IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್?
IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಮ್ಯಾಚ್ನಲ್ಲಿ ಸೌತ್ ಡರ್ಬಿಯ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಆರ್ಸಿಬಿ ವಿರುದ್ಧ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.
Updated on:Mar 12, 2026 | 8:12 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.

ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.

ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮೊದಲ ಮ್ಯಾಚ್ನಲ್ಲೇ ಮುಖಾಮುಖಿಯಾಗಲಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ನಡೆದ ಐಪಿಎಲ್ ಗವರ್ನರ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಎರಡು ಫ್ರಾಂಚೈಸಿಗಳ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ತಿಳಿದು ಬಂದಿದೆ.

ಅದರಂತೆ ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುವುದು ಬಹುತೇಕ ಖಚಿತ. ಹಾಗೆಯೇ ಮೊದಲ ಎರಡು ದಿನಗಳಲ್ಲೇ ಆರ್ಸಿಬಿ, ಸಿಎಸ್ಕೆ, ಆರ್ಆರ್ ತಂಡಗಳ ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಈ ಸಮಯದಲ್ಲಿ ವಿಧಾನಸಭಾ ಚುನಾವಣೆಗಳ ನಿಮಿತ್ತ ಮೊದಲ ಹಂತದ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗುತ್ತಿದೆ. ಈ ರಾಜ್ಯ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.
Published On - 8:17 am, Wed, 11 March 26
