ವೈಭವ್, ಯಶಸ್ವಿ ಸಿಡಿಲಬ್ಬರದ ನಡುವೆ RCB ದಾಖಲೆ ಸೇಫ್

Updated on: Apr 08, 2026 | 7:34 AM

Vaibhav Suryavanshi & Yashasvi Jaiswal: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 14 ಎಸೆತಗಳಲ್ಲಿ 39 ರನ್ ಬಾರಿಸಿದರೆ, ಯಶಸ್ವಿ ಜೈಸ್ವಾಲ್ ಕೇವಲ 32 ಎಸೆತಗಳಲ್ಲಿ 77 ರನ್ ಚಚ್ಚಿದ್ದರು. ಈ ಇಬ್ಬರು ಯುವ ದಾಂಡಿಗರ ಸಿಡಿಲಬ್ಬರದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಕ್ಕಿಸಿಕೊಂಡಿದೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಹಾಗೂ ಯಶಸ್ವಿ ಜೈಸ್ವಾಲ್ (Yashasvi Jaiswal) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗುವಾಹಟಿಯ ಬರ್ಸಪರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.

2 / 5
ಮಳೆಯ ಕಾರಣ 11 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ವಿಸ್ಫೋಟಕ ಆರಂಭ ಒದಗಿಸಿದ್ದರು.

3 / 5
ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಯುವ ಜೋಡಿ ಮೂರು ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 58 ರನ್​ಗಳು. ಇತ್ತ 18 ಎಸೆತಗಳಲ್ಲಿ 58 ರನ್ ಬಾರಿಸಿದರೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ದಾಖಲೆ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

4 / 5
ಅಂದರೆ ಐಪಿಎಲ್ ಇತಿಹಾಸದಲ್ಲಿ ಮೊದಲ ಮೂರು ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಆರ್​ಸಿಬಿ ತಂಡದ ಹೆಸರಿನಲ್ಲಿದೆ. 2011 ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್ ಗೇಲ್ ಹಾಗೂ ತಿಲಕರತ್ನೆ ದಿಲ್ಶಾನ್ ಕೇವಲ 3 ಓವರ್​ಗಳಲ್ಲಿ 66 ರನ್ ಬಾರಿಸಿದ್ದರು. ಇದು ಐಪಿಎಲ್ ಇತಿಹಾಸದಲ್ಲಿ ಮೊದಲ 3 ಓವರ್​ಗಳಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್.

5 / 5
ಇತ್ತ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ 3 ಓವರ್​ಗಳಲ್ಲಿ 58 ರನ್​ ಗಳಿಸಲಷ್ಟೇ ಶಕ್ತರಾದರು. ಇದಾಗ್ಯೂ ಈ ಸ್ಫೋಟಕ ಆರಂಭದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಈ ಪಂದ್ಯದಲ್ಲಿ ನಿಗದಿತ 11 ಓವರ್​ಗಳಲ್ಲಿ 150 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 11 ಓವರ್​ಗಳಲ್ಲಿ 123 ರನ್​ಗಳಿಸಿ 27 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

Follow Us