಾದರೂ ಮುಂದಾದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಪಾಲಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 5

Published On - 1:54 pm, Tue, 10 June 25

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ

ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?

ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​

ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!

ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು

ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ

ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು

ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು

ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ